ನವದೆಹಲಿ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ (IND vs ENG) ಮೊದಲ ಪಂದ್ಯ ಜೂನ್ 20 ರಂದು ಇಂಗ್ಲೆಂಡ್‌ನ ಹೆಡಿಂಗ್ಲಿಯಲ್ಲಿ ನಡೆಯಲಿದೆ. ಈ ಸರಣಿಯನ್ನು ಆಡಲು ಟೀಮ್ ಇಂಡಿಯಾ, ಇಂಗ್ಲೆಂಡ್‌ಗೆ ತಲುಪಿದೆ. ಈ ಸರಣಿಯು ಭಾರತೀಯ ತಂಡಕ್ಕೆ ಬಹಳ ವಿಶೇಷವಾಗಲಿದೆ. ಟೀಮ್ ಇಂಡಿಯಾದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಆದ್ದರಿಂದ ಯುವ ಆಟಗಾರರಿಗೆ ಈ ಸರಣಿಯಲ್ಲಿ ಅವಕಾಶ ಸಿಕ್ಕಿದೆ. ಶುಭಮನ್ ಗಿಲ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ರಿಷಭ್ ಪಂತ್ ( Rishabh Pant) ಉಪನಾಯಕರಾಗಿದ್ದಾರೆ. ಇದರ ನಡುವೆ ರಿಷಭ್ ಪಂತ್ ಸದ್ಯ ಫಾರ್ಮ್‌ನಲ್ಲಿ ಇಲ್ಲದೇ ಇರುವುದರಿಂದ ಧ್ರುವ ಜುರೆಲ್‌ಗೆ (Dhruv Jurel) ಆಡಲು ಅವಕಾಶ ಸಿಗಬಹುದು.