Karunadu Studio

ಕರ್ನಾಟಕ

World Environment Day: ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕಿದೆ: ಮುಖ್ಯ ಶಿಕ್ಷಕ ಆರ್.ಹನುಮಂತ ರೆಡ್ಡಿ – Kannada News | Work needs to be done to create environmental awareness among children: Headmaster R. Hanumantha Reddy


ಬಾಗೇಪಲ್ಲಿ: ಕಾಡಿನ ನಾಶ, ಜಲ ಮಾಲಿನ್ಯ, ಅತಿಯಾದ ಪ್ಲಾಸ್ಟಿಕ್ ಬಳಕೆ, ಹವಾಮಾನ ವೈಪರೀತ್ಯ ಮುಂತಾದವುಗಳ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಪರಿಸರವನ್ನು ಉಳಿಸಿ, ಬೆಳೆಸುವ ಮಹತ್ವ ವನ್ನು ಸಾರುವ ಉದ್ದೇಶದಿಂದ ಪ್ರತಿ ವರ್ಷ ಜೂನ್ ೫ ರಂದು ವಿಶ್ವ ಪರಿಸರ ದಿನವನ್ನು ಆಚರಿಸ ಲಾಗುತ್ತದೆ ಎಂದು ಪಿಎಂಶ್ರೀ ಶಾಲೆಯ ಮುಖ್ಯಶಿಕ್ಷಕ ಆರ್.ಹನುಮಂತ ರೆಡ್ಡಿ ಹೇಳಿದರು.

ಇದನ್ನೂ ಓದಿ: IPL 2025: ʻನಾವು ತೀವ್ರ ದುಖಃದಲ್ಲಿದ್ದೇವೆʼ-ಕಾಲ್ತುಳಿತದ ಪ್ರಕರಣದ ಬಗ್ಗೆ ಆರ್‌ಸಿಬಿ ಪ್ರತಿಕ್ರಿಯೆ!

ಪಟ್ಟಣದ ಸರ್ಕಾರಿ ಬಾಲಕಿಯರ ಪಿಎಂಶ್ರೀ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ವನ್ನು ಶಾಲಾ ಆವರಣದಲ್ಲಿ ಶಿಕ್ಷಕರೊಂದಿಗೆ ಗಿಡಗಳನ್ನು ನೆಟ್ಟು, ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಈ ಹೊತ್ತಿನಲ್ಲಿ ಪರಿಸರ ಉಳಿಸುವುದು ಬಹಳ ಅವಶ್ಯ ವಾಗಿರುವ ಕಾರಣ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕಿದೆ. ಅದರಲ್ಲೂ ಸರ್ಕಾರಿ ಶಾಲೆಗಳಲ್ಲಿ ಬಹಳ ಅರ್ಥಪೂರ್ಣವಾಗಿ ಪರಿಸರ ದಿನಾಚರಣೆಯನ್ನು ಆಚರಿಸುವ ಮೂಲಕ ಪರಿಸರ ಉಳಿಸಿ, ಬೆಳಸುವ ಕೆಲಸವನ್ನು ಮಾಡಬಹುದು ಎಂದು ಹೇಳಿದರು.

ಪ್ಲಾಸ್ಟಿಕ್ ವಸ್ತುಗಳು ಭೂಮಿಯಲ್ಲಿ ಕರಗದೆ ಸಾವಿರಾರು ವರ್ಷ ಹಾಗೇ ಉಳಿಯುತ್ತವೆ. ಇದು ಮಣ್ಣು ಆರೋಗ್ಯ ಮತ್ತು ಪರಿಸರವನ್ನು ಹಾಳು ಮಾಡುತ್ತದೆ. ಜಲ ಮೂಲವನ್ನು ಮಾಲಿನ್ಯ ಗೊಳಿಸುತ್ತದೆ. ಇದನ್ನು ಅರಿತು ಜನರು ಪಾಸ್ಟಿಕ್ ಬಳಕೆ ತ್ಯಜಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ  ಶಿಕ್ಷಕರಾದ ಎಂ.ಸಿ.ಪ್ರಭಾವತಿ, ಧರ್ಮಪುತ್ರಿ, ಶ್ರೀಲೇಖ, ಬೇಬಿ ಮಂತಾಜ್, ಬಾರ್ಗವಿ, ಕಲ್ಪನ, ರಜನಿ, ಕವಿತ, ರಾಧಿಕಾ ಮಧು, ನರಸಿಂಹಮೂರ್ತಿ, ಮಂಜುನಾಥ ಬಾಬುರೆಡ್ಡಿ,
ಹಾಗೂ ಶಾಲಾ ಮಕ್ಕಳು ಹಾಜರಿದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »