Karunadu Studio

ಕರ್ನಾಟಕ

MB Patil: 600 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ನೈಡೆಕ್ ನೂತನ ಘಟಕಕ್ಕೆ ಸಚಿವ ಎಂ.ಬಿ.ಪಾಟೀಲ್‌ ಚಾಲನೆ – Kannada News | MB Patil Minister MB Patil inaugurates new unit of Nidec costing Rs 600 crore


ಹುಬ್ಬಳ್ಳಿ/ಧಾರವಾಡ: ನೈಡೆಕ್ ಕಂಪನಿಯು 600 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಅಭಿವೃದ್ಧಿ ಪಡಿಸಿರುವ ನೂತನ ಘಟಕವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ (MB Patil)‌ ಸೋಮವಾರ ಉದ್ಘಾಟಿಸಿದರು. ಜಪಾನ್ ಮತ್ತು ಫ್ರೆಂಚ್ ತಂತ್ರಜ್ಞಾನದ ಸಂಯೋಗವಿರುವ ಈ ಘಟಕವು 800 ಜನರಿಗೆ ನೇರ ಉದ್ಯೋಗ ನೀಡಲಿದೆ. ಕಂಪನಿಯ ಬ್ಯಾಟರಿ ಸೊಲ್ಯೂಷನ್ ಸ್ಥಾವರಕ್ಕೆ 20 ಎಕರೆ ಭೂಮಿ ಕೊಡಲಾಗಿದೆ. ಇಲ್ಲಿ ತಯಾರಾಗುವ 2, 3 ಮತ್ತು 4 ಮೆಗಾವ್ಯಾಟ್ ಸಾಮರ್ಥ್ಯದ ಹೆವಿ ಡ್ಯೂಟಿ ಮಶೀನ್‌ಗಳು ಡೇಟಾ ಸೆಂಟರ್ ಉದ್ಯಮದ ಅಗತ್ಯ ಪೂರೈಸಲಿದೆ. ಈ ಸಾಧನಗಳನ್ನು ಅಮೆರಿಕ ಮತ್ತು ಯೂರೋಪ್‌ಗೆ ರಫ್ತು ಮಾಡಲಾಗುವುದು. ಘಟಕವು ಪೂರ್ಣ ಪ್ರಮಾಣದಲ್ಲಿ ಉತ್ಪಾದನೆ ಆರಂಭಿಸಿದರೆ 3,000 ಉದ್ಯೋಗಸೃಷ್ಟಿ ಆಗಲಿದೆ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.

ಧಾರವಾಡ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಈ ಕಾರ್ಖಾನೆ ಸ್ಥಾಪಿಸಲಾಗಿದೆ. ಈ ಘಟಕದಲ್ಲಿ ಡೇಟಾ ಸೆಂಟರ್ ಉದ್ಯಮಕ್ಕೆ ಬೇಕಾದ ಪವರ್ ಬ್ಯಾಕಪ್ ಜನರೇಟರ್, ವಿಂಡ್ ಜನರೇಟರ್, ಬ್ಯಾಟರಿ ಸ್ಟೋರೇಜ್, ವಿದ್ಯುತ್ ಚಾಲಿತ ದ್ವಿಚಕ್ರ, ತ್ರಿಚಕ್ರ ಮತ್ತು ಬಸ್ ಇವುಗಳಿಗೆ ಬೇಕಾದ ಸಾಧನಗಳನ್ನು ಉತ್ಪಾದಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ನಮ್ಮ ಸರ್ಕಾರವು ಉತ್ತರ ಕರ್ನಾಟಕದ ಭಾಗಗಳಲ್ಲೂ ಉದ್ದಿಮೆಗಳ ಸ್ಥಾಪನೆಗೆ ಒತ್ತು ನೀಡಿದೆ. ಇದಕ್ಕಾಗಿ ಹೊಸ ಕೈಗಾರಿಕಾ ನೀತಿಯಲ್ಲಿ ಹಲವು ರಿಯಾಯಿತಿ ಮತ್ತು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ನೈಡೆಕ್ ಕಂಪನಿಯ ಈ ಯೋಜನೆಗೆ ಕೇವಲ ಎರಡು ವರ್ಷಗಳಲ್ಲಿ ಭೂಮಿ ಮಂಜೂರು ಮಾಡಿ, ತ್ವರಿತವಾಗಿ ಅನುಷ್ಠಾನಕ್ಕೆ ಬರುವಂತೆ ಮಾಡಿದೆ ಎಂದು ಅವರು ತಿಳಿಸಿದ್ದಾರೆ.

ಕೃಷ್ಣಾ ನ್ಯಾಯಾಧಿಕರಣವು ಕೈಗಾರಿಕಾ ಅಗತ್ಯಗಳ ಬಳಕೆಗೆ 4 ಟಿಎಂಸಿ ನೀರನ್ನು ಮೀಸಲಿಟ್ಟಿದೆ. ಇದರಲ್ಲಿ ನಾವು ಇದುವರೆಗೆ ಕೇವಲ ಅರ್ಧ ಟಿಎಂಸಿ ನೀರನ್ನು ಮಾತ್ರ ಬಳಸಿಕೊಂಡಿದ್ದೇವೆ. ಇದರಲ್ಲಿ ಇನ್ನೂ 3.5 ಟಿಎಂಸಿ ನೀರು ಹಾಗೆಯೇ ಇದೆ. ಇದರಲ್ಲಿ ನಾವು ರೈತರ ಪಾಲಿನ ನೀರನ್ನೇನೂ ಮುಟ್ಟಿಲ್ಲ. ಹಿಡಕಲ್ ಜಲಾಶಯದ ಕೆಳಭಾಗದ ನೀರನ್ನಷ್ಟೇ ಬಳಸಿಕೊಂಡಿದ್ದೇವೆ. ಕೈಗಾರಿಕೆಗಳು ಬೆಳೆಯಬೇಕು ಎಂದರೆ ನೀರು ಅತ್ಯಗತ್ಯ ಎಂದು ಹೇಳಿದ್ದಾರೆ.

ಉದ್ದಿಮೆಗಳಿಗೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಾಗ ರೈತರಿಗೆ ತಕ್ಕ ಪರಿಹಾರ ಕೊಡಬೇಕಾಗುತ್ತದೆ. ನಾವು ಕೃಷಿ ಮತ್ತು ಕೈಗಾರಿಕೆ ಎರಡನ್ನೂ ಸರಿದೂಗಿಸಿಕೊಂಡು ಹೋಗಬೇಕಾದ ಅಗತ್ಯವಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | DK Shivakumar: ಬೆಂಗಳೂರು ದಕ್ಷಿಣ ಜಿಲ್ಲೆಗೆ ಹೇಮಾವತಿ ನೀರಿನ ಅಗತ್ಯವಿಲ್ಲ: ಡಿ.ಕೆ.ಶಿವಕುಮಾರ್

ಕಾರ್ಯಕ್ರಮದಲ್ಲಿ ಜಪಾನ್ ಕಾನ್ಸುಲ್ ಜನರಲ್ ನಕಾನೆ ಸುಟೋಮು, ಫ್ರಾನ್ಸ್ ಕಾನ್ಸುಲ್ ಜನರಲ್ ಮಾರ್ಕ್ ಲಾಮಿ, ಕಂಪನಿಯ ಹಿರಿಯ ಅಧಿಕಾರಿಗಳಾದ ಮೈಕೆಲ್ ಬ್ರಿಗ್ಸ್, ಗ್ರೆಗ್ ಗಾರ್ಮನ್, ಗಿರೀಶ್ ಕುಲಕರ್ಣಿ ಉಪಸ್ಥಿತರಿದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »