Karunadu Studio

ಕರ್ನಾಟಕ

IND vs ENG: ಇಂಗ್ಲೆಂಡ್‌ ವಿರುದ್ಧದ ಮೊದಲನೇ ಟೆಸ್ಟ್‌ಗೂ ಮುನ್ನ ರಿಷಭ್‌ ಪಂತ್‌ಗೆ ಗಾಯ! – Kannada News | IND vs ENG: Injury Scare For India Ahead Of 1st Test Against England, Rishabh Pant Hit On Left Arm


ನವದೆಹಲಿ: ಇಂಗ್ಲೆಂಡ್‌ ವಿರುದ್ದದ ಮುಂಬರುವ ಐದು ಪಂದ್ಯಗಳ ಟೆಸ್ಟ್‌ ಸರಣಿಗೂ (IND vs ENG) ಮುನ್ನ ಶುಭಮನ್‌ ಗಿಲ್‌ ನಾಯಕತ್ವದ ಭಾರತ ತಂಡಕ್ಕೆ ಗಾಯದ ಭೀತಿ ಎದುರಾಗಿದೆ. ಟೀಮ್‌ ಇಂಡಿಯಾ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ (Rishabh Pant) ಅವರು ಅಭ್ಯಾಸದ ಸಂದರ್ಭದಲ್ಲಿ ಗಾಯಕ್ಕೆ ತುತ್ತಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೊದಲನೇ ಟೆಸ್ಟ್‌ಗೂ ಮುನ್ನ ಭಾರತ ತಂಡಕ್ಕೆ (Indain Cricket Team) ಗಾಯದ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಕಾರಣ ಇದೀಗ ಭಾರತ ತಂಡದಲ್ಲಿ ರಿಷಭ್‌ ಪಂತ್‌ ಬ್ಯಾಟಿಂಗ್‌ನಲ್ಲಿ ಕೀ ಆಟಗಾರ. ಆದ್ದರಿಂದ ಅವರು ಗಾಯಕ್ಕೆ ತುತ್ತಾಗಿರುವುದು ಟೀಮ್‌ ಇಂಡಿಯಾಗೆ ತಲೆ ಬಿಸಿ ಉಂಟು ಮಾಡಿದೆ.

ಭಾರತ ತಂಡಕ್ಕೆ ಶುಭಮನ್‌ ಗಿಲ್‌ ನಾಯಕನಾಗಿದ್ದು, ಇವರಿಗೆ ಉಪ ನಾಯಕನಾಗಿ ರಿಷಭ್‌ ಪಂತ್‌ಗೆ ಉಪ ನಾಯಕತ್ವವನ್ನು ನೀಡಲಾಗಿದೆ. ಅಂದ ಹಾಗೆ ಪಂತ್‌ ವೈಟ್‌ ಬಾಲ್‌ ಕ್ರಿಕೆಟ್‌ನಲ್ಲಿ ಹೇಳಿಕೊಳ್ಳುವಂಥ ಫಾರ್ಮ್‌ನಲ್ಲಿ ಇಲ್ಲ. ಆದರೆ, ಅವರು ಟೆಸ್ಟ್‌ ಕ್ರಿಕೆಟ್‌ನಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆ. ತಮ್ಮ ಇಂಗ್ಲೆಂಡ್‌ ಚೊಚ್ಚಲ ಶತಕವನ್ನು ಕೂಡ ಸಿಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಗಾಯಕ್ಕೆ ತುತ್ತಾಗಿರುವುದು ಟೀಮ್‌ ಇಂಡಿಯಾಗೆ ಭಾರಿ ಹಿನ್ನಡೆಯಾಗಿದೆ.

IND vs ENG ಟೆಸ್ಟ್‌ ಸರಣಿಯಲ್ಲಿ ಭಾರತ ತಂಡಕ್ಕೆ ಕೀ ಬೌಲರ್‌ ಆರಿಸಿದ ಮ್ಯಾಥ್ಯೂ ಹೇಡನ್‌!

ರಿಷಭ್‌ ಪಂತ್‌ಗೆ ಏನಾಗಿದೆ?

ಭಾರತ ತಂಡದ ಅಭ್ಯಾಸದ ವೇಳೆ ರಿಷಭ್‌ ಪಂತ್‌ ದೊಡ್ಡ ಗಾಯದಿಂದ ತಪ್ಪಿಸಿಕೊಂಡಿದ್ದಾರೆ. ಬೆಕೆನ್‌ಹ್ಯಾಮ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದ ಸಂದರ್ಭದಲ್ಲಿ ರಿಷಭ್‌ ಪಂತ್‌ ಅವರ ಎಡಗೈ ಚೆಂಡು ಬಲವಾಗಿ ಬಡಿಯಿತು. ಆದರೆ, ಪಂತ್‌ ಗಂಭೀರ ಗಾಯಕ್ಕೆ ತುತ್ತಾಗಿಲ್ಲ ಹಾಗೂ ಅವರು ಸಂಪೂರ್ಣ ಫಿಟ್‌ ಆಗಿದ್ದಾರೆಂದು ತಂಡದ ವೈದ್ಯರು ಹೇಳಿರುವುದನ್ನು ರೆವ್‌ಸ್ಟೋರ್ಟ್ಸ್‌ ವರದಿ ಮಾಡಿದೆ.

ಅಭ್ಯಾಸ ಪಂದ್ಯದಲ್ಲಿ ಕೆಎಲ್‌ ರಾಹುಲ್‌ ಮಿಂಚು

ಇಂಗ್ಲೆಂಡ್‌ ಲಯನ್ಸ್‌ ವಿರುದ್ಧ ಎರಡನೇ ಅನಧಿಕೃತ ಟೆಸ್ಟ್‌ ಪಂದ್ಯದಲ್ಲಿ ಕೆಎಲ್‌ ರಾಹುಲ್‌ ಮಿಂಚಿನ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದ್ದಾರೆ. ಅವರು ಪ್ರಥಮ ಇನಿಂಗ್ಸ್‌ನಲ್ಲಿ ಶತಕವನ್ನು ಬಾರಿಸಿದ್ದಾರೆ ಹಾಗೂ ದ್ವಿತೀಯ ಇನಿಂಗ್ಸ್‌ನಲ್ಲಿ 51 ರನ್‌ಗಳನ್ನು ಕಲೆ ಹಾಕಿದ್ದಾರೆ. ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಅನುಪಸ್ಥಿತಿಯಲ್ಲಿ ಭಾರತ ತಂಡಕ್ಕೆ ಕೆಎಲ್‌ ರಾಹುಲ್‌ ಅತ್ಯಂತ ಅನುಭವಿ ಬ್ಯಾಟ್ಸ್‌ಮನ್‌ ಆಗಿದ್ದಾರೆ. ಹಾಗಾಗಿ ಇದೀಗ ಅಭ್ಯಾಸ ಪಂದ್ಯದಲ್ಲಿ ರನ್‌ ಗಳಿಸುರುವುದು ಟೀಮ್‌ ಇಂಡಿಯಾಗೆ ಶುಭ ಸಂಕೇತವಾಗಿದೆ.

IND vs ENG: ʻನಾಚಿಕೆಗೇಡಿನ ಸಂಗತಿʼ-ರೋಹಿತ್‌, ಕೊಹ್ಲಿ ಟೆಸ್ಟ್‌ ನಿವೃತ್ತಿ ಬಗ್ಗೆ ಕ್ರಿಸ್‌ ವೋಕ್ಸ್‌ ಪ್ರತಿಕ್ರಿಯೆ!

ಕೆಎಲ್‌ ರಾಹುಲ್‌ಗೆ ಯಾವ ಕ್ರಮಾಂಕ?

ಕೆಎಲ್‌ ರಾಹುಲ್‌ ಅವರು ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತ್ಯಂತ ಕೌಶಲಭರಿತ ಬ್ಯಾಟ್ಸ್‌ಮನ್‌ ಆಗಿದ್ದಾರೆ. ಅವರು ಟೆಸ್ಟ್‌ ಕ್ರಿಕೆಟ್‌ನಲ್ಲಿ ರೋಹಿತ್‌ ಶರ್ಮಾ ಜೊತೆ ಸಾಕಷ್ಟು ಬಾರಿ ಇನಿಂಗ್ಸ್‌ ಆರಂಭಿಸಿದ್ದಾರೆ. ಇದೀಗ ರೋಹಿತ್‌ ಶರ್ಮಾ ಅನುಪಸ್ಥಿತಿಯಲ್ಲಿ ಯಶಸ್ವಿ ಜೈಸ್ವಾಲ್‌ ಜೊತೆ ಇನಿಂಗ್ಸ್‌ ಆರಂಭಿಸಲು ಕೆಎಲ್‌ ರಾಹುಲ್‌ಗೆ ಹೇಳಬಹುದು. ಆ ಮೂಲಕ ಶುಭಮನ್‌ ಗಿಲ್‌ ಎಂದಿನಂತೆ ಮೂರನೇ ಕ್ರಮಾಂಕದಲ್ಲಿ ಆಡಿದರೆ, ನಾಲ್ಕನೇ ಕ್ರಮಾಂಕದಲ್ಲಿ ಮತ್ತೊಬ್ಬ ಕನ್ನಡಿಗ ಕರುಣ್‌ ನಾಯರ್‌ ಆಡುವ ಮೂಲಕ ವಿರಾಟ್‌ ಕೊಹ್ಲಿಯ ಸ್ಥಾನವನ್ನು ತುಂಬಬಹುದು.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
Translate »