Karunadu Studio

ಕರ್ನಾಟಕ

Bengaluru Stampede: ಜೀವಕ್ಕಿಂತ ಅಭಿಮಾನ ದೊಡ್ಡದಲ್ಲ; ಬೆಂಗಳೂರು ಕಾಲ್ತುಳಿತಕ್ಕೆ ಡಿಸಿಎಂ ಡಿಕೆಶಿ ಆಘಾತ – Kannada News | DCM DK Shivakumar shock to Bengaluru Stampede


ಬೆಂಗಳೂರು: 18 ವರ್ಷಗಳ ಬಳಿಕ ಐಪಿಎಲ್‌ ಕಿರೀಟ ಮುಡಿಗೇರಿಸಿಕೊಂಡು ಸಂಭ್ರಮದಲ್ಲಿ ಮುಳುಗೇಳಬೇಕಿದ್ದ ಬೆಂಗಳೂರಿನಲ್ಲಿ ಸೂತಕ ಮನೆ ಮಾಡಿದೆ (Bengaluru Stampede). ಆರ್‌ಸಿಬಿ (RCB) ವಿಜಯೋತ್ಸವಕ್ಕೆ ಸಜ್ಜಾಗಿದ್ದ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಆಘಾತ ವ್ಯಕ್ತಪಡಿಸಿ, ಜೀವಕ್ಕಿಂತ ಅಭಿಮಾನ ದೊಡ್ಡದಲ್ಲ ಎಂದು ಎಕ್ಸ್‌ನಲ್ಲಿ ಫ್ಯಾನ್ಸ್‌ಗೆ ಸಂದೇಶ ನೀಡಿದ್ದಾರೆ.

ʼʼಆರ್‌ಸಿಬಿಯ ಐಪಿಎಲ್ ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾಗಬೇಕಿದ್ದ ಜನರು ದುರಂತಕ್ಕೆ ಒಳಗಾಗಿ, ಮೃತಪಟ್ಟಿರುವುದು ತೀವ್ರ ನೋವು ಮತ್ತು ಆಘಾತ ತಂದಿದೆ. ಮೃತರಿಗೆ ನನ್ನ ಸಂತಾಪಗಳು. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು. ಅಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಳ್ಳುತ್ತೇನೆʼʼ ಎಂದು ಅವರು ಬರೆದುಕೊಂಡಿದ್ದಾರೆ.

ಡಿ.ಕೆ.ಶಿವಕುಮಾರ್‌ ಅವರ ಎಕ್ಸ್‌ ಪೋಸ್ಟ್‌:



ಈ ಸುದ್ದಿಯನ್ನೂ ಓದಿ: Bengaluru Stampede: 18 ವರ್ಷದ ಬಳಿಕ ಐಪಿಎಲ್‌ ಕಪ್‌ ಗೆದ್ದರೂ ಆರ್‌ಸಿಬಿಗಿಲ್ಲ ಸಂಭ್ರಮ; ಬೆಂಗಳೂರು ಕಾಲ್ತುಳಿತಕ್ಕೆ ಕಾರಣವೇನು?

ಕಬ್ಬನ್ ಪಾರ್ಕ್, ವಿಧಾನಸೌಧ ಮೆಟ್ರೋ ಸ್ಟೇಷನ್ ಬಂದ್

ಚಿನ್ನಸ್ವಾಮಿ ಸ್ಟೇಡಿಯಂಗೆ ಆಗಮಿಸಲು ಮೆಟ್ರೋ ರೈಲಿಗೆ ಜನ ಪ್ರವಾಹವೇ ನುಗ್ಗಿದ್ದು, ಸ್ಟೇಷನ್‌ಗಳಲ್ಲಿ ನೂಕು ನುಗ್ಗಲು ಕಂಡು ಬಂದಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ನೇರಳೆ ಮಾರ್ಗದ 2 ಮೆಟ್ರೋ ನಿಲ್ದಾಣಗಳಾದ ವಿಧಾನಸೌಧ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್‌ಗಳನ್ನು ಬಂದ್ ಮಾಡಲಾಗಿದೆ.

ʼʼಮೆಟ್ರೋ ರೈಲುಗಳಲ್ಲೂ ಜನಸಾಗರವೇ ಹರಿದು ಬರುತ್ತಿರುವುದರಿಂದ ಯಾವುದೇ ಅಪಾಯ, ಕಾಲ್ತುಳಿತ ಸಂಭವಿಸಬಾರದು ಎಂಬ ಉದ್ದೇಶದಿಂದ 2 ಮೆಟ್ರೋ ನಿಲ್ದಾಣಗಳ ಸೇವೆ ನಿಲ್ಲಿಸಲಾಗಿದೆ. ಕಬ್ಬನ್​ ಪಾರ್ಕ್, ವಿಧಾನಸೌಧ ಮೆಟ್ರೋ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ‘ನಮ್ಮ ಮೆಟ್ರೋ’ ನೇರಳೆ ಮಾರ್ಗದಲ್ಲಿರುವ ನಿಲ್ದಾಣಗಳಲ್ಲಿ ಸಂಜೆ 4.30ರಿಂದಲೇ ಸೇವೆ ಸ್ಥಗಿತಗೊಳಿಸಲಾಗಿದೆ. ಮುಂದಿನ ಆದೇಶದವರೆಗೂ ಈ ಎರಡು ನಿಲ್ದಾಣಗಳಲ್ಲಿ ಮೆಟ್ರೋ ರೈಲುಗಳು ನಿಲ್ಲುವುದಿಲ್ಲʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೌರಿಂಗ್ ಅಸ್ಪತ್ರೆಗೆ ವಿಜಯೇಂದ್ರ ಭೇಟಿ

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಗಾಯಗೊಂಡು ಬೌರಿಂಗ್ ಆಸ್ಪತ್ರೆಯಲ್ಲಿ‌ ಚಿಕಿತ್ಸೆಗಾಗಿ ದಾಖಲಾಗಿರುವವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ.ವಿಜಯೇಂದ್ರ ಭೇಟಿಯಾಗಿ ಸಾಂತ್ವನ ಹೇಳಿದರು. ಘಟನೆಯಲ್ಲಿ 27ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಣವೇನು?

ತಮ್ಮ ನೆಚ್ಚಿನ ತಾರೆಯರನ್ನು ನೋಡಲು ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಜನ ಸಾಗರವೇ ನೆರೆದಿತ್ತು. ಇದರಿಂದ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಚ್‌ ನಡೆಸಿದರು. ಈ ವೇಳೆ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.





Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »