Karunadu Studio

ಕರ್ನಾಟಕ

Moral Policing: ಬೈಕ್‌ನಲ್ಲಿ ಹೋಗುತ್ತಿದ್ದ ಹಿಂದೂ ಯುವಕ, ಮುಸ್ಲಿಂ ಯುವತಿ ಮೇಲೆ ನೈತಿಕ ಪೊಲೀಸ್‌ ಗಿರಿ – Kannada News | Moral policing on youth, young men, and young women in Ramanagara


ರಾಮನಗರ: ಬೈಕ್‌ನಲ್ಲಿ ಹೋಗುತ್ತಿದ್ದ ಯುವಕ, ಯುವತಿಯನ್ನು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ (Moral Policing) ನಡೆಸಿರುವುದು ರಾಮನಗರ ಹೊರವಲಯದ ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ನಡೆದಿದೆ. ಹಿಂದೂ ಯುವಕನ ಜತೆ ಮುಸ್ಲಿಂ ಯುವತಿ ಬೈಕ್‌ನಲ್ಲಿ ಹೋಗುತ್ತಿದ್ದ ಹಿನ್ನೆಲೆಯಲ್ಲಿ ಮತ್ತೊಂದು ಬೈಕ್‌ನಲ್ಲಿ ಬಂದ ಇಬ್ಬರು ಮುಸ್ಲಿಂ ಯುವಕರು ಬೈಕ್ ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ.

ಬೈಕ್‌ನಲ್ಲಿ ಹೋಗುತ್ತಿದ್ದ ಹಿಂದೂ ಯುವಕ, ಮುಸ್ಲಿ ಯುವತಿಯನ್ನು ಅಡ್ಡಗಟ್ಟಿರುವ ಮುಸ್ಲಿ ಯುವಕರು, ಇವನ್ಯಾರು ಎಂದು ಕೇಳಿದ್ದಾರೆ. ಆಕೆ ಸ್ನೇಹಿತ ಎಂದು ಹೇಳಿದಾಗ ಯಾಕೆ ಯುವತಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೊಗುತ್ತಿದ್ದೀಯಾ? ಎಂದು ಯುವಕನನ್ನು ಕೇಳಿದ್ದಾರೆ. ಅಲ್ಲದೇ ಪೋಷಕರಿಗೆ ಫೋನ್‌ ಮಾಡು ಎಂದು ಯುವತಿಗೆ ಬೆದರಿಕೆ ಹಾಕಿರುವುದು ವಿಡಿಯೋದಲ್ಲಿದೆ.

ಮೊಬೈಲ್‌ನಲ್ಲಿ ವಿಡಿಯೋ ಮಾಡಿ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಈ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದರಿಂದ ರಾಮನಗರ ಗ್ರಾಮಾಂತರ ಪೊಲೀಸರು, ಒಬ್ಬನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನೂ ಓದಿ | Bengaluru stampede case: ಬೆಂಗಳೂರು ಕಾಲ್ತುಳಿತ ಕೇಸ್‌; ಬಿಜೆಪಿ ಉಗ್ರ ಪ್ರತಿಭಟನೆ- ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹ

ಈಜಲು ಹೋದ ಬಾಲಕರಿಬ್ಬರು ನೀರುಪಾಲು

ಮಂಡ್ಯ : ಸಕ್ಕರೆನಾಡು ಮಂಡ್ಯದಲ್ಲಿ ಭಾನುವಾರ ಬೆಳ್ಳಂ ಬೆಳಗ್ಗೆ ಘೋರ ದುರಂತವೊಂದು ಸಂಭವಿಸಿದೆ. ಹಳ್ಳದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ(Tragedy in Mandya) ನಡೆದಿದೆ. ಮದ್ದೂರು ತಾಲೂಕಿನ ಕ್ಯಾತಘಟ್ಟ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದ್ದು, ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಮೃತ ಬಾಲಕರನ್ನು ಆಲಭುಜನಹಳ್ಳಿಯ ಚೇತನ್ (14) ಹಾಗೂ ದರ್ಶನ್ (15) ಎಂದು ಗುರುತಿಸಲಾಗಿದೆ. ಇಬ್ಬರು ಬಾಲಕರ ಶವಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಕೆಎಂ ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕೆಲವು ದಿನಗಳ ಹಿಂದೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೈಜಿ ಗುಡ್ಡ ಜಲಾಶಯದಲ್ಲಿ ಆಟವಾಡಲು ಹೋಗಿದ್ದ ಮೂವರು ಯುವತಿಯರು ಮೃತಪಟ್ಟಿದ್ದು, ಈ ವೇಳೆ ಅವರ ಜತೆಗಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿತ್ತು. ಡ್ಯಾಮ್‌ ನೀರಿನಲ್ಲಿ ಮುಳುಗಿ ಬೆಂಗಳೂರು ಮೂಲದ ರಾಘವಿ (18) ಮಧುಮಿತ (20) ಹಾಗೂ ರಮ್ಯಾ (22) ಎಂಬುವವರು ಮೃತಪಟ್ಟಿದ್ದರು.

ಈ ಸುದ್ದಿಯನ್ನೂ ಓದಿ: Bagalkot News: ಮಲಪ್ರಭಾ ನದಿಯಲ್ಲಿ ಮುಳುಗಿ ಯೋಧ ಸೇರಿ ಇಬ್ಬರ ಸಾವು; ಬಾಲಕನ ರಕ್ಷಿಸಲು ಹೋಗಿ ನೀರುಪಾಲು

ವೈ.ಜಿ. ಗುಡ್ಡ ಗ್ರಾಮದ ಸಂಬಂಧಿಕರ ಮನೆಗೆ ಯುವತಿಯರು ಬಂದಿದ್ದರು. ಮಧ್ಯಾಹ್ನ ಮನೆಯಿಂದ ಏಳು ಮಂದಿ ಸಮೀಪದ ಜಲಾಶಯಕ್ಕೆ ಭೇಟಿ ನೀಡಿದ್ದರು. ಹಿನ್ನೀರಿಗೆ ಇಳಿದು ಆಟವಾಡುತ್ತಿದ್ದ ಯುವತಿಯರ ಪೈಕಿ, ಒಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ಮುಳುಗತೊಡಗಿದ್ದಾರೆ. ಮುಳುಗುತ್ತಿದ್ದ ಯುವತಿಯನ್ನು ರಕ್ಷಿಸಲು ಉಳಿದಿಬ್ಬರು ಮುಂದಾಗಿದ್ದಾರೆ. ಆಗ ಅವರು ಸಹ ನೀರಿನ ಸೆಳೆತಕ್ಕೆ ಸಿಲುಕಿ ಮುಳಗತೊಡಗಿದ್ದಾರೆ. ಕಣ್ಣೆದುರಿಗೆ ಕುಟುಂಬದ ಯುವತಿಯರು ಮುಳುಗುತ್ತಿದ್ದನ್ನು ಕಂಡು ಉಳಿದವರು ನೆರವಿಗಾಗಿ ಕೂಗಿಕೊಂಡಿದ್ದಾರೆ. ಸ್ಥಳಕ್ಕೆ ಸ್ಥಳೀಯರು ಬರುವಷ್ಟರಲ್ಲಿ ಮೂವರು ಯುವತಿಯರು ನೀರು ಪಾಲಾಗಿದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »