Karunadu Studio

ಕರ್ನಾಟಕ

Second Marriage: 2ನೇ ಮದುವೆಯಾಗುತ್ತಿದ್ದ ಪತಿಗೆ ಮಂಟಪದಲ್ಲೇ ಚಪ್ಪಲಿಯಿಂದ ಬಾರಿಸಿದ ಪತ್ನಿ! – Kannada News | The wife who hit the husband with a slipper in the wedding hall


ಚಿತ್ರದುರ್ಗ: ಎರಡನೇ ಮದುವೆಯಾಗುತ್ತಿದ್ದ (Second Marriage) ಪತಿಗೆ ಮಂಟಪದಲ್ಲೇ ಮೊದಲ ಪತ್ನಿ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಹೊಡೆದಿರುವ ಘಟನೆ ಚಿತ್ರದುರ್ಗ (Chitradurga News) ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. 4 ವರ್ಷದ ಹಿಂದೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮುಶೇನಾಳದ‌ ತನುಜಾ ಎಂಬಾಕೆ, ಚಿಕ್ಕಮಗಳೂರು ಜಿಲ್ಲೆಯ ಅರಸೀಕೆರೆಯ ತಿಪ್ಪಘಟ್ಟದ ಕಾರ್ತಿಕ್ ನಾಯ್ಕ್‌ನನ್ನು ಕೈಹಿಡಿದಿದ್ದಳು.

ಹೀಗಿದ್ದೂ ಕಾರ್ತಿಕ್ ಯಾರಿಗೂ ಗೊತ್ತಾಗದಂತೆ ಚಿತ್ರದುರ್ಗದಲ್ಲಿ 2ನೇ ಮದುವೆಗೆ ಪ್ಲಾನ್ ಮಾಡಿದ್ದ. ಮಾಹಿತಿಗಳ ಪ್ರಕಾರ, ವರದಕ್ಷಿಣೆ ಆಸೆಗೆ ಮತ್ತೊಮ್ಮೆ‌ ಹಸೆಮಣೆ ಏರಲು ಸಿದ್ಧವಾಗಿದ್ದ ಎನ್ನಲಾಗಿದೆ. ಈ ವಿಚಾರ ಹೇಗೋ ಮೊದಲ ಪತ್ನಿಯ ಕಿವಿಗೆ ಬಿದ್ದಿದೆ. ಸುದ್ದಿ ತಿಳಿದು ಕುಟುಂಬಸ್ಥರೊಂದಿಗೆ ಮಂಟಪಕ್ಕೇ ಬಂದು ಪತ್ನಿ ಗಂಡನಿಗೆ ಧರ್ಮದೇಟು ಕೊಟ್ಟಿದ್ದಾಳೆ. ಇದರಿಂದ ಗಂಡನ ಎರಡನೇ ಮದುವೆಗೆ ಬ್ರೇಕ್ ಬಿದ್ದಿದೆ. ಚಿತ್ರದುರ್ಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇತ್ತ ಮದುವೆಗೆ ತಯಾರಾಗಿದ್ದ ವಧುವಿನ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ.

ಕಾರ್ತಿಕ್‌ ಜತೆ ನನಗೆ 4 ವರ್ಷಗಳ ಹಿಂದೆ ಮದುವೆಯಾಗಿತ್ತು. ವರದಕ್ಷಿಣೆಗಾಗಿ ನನಗೆ ತುಂಬಾ ಚಿತ್ರಹಿಂಸೆ ನೀಡಿದ್ದಾರೆ. ವರದಕ್ಷಿಣೆಯೂ ನೀಡಲಾಗಿದೆ. ಆದರೂ ನನ್ನ ಗಂಡ ಎರಡನೇ ಮದುವೆಗೆ ಮುಂದಾಗಿದ್ದಾನೆ ಎಂದು ಮೊದಲ ಪತ್ನಿ ತನುಜಾ ಹೇಳಿದ್ದಾರೆ.

ಮದುವೆಯಾಗಿ ಈ ರೀತಿ ಮೋಸ ಮಾಡುವವರಿಗೆ 10 ವರ್ಷ ಜೈಲಿಗೆ ಹಾಕಬೇಕು. ವರದಕ್ಷಿಣೆ ಕೂಡ ಪಡೆದಿದ್ದಾನೆ. ಅಳಿಯ ಎರಡನೇ ಮದುವೆಯಾಗುತ್ತಿದ್ದ ಎಂಬ ವಿಷಯ ತಿಳಿದು ಮದುವೆ ನಿಲ್ಲಿಸಿದ್ದೇವೆ. ನಮಗೆ ನ್ಯಾಯ ಸಿಗಬೇಕು ಎಂದು ತನುಜಾ ತಂದೆ ನಾಗರಾಜ ನಾಯ್ಕ್‌ ಹೇಳಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »