Karunadu Studio

ಕರ್ನಾಟಕ

Bengaluru Stampede: ಬೆಂಗಳೂರು ಕಾಲ್ತುಳಿತ ದುರಂತ; 11 ಮಂದಿಯೂ ಉಸಿರುಗಟ್ಟಿ ಸಾವು, ಮರಣೋತ್ತರ ಪರೀಕ್ಷೆಯಲ್ಲಿ ದೃಢ – Kannada News | Bengaluru stampede tragedy; 11 people died of suffocation, post-mortem examination confirms


ಬೆಂಗಳೂರು: ಬುಧವಾರ ಬೆಂಗಳೂರಿನಲ್ಲಿ ಕರಾಳ ಘಟನೆಯೊಂದು ನಡೆದು ಹೋಗಿದೆ. ಆರ್‌ಸಿಬಿ ಸಂಭ್ರಮಾಚರಣೆಯ (Bengaluru Stampede) ವೇಳೆ ಉಂಟಾದ ಕಾಲ್ತುಳಿದಲ್ಲಿ 11 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 30 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇದೀಗ ಮೃತಪಟ್ಟವರ ಮರಣೋತ್ತರ ಪರೀಕ್ಷೆಯ ವರದಿ ಬಂದಿದೆ. ಎಲ್ಲರೂ ಉಸಿರುಗಟ್ಟಿಯೇ ಮೃತಪಟ್ಟಿದ್ದಾರೆ ಎಂಬ ವಿಚಾರ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯಲ್ಲಿ ಬೆಳಕಿಗೆ ಬಂದಿದೆ. ಕೆಲವರ ದೇಹದಲ್ಲಿ ಮೂಳೆಗಳು ಮುರಿದಿವೆ. ಬೌರಿಂಗ್ ಆಸ್ಪತ್ರೆಯಲ್ಲಿ ಆರು ಮತ್ತು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಐದು ಮಂದಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

11 ಮಂದಿ ಮೃತಪಟ್ಟ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ 11 ಪ್ರತ್ಯೇಕ ಅಸಹಜ ಸಾವು(ಯುಡಿಆರ್) ಪ್ರಕರಣ ದಾಖಲಾಗಿದೆ. ಮೃತರ ಪಾಲಕರು ನೀಡಿದ ದೂರು ಆಧರಿಸಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಮೂರು ಸಂಸ್ಥೆಗಳ ಪ್ರತಿನಿಧಿಸುವ ವ್ಯಕ್ತಿಗಳ ಬಂಧಿಸುವಂತೆ ಸೂಚನೆ ನೀಡಿದ್ದಾರೆ. ಇವರ ಮೇಲೆ ಎಫ್ ಐಆರ್ ರಿಜಿಸ್ಟರ್ ಆಗಿದೆ. ಈ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಹಲವು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ. ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತುಗೊಳಿಸಲಾಗಿದೆ. ಇದಾಗಿ ಕಲವೇ ಗಂಟೆಗಳಲ್ಲಿ ರಾಜ್ಯ ಸರ್ಕಾರ, ಹೊಸ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ನೇಮಕ ಮಾಡಲಾಗಿದೆ.

ಈ ಸುದ್ದಿಯನ್ನೂ ಓದಿ: Bengaluru Stampede: ಕಾಲ್ತುಳಿತ ಪ್ರಕರಣ; ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ-ಕೆಎಸ್‌ಸಿಎ

ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ. ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »