Karunadu Studio

ಕರ್ನಾಟಕ

Bangalore Stampede: RCB ವಿಜಯೋತ್ಸವದಲ್ಲಿ ಕಾಲ್ತುಳಿತ- ಅನುಷ್ಕಾ ಶರ್ಮಾ ಫಸ್ಟ್‌ ರಿಯಾಕ್ಷನ್‌ – Kannada News | Bangalore Stampede: Anushka Sharma condoles the tragedy at Chinnaswamy Stadium


ಬೆಂಗಳೂರು: ಈ ಬಾರಿ ಐಪಿಎಲ್ (IPL trophy) ಟ್ರೋಫಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ( Royal Challengers Bengaluru) ಗೆದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ(Chinnaswamy Stadium) ಆಯೋಜಿಸಲಾಗಿದ್ದ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತದಿಂದ (Bengaluru Stampede) ಸುಮಾರು 11 ಮಂದಿ ಸಾವನ್ನಪ್ಪಿದ್ದು, ಇದಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ವಿರಾಟ್ ಕೊಹ್ಲಿ ಅವರ ಪತ್ನಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದುಃಖ ವ್ಯಕ್ತಪಡಿಸಿದ್ದಾರೆ. ಈ ಕುರಿತು ಇನ್ ಸ್ಟಾಗ್ರಾಮ್ ನಲಿ ಸಂತಾಪ ಸೂಚಿಸಿರುವ ಅವರು ಇದಕ್ಕೆ ಹೃದಯವಿದ್ರಾವಕ ಎಮೋಜಿಗಳ ಸರಮಾಲೆಯನ್ನು ಸೇರಿಸಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ದುರಂತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಔಪಚಾರಿಕವಾಗಿ ಸಂತಾಪ ವ್ಯಕ್ತಪಡಿಸಿದೆ. ಇದರಲ್ಲಿ ಅದು ಹೀಗೆ ಹೇಳಿದೆ.. ತಂಡದ ಆಗಮನದ ನಿರೀಕ್ಷೆಯಲ್ಲಿ ಬೆಂಗಳೂರಿನಾದ್ಯಂತ ಸಾರ್ವಜನಿಕ ಸಭೆಗಳನ್ನು ಆಯೋಜಿಸಲಾಗಿದ್ದು, ಇದರಲ್ಲಿ ದುರಂತ ನಡೆದಿರುವುದು ಮಾಧ್ಯಮ ವರದಿಗಳಿಂದ ತಿಳಿದು ಬಂದಿದೆ. ಇಂತಹ ದುರದೃಷ್ಟಕರ ಘಟನೆಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮವು ನಮಗೆ ಅತ್ಯಂತ ಮುಖ್ಯವಾಗಿದೆ.

ಈ ಸಂದರ್ಭದಲ್ಲಿ ಉಂಟಾಗಿರುವ ಜೀವಹಾನಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಶೋಕ ವ್ಯಕ್ತಪಡಿಸುತ್ತದೆ ಮತ್ತು ಪೀಡಿತ ಕುಟುಂಬಗಳಿಗೆ ನಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಪರಿಸ್ಥಿತಿಯ ಬಗ್ಗೆ ತಿಳಿದ ತಕ್ಷಣ ನಾವು ನಮ್ಮ ಕಾರ್ಯಕ್ರಮವನ್ನು ತ್ವರಿತವಾಗಿ ರದ್ದು ಮಾಡಿದ್ದೇವೆ. ಸ್ಥಳೀಯ ಆಡಳಿತದ ಮಾರ್ಗದರ್ಶನ ಮತ್ತು ಸಲಹೆಯನ್ನು ಅನುಸರಿಸಿದ್ದೇವೆ. ದಯವಿಟ್ಟು ಸುರಕ್ಷಿತವಾಗಿರಲು ನಮ್ಮ ಎಲ್ಲಾ ಬೆಂಬಲಿಗರನ್ನು ನಾವು ಒತ್ತಾಯಿಸುತ್ತೇವೆ ಎಂದು ಹೇಳಿದೆ.

ಬುಧವಾರ ಸಂಜೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿತದಿಂದ ಸುಮಾರು 11 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಐಪಿಎಲ್ 2025 ರ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಐತಿಹಾಸಿಕ ಗೆಲುವಿನ ಅನಂತರ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್‌ಸಿಬಿ ಆಟಗಾರರನ್ನು ಸ್ವಾಗತಿಸಲು ಆಯೋಜಿಸಿದ್ದ ಸಿದ್ಧತೆ ವೇಳೆ ಅಪಾರ ಜನಸಮೂಹ ಸೇರಿಕೊಂಡಿತ್ತು.

ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ಬಳಿಕ 18 ವರ್ಷಗಳಲ್ಲಿ ತಂಡದ ಮೊದಲ ಐಪಿಎಲ್ ಪ್ರಶಸ್ತಿಯನ್ನು ಆಚರಿಸಲು ಬೆಂಗಳೂರಿನಾದ್ಯಂತ ಅಭಿಮಾನಿಗಳು ಮಂಗಳವಾರ ರಾತ್ರಿಯೇ ಬೀದಿಗಿಳಿದಿದ್ದರು. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಚಿನ್ನಸ್ವಾಮಿ ಕ್ರೀಡಾಂಗಣದೊಳಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಿತ್ತು. ಆದರೆ ನಿಯಂತ್ರಿಸಲಾಗದ ಜನಸಮೂಹ, ಅನೇಕರಿಗೆ ಮಾನ್ಯ ಪ್ರವೇಶ ಪಾಸ್‌ಗಳಿಲ್ಲದೇ ಇದ್ದ ಕಾರಣ ಕ್ರೀಡಾಂಗಣದಲ್ಲಿ ಗದ್ದಲ ಉಂಟಾಗಿತ್ತು.

ಇದನ್ನೂ ಓದಿ: Bangalore Stampede: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟವರ ವಿವರ ಇಲ್ಲಿದೆ

ಪ್ರತ್ಯಕ್ಷದರ್ಶಿಗಳು ಪ್ರಕಾರ, ಅಭಿಮಾನಿಗಳು ತಮ್ಮ ನೆಚ್ಚಿನ ಕ್ರಿಕೆಟ್ ತಾರೆಯರನ್ನು ಕಾಣಲು ಬೇಲಿಗಳನ್ನು ಹತ್ತಿದರು ಮತ್ತು ಗೋಡೆಗಳನ್ನು ಏರಿದರು. ಪರಿಸ್ಥಿತಿ ನಿಯಂತ್ರಣ ಕಳೆದುಕೊಂಡು ಕಾಲ್ತುಳಿತಕ್ಕೆ ಕಾರಣವಾಯಿತು ಎಂದಿದ್ದಾರೆ.

ದುರಂತಕ್ಕೆ ಕೆಲವೇ ಗಂಟೆಗಳ ಮೊದಲು ಅನುಷ್ಕಾ ಶರ್ಮಾ ಅವರು ವಿಜಯೋತ್ಸವ ಮೆರವಣಿಗೆಯ ಸಂತೋಷದ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ವಿರಾಟ್ ಕೊಹ್ಲಿ ಮತ್ತು ಆರ್‌ಸಿಬಿ ತಂಡವನ್ನು ನಗರದಾದ್ಯಂತ ಬೃಹತ್ ಜನಸಮೂಹ ಸ್ವಾಗತಿಸಿತ್ತು. ಆದರೆ ಈ ದುರಂತ ಘಟನೆಯಿಂದಾಗಿ ಸಂಭ್ರಮಾಚರಣೆಯನ್ನು ಸ್ಥಗಿತಗೊಳಿಸಲಾಯಿತು.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »