Karunadu Studio

ಕರ್ನಾಟಕ

Kamal Hassan: ಕಮಲ ಹಾಸನ್ ಕ್ಷಮಾಪಣೆಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳ ಬೃಹತ್ ಪ್ರತಿಭಟನೆ – Kannada News | Massive protest demanding apology from Kamal Haasan


ಚಿಕ್ಕಬಳ್ಳಾಪುರ: ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ’ ಎಂಬ ಉದ್ಧಟತನದ ಹೇಳಿಕೆ ನೀಡಿರುವ ತಮಿಳು ನಟ ಕಮಲ್ ಹಾಸನ್ ಕೂಡಲೇ 7 ಕೋಟಿ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಅಂಬೇಡ್ಕರ್ ವೃತ್ತದಲ್ಲಿ ಕನ್ನಡಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಹಿರಿಯ ಕನ್ನಡಪರ ಹೋರಾಟಗಾರ, ಹಾಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಯಲುವಹಳ್ಳಿ ರಮೇಶ್ ಮಾತನಾಡಿ ಕನ್ನಡ ಭಾಷೆ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ನಟ ಕಮಲ್ ಹಾಸನ್ ಒಬ್ಬ ಕನ್ನಡ ದ್ರೋಹಿ.ಈತನ ನಟನೆಯ ಥಗ್ ಲೈಪ್ ಸಿನಿಮಾ ಜೂ.೫ರಂದು ಬಿಡುಗಡೆಯಾಗಲಿದ್ದು, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಚಿತ್ರ ಪ್ರದರ್ಶನ ಮಾಡಕೂಡದು ಎಂದು ಆಗ್ರಹಿಸಿದರು.

ತಮಿಳು ಭಾಷೆಯಿಂದಲೇ ಕನ್ನಡ ಹುಟ್ಟಿದ್ದು ಎನ್ನುವ ಮಾತನ್ನು  ಆಡಿರುವ ಮಾತಿನ ಹಿಂದೆ ಭಾಷಾ ಸಾಮರಸ್ಯ ಕದಡುವ ಹುನ್ನಾರವಿದೆ.ತನ್ನ ಮಾತಿನಿಂದ ಸಮಾಜದಲ್ಲಿ ಕ್ಷೋಭೆಯನ್ನು ಉಂಟು ಮಾಡಿರುವ ಈತ ನಟನೇ ಅಲ್ಲ.ಈತ ಕ್ಷಮೆಕೇಳಲೇಬೇಕು.ಇಷ್ಟಕ್ಕೆ ಸುಮ್ಮನಾಗದೆ ರಾಜ್ಯ ಸರಕಾರವೂ ಕೂಡ ಈತನ ವಿರುದ್ಧ ಕ್ರಮಜರುಗಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: Kamal Hassan: ತಮಿಳು ನಟ ಕಮಲಾಹಾಸನ್ ಕನ್ನಡಿಗರ ಕ್ಷಮೆ ಕೇಳಬೇಕು : ಕರವೇ ತಾಲೂಕು ಅಧ್ಯಕ್ಷ ಜಿ.ಎಲ್.ಆಶ್ವತ್ಥ್ ನಾರಾಯಣ ಆಗ್ರಹ

ಕನ್ನಡ ವಿರೋಧಿ ಕಮಲ್ ಹಾಸನ್ ಅವರ ಎಲ್ಲ ಚಲನಚಿತ್ರಗಳನ್ನು ಕರ್ನಾಟಕದಲ್ಲಿ ಬಹಿಷ್ಕರಿಸಿ ಆ ಮೂಲಕ ಒಬ್ಬ ಪರಭಾಷಾ ನಟನಿಗೆ ರಾಜ್ಯ ಸರ್ಕಾರ ತಕ್ಕ ಉತ್ತರ ನೀಡಬೇಕು. ಈ ರೀತಿ ಮಾಡಿದರೆ ಕನ್ನಡ ಭಾಷೆ ಬಗ್ಗೆ ಹಗುರವಾಗಿ ಮಾತನಾಡುವುದಿಲ್ಲ ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

ಈ ಹಿಂದೆ ತಮಿಳುನಾಡಿನ ಮುಖ್ಯಮಂತ್ರಿ ಎಂ.ಜಿ.ರಾಮಚಂದ್ರನ್ ಬೆಂಗಳೂರು ಕೇಂದ್ರ ಆಡಳಿತ ಮಾಡಬೇಕು ಎಂದು ಹೇಳಿಕೆ ನೀಡಿದಾಗ ವರನಟ ಡಾ.ರಾಜ್‌ಕುಮಾರ್ ತೀವ್ರವಾಗಿ ವಿರೋಧಿಸಿದ್ದ ರು ಎಂಬುದನ್ನು ಇದೇ ವೇಳೆ ಎನ್ ರಮೇಶ್ ಸ್ಮರಿಸಿದರು.

ಕರ್ನಾಟಕ ರಕ್ಷಣಾ ವೇದಿಕೆಯ ಅಗಲಗುರ್ಕಿ ಚಲಪತಿ ಮಾತನಾಡಿ ಕನ್ನಡ ತಮಿಳಿನಿಂದ ಹುಟ್ಟಿದ್ದು ಎನ್ನುವ ಮೂಲಕ ಕನ್ನಡಿಗರನ್ನು ಅವಮಾನಿಸಿರುವ ತಮಿಳು ಚಿತ್ರನಟಕಮಲ್ ಹಾಸನ್ ಚಿತ್ರಗಳನ್ನು ಕರ್ನಾಟಕ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ  ಬಿಡುಗಡೆ ಮಾಡಬಾರದು.  ಕನ್ನಡ ವಿರೋಧಿ ಕಮಲ ಹಾಸನ್‌ಗೆ ಕನ್ನಡದ ಸಂಸ್ಕೃತಿ ಗೊತ್ತಿಲ್ಲ. ಅವರ ಚಲನ ಚಿತ್ರಗಳನ್ನು ಬಿಡುಗಡೆ ಮಾಡಿದರೆ ಅಂತಹ ಥಿಯೇಟರ್‌ಗಳಿಗೆ ಮುತ್ತಿಗೆ ಹಾಕಿ ತಡೆಯುತ್ತೇವೆ . ಕನಾಟಕಕ್ಕೆ ಬಂದರೆ ಅವನಿಗೆ ಉಳಿಗಾಲವಿಲ್ಲ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ವಕೀಲ ಕೆ.ಎಂ.ಮುನೇಗೌಡ,ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಸಿ.ರಾಜಾಕಾಂತ್,ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರಸಾರಥ್ಯದಲ್ಲಿ) ಜಿಲ್ಲಾಧ್ಯಕ್ಷರು ಸುರೇಶ್ ಬಾಬು,  ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಸುಪ್ರಿಯಾ, ಪ್ರದಾನ ಕಾರ್ಯದರ್ಶಿ ಬಾಬಾಜಾನ್, ದೇವರಾಜ್, ಮನೋಜ್, ಬಿ.ಕೆ. ಪ್ರಕಾಶ್, ಮಹಿಳಾ ಮುಖಂಡರಾದ   ಮಂಗಳಪ್ರಕಾಶ್,   ಉಷಾ ಶ್ರೀನಿವಾಸ್ ಬಾಬು, ವಸಂತ, ಚಂದ್ರಕಲಾ, ರತ್ನಮ್ಮ, ನಾರಾಯಣಮ್ಮ, ಸರೋಜಮ್ಮ, ಸೇರಿದಂತೆ ಇನ್ನಿತರ ರಕ್ಷಣಾ ವೇದಿಕೆಯ ಪ್ರಮುಖರು ಇದ್ದರು.IPL 2025: ʻನಾವು ತೀವ್ರ ದುಖಃದಲ್ಲಿದ್ದೇವೆʼ-ಕಾಲ್ತುಳಿತದ ಪ್ರಕರಣದ ಬಗ್ಗೆ ಆರ್‌ಸಿಬಿ ಪ್ರತಿಕ್ರಿಯೆ!



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »