Karunadu Studio

ಕರ್ನಾಟಕ

Dhanraj S. Talampally: ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯಾಧ್ಯಕ್ಷರಾಗಿ ಧನರಾಜ್ ಎಸ್. ತಾಳಂಪಳ್ಳಿ ನೇಮಕ – Kannada News | Dhanraj S. Talampally has been appointed as the State President of the KPCC Cooperation wing


ಬೆಂಗಳೂರು: ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯಾಧ್ಯಕ್ಷರಾಗಿ ಧನರಾಜ್ ಎಸ್. ತಾಳಂಪಳ್ಳಿ ಅವರು ನೇಮಕವಾಗಿದ್ದಾರೆ. ಬೀದರ್‌ ಜಿಲ್ಲೆ ಬಸವಕಲ್ಯಾಣ ಕೆಪಿಸಿಸಿ ಸಹಕಾರಿ ವಿಭಾಗದ ಚೇರ್ಮನ್ ಆಗಿರುವ ಧನರಾಜ್ ಎಸ್. ತಾಳಂಪಳ್ಳಿ (Dhanraj S. Talampally) ಅವರನ್ನು ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಆದೇಶ ಹೊರಡಿಸಿದ್ದಾರೆ.

ಧನರಾಜ್ ಎಸ್. ತಾಳಂಪಳ್ಳಿ ಅವರು ತಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು ಕೆಪಿಸಿಸಿಯ ಮಾರ್ಗದರ್ಶನದಲ್ಲಿ ಮತ್ತು ರಾಜ್ಯದ ನಾಯಕರ ಸಹಕಾರದೊಂದಿಗೆ ಸಹಕಾರ ವಿಭಾಗದ ಸಂಘಟನೆ ಮತ್ತು ಆ ಮೂಲಕ ಪಕ್ಷದ ಬಲವರ್ಧನೆಯಲ್ಲಿ ಕಾರ್ಯೋನ್ಮುಖರಾಗಬೇಕು. ಈ ದಿಸೆಯಲ್ಲಿ ತಮಗೆ ಹೆಚ್ಚಿನ ಯಶಸ್ಸು ಸಿಗಲೆಂದು ಶುಭ ಕೋರುತ್ತೇನೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

KPCC

ಕಾಂಗ್ರೆಸ್‌ ವರಿಷ್ಠರಿಗೆ ಧನರಾಜ್ ಎಸ್. ತಾಳಂಪಳ್ಳಿ ಧನ್ಯವಾದ

ತಮ್ಮನ್ನು ಕೆಪಿಸಿಸಿ ಸಹಕಾರ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಧನರಾಜ್ ಎಸ್. ತಾಳಂಪಳ್ಳಿ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. “ನಿಷ್ಠಾವಂತ ಕಾರ್ಯಕರ್ತನಾಗಿ ನಾನು ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಮತ್ತು ನನ್ನ ಮೇಲೆ ವಿಶ್ವಾಸವಿಟ್ಟು ನನಗೆ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯಾಧ್ಯಕ್ಷನ ಜವಾಬ್ದಾರಿಯನ್ನು ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದರಾದ ಪ್ರಿಯಾಂಕಾ ವಾದ್ರಾ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ,ಎಐಸಿಸಿ ಕಾರ್ಯದರ್ಶಿಗಳಾದ ಗೋಪಿನಾಥ ಪಳನಿಯಪ್ಪನ್, ಕೆಪಿಸಿಸಿ ಅಧ್ಯಕ್ಷರು ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಹೃದಯಪೂರ್ವಕ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | RCB vs PBKS Final: ಆರ್‌ಸಿಬಿ ಐಪಿಎಲ್ ಕಪ್ ಗೆಲ್ಲಲಿ; ಎಚ್‌ಡಿಕೆ, ಡಿಕೆಶಿ ಸೇರಿ ಹಲವು ಗಣ್ಯರಿಂದ ಶುಭ ಹಾರೈಕೆ



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »