Karunadu Studio

ಕರ್ನಾಟಕ

Stampede at Chinnaswamy stadium: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ; ಯುವಕ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ – Kannada News | A youth died in a stampede at Chinnaswamy Stadium in bengaluru


ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಉಂಟಾಗಿ ಒಬ್ಬ ಯುವಕ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ (Stampede at Chinnaswamy stadium) ಬುಧವಾರ ನಡೆದಿದೆ. ಕ್ರೀಡಾಂಗಣದ ಬಳಿ ನೂಕು ನುಗ್ಗಲು ಉಂಟಾಗಿದ್ದರಿಂದ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದು, ಈ ವೇಳೆ ಕಾಲ್ತುಳಿತ ಉಂಟಾಗಿ, ಒಬ್ಬ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.

ಕಾಲ್ತುಳಿತದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೌರಿಂಗ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಆರ್‌ಸಿಬಿ ವಿಜಯೋತ್ಸವ ಪರೇಡ್‌(Bengaluru IPL Celebrations) ಭದ್ರತಾ ದೃಷ್ಟಿಯಿಂದ ಕೈಬಿಡಲಾಗಿತ್ತು. ಬದಲಾಗಿ ಚಿನ್ನಸ್ವಾಮಿಯಂ ಸ್ಟೇಡಿಯಂನಲ್ಲಿ(m chinnaswamy stadium) ವಿಜಯೋತ್ಸವ ಆಚರಿಸಲು ಅನುಮತಿ ನೀಡಲಾಗಿತ್ತು. ವಿಧಾನಸೌಧದ ಬಳಿ ತಂಡದ ಸದಸ್ಯರಿಗೆ ಸನ್ಮಾನಿಸಿ, ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ. ಆದರೆ, ಸಾವಿರಾರು ಅಭಿಮಾನಿಗಳು ಸ್ಟೇಡಿಯಂನತ್ತ ಬರುತ್ತಿರುವುದರಿಂದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುವಂತಾಗಿದೆ.

ಆರ್‌ಸಿಬಿ ವಿಜಯೋತ್ಸವದ ವೇಳೆ ಬೈಕ್‌ಗಳು ಡಿಕ್ಕಿಯಾಗಿ ಯುವಕ ಸಾವು

ಶಿವಮೊಗ್ಗ: ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿ ತಂಡ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಮಂಗಳವಾರ ತಡರಾತ್ರಿ ಅಭಿಮಾನಿಗಳ ಸಂಭ್ರಮಾಚರಣೆ (RCB celebrations) ಮುಗಿಲು ಮುಟ್ಟಿತ್ತು. ಈ ನಡುವೆ ಸಂಭ್ರಮಾಚರಣೆಗೆ ಹೊರಟಿದ್ದಾಗ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಯುವಕ ಮೃತಟ್ಟಿದ್ದಾನೆ. ವೆಂಕಟೇಶ ನಗರದ ನಿವಾಸಿ ಅಭಿನಂದನ್ (21) ಮೃತ ಯುವಕ.

ಉಷಾ ನರ್ಸಿಂಗ್‌ ಹೋಂ ಸರ್ಕಲ್‌ ಬಳಿಯ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ಅಪಘಾತ ಸಂಭವಿಸಿದೆ. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಗೆ ಯುವಕರು ಬೈಕ್‌ಗಳಲ್ಲಿ ಹೊರಟಿದ್ದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿವೆ. ತೀವ್ರ ಗಾಯಗೊಂಡಿದ್ದ ಅಭಿನಂದನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಇನ್ನೊಂದು ಬೈಕ್​ನಲ್ಲಿದ್ದ ಮಿಥುನ್​​​ ಹಾಗೂ ಅಭಿಷೇಕ್​​​ ಗಾಯಗೊಂಡಿದ್ದಾರೆ.

ಮಂಗಳವಾರ ರಾತ್ರಿ RCB ಟೀಂ ಗೆಲುವು ಸಾಧಿಸುತ್ತಿದ್ದಂತೆ ಯುವಕರು, ಕ್ರಿಕೆಟ್​​ ಪ್ರೇಮಿಗಳು ಉಷಾ ನರ್ಸಿಂಗ್​ ಹೋಂ ಬಳಿ ಸಂಭ್ರಮಾಚರಣೆ ನಡೆಸುತ್ತಿದ್ದರು. ನೂರು ಅಡಿ ರಸ್ತೆ ರವೀಂದ್ರ ನಗರದ ಕಡೆ ರಸ್ತೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಕುಣಿಯುತ್ತಿದ್ದರು. ಈ ವೇಳೆ ಮಿಥುನ್ ಹಾಗೂ ಅಭಿಷೇಕ್ ತಮ್ಮ ಬೈಕ್​ನಲ್ಲಿ ಉಷಾ ನರ್ಸಿಂಗ್​ ಹೋಂ ಕಡೆಯಿಂದ ವಿನೋಬನಗರ ಕಡೆಗೆ ಹೋಗುತ್ತಿದ್ದಾಗ, ಅದೇ ಕಡೆಯಿಂದ ಅಭಿಷೇಕ್​​ ಬರುತ್ತಿದ್ದು ಬೈಕ್​ಗಳು ಮುಖಾಮುಖಿ ಡಿಕ್ಕಿಯಾಗಿವೆ. ಈ ವೇಳೆ ಅಭಿಷೇಕ್​ ಸ್ಥಳದಲ್ಲೇ ಮೃತಪಟ್ಟದ್ದಾನೆ.

ಈ ಸುದ್ದಿಯನ್ನೂ ಓದಿ | RCB vs PBKS Final: ಆರ್‌ಸಿಬಿ ಮೊದಲ ಫೈನಲ್‌ ಸೋಲಿಗೂ, ಚೊಚ್ಚಲ ಟ್ರೋಫಿ ಗೆಲುವಿಗೂ ಇದೆ ಸಾಮ್ಯತೆ



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »