Karunadu Studio

ಕರ್ನಾಟಕ

rcb victory parade: ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಆರ್‌ಸಿಬಿ ತಂಡದ ವಿಜಯಯಾತ್ರೆ – Kannada News | RCB IPL 2025 victory parade: When and where to watch team’s celebration in Bengaluru?


ಬೆಂಗಳೂರು: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ(IPL Final 2025) ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB vs PBKS Final) ತಂಡವು ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. ಮಂಗಳವಾರ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಎದುರು 6 ರನ್‌ಗಳ ರೋಚಕ ಜಯ ಸಾಧಿಸಿ ಚೊಚ್ಚಲ ಟ್ರೋಫಿ ಗೆದ್ದು ಬೀಗಿತ್ತು. ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಇಂದು(ಬುಧವಾರ) ಆರ್‌ಸಿಬಿ ವಿಜಯಯಾತ್ರೆ(rcb victory parade) ನಡೆಯಲಿದೆ. ಟ್ರೋಫಿ ಜತೆ ತಂಡದ ಆಟಗಾರರು ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ.

ಇಂದು ಮಧ್ಯಾಹ್ನ 3.30ಕ್ಕೆ ಬೆಂಗಳೂರು ತಂಡದ ವಿಜಯಯಾತ್ರೆ ನಡೆಯಲಿದ್ದು, ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ವಿಜಯಯಾತ್ರೆ ನಡೆಯಲಿದೆ. ಈ ವಿಜಯಯಾತ್ರೆಯಲ್ಲಿ ಭಾರೀ ಅಭಿಮಾನಿಗಳು ಸೇರುವ ಸಾಧ್ಯತೆ ಇದೆ.

ಮಂಗಳವಾರದಂದೇ ಆರ್‌ಸಿಬಿ ಅಭಿಮಾನಿಗಳ ಸಂಭ್ರಮಕ್ಕೆ ಎಲ್ಲೆಯೇ ಇರಲಿಲ್ಲ. ಮಕ್ಕಳು, ಯುವಕರು, ಗೃಹಿಣಿಯರು, ಮಧ್ಯವಯಸ್ಕರು, ಇಳಿ ವಯಸ್ಸಿನ ಅಭಿಮಾನಿಗಳೂ ಮನೆಯಿಂದ ಹೊರಗೆ ಬಂದು ಆರ್‌ಸಿಬಿ ವಿಜಯೋತ್ಸವದಲ್ಲಿ ಭಾಗಿಯಾಗಿದ್ದರು. ಲಕ್ಷಾಂತರ ಅಭಿಮಾನಿಗಳು ಒಮ್ಮೆಗೇ ರಸ್ತೆಗೆ ಇಳಿದಿದ್ದರಿಂದ ನಗರದ ಹಲವಡೆ ಮಧ್ಯರಾತ್ರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.

ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 190 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 184 ರನ್‌ ಗಳಿಸಲಷ್ಟೇ ಶಕ್ತವಾಗಿ 6 ರನ್‌ ಅಂತರದಿಂದ ಸೋಲೊಪ್ಪಿಕೊಂಡಿತು. ಕೊನೆಯವರೆಗೂ ಹೋರಾಡಿದ ಶಶಾಂಕ್‌ ಸಿಂಗ್ ಅಜೇಯ 61 ರನ್ ಗಳಿಸಿದರು.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »