Karunadu Studio

ಕರ್ನಾಟಕ

Kamal Haasan controversy: ಕಮಲ್‌ ಹಾಸನ್‌ ಕನ್ನಡ ಮತ್ತು ಕನ್ನಡಿಗರ ಕ್ಷಮೆ ಕೇಳಲೇಬೇಕು: ಬಿಎಸ್‌ವೈ ಆಗ್ರಹ – Kannada News | BS Yediyurappa’s response to Kamal Haasan’s statement


ಬೆಂಗಳೂರು: ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಕಮಲ್‌ ಹಾಸನ್‌(Kamal Haasan controversy) ಯಾವುದೇ ಕಾರಣಕ್ಕೂ ಕ್ಷಮೆಯಾಚಿಸಲ್ಲ ಎಂದು ಹೇಳಿದ್ದಾರೆ. ಈ ನಡುವೆ ಅವರಿಗೆ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಅವರು ತಿರುಗೇಟು ನೀಡಿದ್ದಾರೆ. ಕಮಲ್‌ ಹಾಸನ್‌ ಅವರು ಗೌರವಯುತವಾಗಿ ಕನ್ನಡ ಮತ್ತು ಕನ್ನಡಿಗರ ಕ್ಷಮೆ ಕೇಳಲೇಬೇಕು. ಕ್ಷಮೆ ಕೇಳುವುದರಿಂದ ಯಾರೂ ಸಣ್ಣವರಾಗುವುದಿಲ್ಲ, ದುರಹಂಕಾರದಿಂದ ಯಾರೂ ದೊಡ್ಡವರಾಗುವುದಿಲ್ಲ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ‘ಕನ್ನಡವೇ ಸತ್ಯ, ಕನ್ನಡವೇ ನಿತ್ಯ’ ಕನ್ನಡಿಗರ ಘೋಷ ವಾಕ್ಯ ಮಾತ್ರವಲ್ಲ, ಇದು ಕನ್ನಡಾಂಬೆ ತಾಯಿ ಭುವನೇಶ್ವರಿ ದೇವಿಯ ಮೇಲಿರುವ ಕನ್ನಡಿಗರ ದೀಕ್ಷೆ. ಕನ್ನಡ ಯಾವುದೇ ನಿರ್ದಿಷ್ಟ ಭಾಷೆಯಿಂದ ಹುಟ್ಟಿಕೊಂಡಿಲ್ಲ ಎಂದು ಅನೇಕ ಹಿರಿಯ ಭಾಷಾ ಪರಿಣಿತರು ಸಿದ್ದ ಮಾಡಿ ತೋರಿಸಿದ್ದಾರೆ.

ಇತಿಹಾಸ, ಭಾಷಾಶಾಸ್ತ್ರ ತಜ್ಞರಲ್ಲದ ಕಲಾವಿದ ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ಸಂವೇದನಾರಹಿತವಾಗಿ ಮಾತನಾಡಿರುವುದು ಅತ್ಯಂತ ಖೇದನೀಯ ಮತ್ತು ಖಂಡನಾರ್ಹ. ಅನಗತ್ಯವಾಗಿ ಶಾಂತಿ, ಸೌಹಾರ್ದತೆ, ಸಾಮರಸ್ಯಕ್ಕೆ ಭಂಗವುಂಟು ಮಾಡುವ ಅವರ ವರ್ತನೆ ಸರಿಯಲ್ಲ. ಅವರ ಅಭಿಪ್ರಾಯ ಮಂಡನೆಯ ಭರದಲ್ಲಿ ಕೋಟ್ಯಂತರ ಕನ್ನಡಿಗರ ಭಾವನೆಗಳಿಗೆ ಘಾಸಿಯುಂಟು ಮಾಡಿದ್ದು, ಅವರು ಗೌರವಯುತವಾಗಿ ಕನ್ನಡ ಮತ್ತು ಕನ್ನಡಿಗರ ಕ್ಷಮೆ ಕೇಳಲೇಬೇಕು. ಕ್ಷಮೆ ಕೇಳುವುದರಿಂದ ಯಾರೂ ಸಣ್ಣವರಾಗುವುದಿಲ್ಲ, ದುರಹಂಕಾರದಿಂದ ಯಾರೂ ದೊಡ್ಡವರಾಗುವುದಿಲ್ಲ ಎಂದು ತಿಳಿಸಿದ್ದಾರೆ.



ಕರ್ನಾಟಕದಲ್ಲಿ ಕಮಲ್‌ ಹಾಸನ್‌ ಚಿತ್ರ ರಿಲೀಸ್‌ ಇಲ್ಲ

ಬೆಂಗಳೂರು: ಕರ್ನಾಟಕದಲ್ಲಿ ಕಮಲ್ ಹಾಸನ್ (Kamal Hassan Controversy) ಅವರ ಹೊಸ ಸಿನಿಮಾ ʼಥಗ್‌ ಲೈಫ್‌ʼ ಬಿಡುಗಡೆಗೆ ತಾತ್ಕಾಲಿಕ ತಡೆ ಬಿದ್ದಿದೆ. ʼಥಗ್‌ ಲೈಫ್‌ʼ (Thug Life Movie) ಬಿಡುಗಡೆಗೆ ಭದ್ರತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಮಂಗಳವಾರ ನಡೆದಿದ್ದು, ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಅರ್ಜಿಯ ಮುಂದಿನ ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿದ್ದಾರೆ.

ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ಕುರಿತು ಕ್ಷಮೆಯಾಚಿಸದೆ ಮೊಂಡಾಟ ಪ್ರದರ್ಶಿಸುತ್ತಿದ್ದ ಕಮಲ್‌ ಹಾಸನ್‌ಗೆ ಆಘಾತ ಎದುರಾಗಿದೆ. ಸದ್ಯ ಕರ್ನಾಟಕದಲ್ಲಿ ಚಿತ್ರ ಬಿಡುಗಡೆ ಮಾಡುವುದಿಲ್ಲ. ವಾಣಿಜ್ಯ ಮಂಡಳಿ ಜತೆ ಚರ್ಚೆ ನಡೆಸುತ್ತೇವೆ. ಹೀಗಾಗಿ ಒಂದು ವಾರ ವಿಚಾರಣೆ ಮುಂದೂಡಲು ಥಗ್‌ ಲೈಫ್‌ ನಿರ್ಮಾಣ ಸಂಸ್ಥೆ ರಾಜ್‌ ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಪರ ವಕೀಲರು ಮನವಿ ಮಾಡಿದ್ದು, ರಾಜ್ಯದಲ್ಲಿ ಸದ್ಯ ʼಥಗ್‌ ಲೈಫ್‌ʼ ಬಿಡುಗಡೆ ಮಾಡದಿರಲು ನಿರ್ಧರಿಸಿದ್ದಾರೆ.

ಜೂನ್‌ 5ಕ್ಕೆ ವಿಶ್ವದಾದ್ಯಂತ ಥಗ್‌ ಲೈಫ್‌ ಬಿಡುಗಡೆಯಾಗಲಿದೆ. ಆದರೆ, ಕಮಲ್‌ ಹಾಸನ್‌ ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರಿಂದ ಅವರ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹೇಳಿತ್ತು. ಹೀಗಾಗಿ ರಾಜ್ಯದಲ್ಲಿ ಚಿತ್ರ ಬಿಡುಗಡೆಗೆ ಅವಕಾಶ ಮಾಡಿಕೊಡಬೇಕು ಎಂದು ಥಗ್‌ ಲೈಫ್‌ ನಿರ್ಮಾಪಕರು ಹೈಕೋರ್ಟ್‌ ಮೊರೆಹೋಗಿದ್ದಾರೆ.

ಈ ಸುದ್ದಿಯನ್ನೂ ಓದಿ | Kamal Hasaan: 300 ಕೋಟಿಯ ಥಗ್​ ಲೈಫ್ ಚಿತ್ರ ಕರ್ನಾಟಕದಲ್ಲಿ ಬ್ಯಾನ್‌; ಕೋರ್ಟ್‌ ಮೊರೆ ಹೋದ ಕಮಲ್‌ ಹಾಸನ್‌

ಕನ್ನಡದ ಬಗ್ಗೆ ಇರುವ ಗೌರವವನ್ನು ಕಮಲ್‌ ಹಾಸನ್‌ ಅವರು ಪತ್ರದ ಮೂಲಕ ವ್ಯಕ್ತಪಡಿಸಿದ್ದಾರೆ. ನಾವು ಭಾಷೆ ಆಧಾರದಲ್ಲಿ ವಿಭಜನೆ ಆಗಬಾರದು. ದೇಶ ಒಂದೇ, ಕನ್ನಡವೂ ಇರಬೇಕು, ತಮಿಳೂ ಇರಬೇಕು ಎಂದು ನಟನ ಪರ ವಕೀಲ ವಕೀಲ ಧ್ಯಾನ್ ಚಿನ್ನಪ್ಪ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದರು. ಇದಕ್ಕೆ ಜಡ್ಜ್‌ ಪ್ರತಿಕ್ರಿಯಿಸಿ, ಕೋರ್ಟ್‌ ಎಲ್ಲೂ ಕ್ಷಮೆ ಕೇಳಲು ಹೇಳುತ್ತಿಲ್ಲ, ಕರ್ನಾಟಕ ಫಿಲ್ಮ್‌ ಚೇಂಬರ್‌ ಕೇಳುತ್ತಿದೆ ಎಂದು ತಿಳಿಸಿದ್ದಾರೆ.





Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »