Karunadu Studio

ಕರ್ನಾಟಕ

Bengaluru Stampede: ಕಾಲ್ತುಳಿತ ಪ್ರಕರಣ; ಅಮಾನತು ಪ್ರಶ್ನಿಸಿ ಸಿಎಟಿ ಮೊರೆ ಹೋದ ಐಪಿಎಸ್ ಅಧಿಕಾರಿ – Kannada News | Suspended IPS officer moves CAT challenging State government order


ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ (Bengaluru Stampede) ಸಂಬಂಧಿಸಿ ಅಮಾನತುಗೊಂಡ ಐವರು ಅಧಿಕಾರಿಗಳಲ್ಲಿ ಒಬ್ಬರಾದ ಹಿರಿಯ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರು ತಮ್ಮ ಅಮಾನತು ಪ್ರಶ್ನಿಸಿ ಕೇಂದ್ರೀಯ ಆಡಳಿತ ನ್ಯಾಯಮಂಡಳಿ‌ (ಸಿಎಟಿ)ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಪಶ್ಚಿಮ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅವರು ತಮ್ಮ ಅಮಾನತು ಆದೇಶ ಪ್ರಶ್ನಿಸಿ ಸಿಎಟಿಗೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮಂಡಳಿಯು ಮುಂದಿನ ದಿನಗಳಲ್ಲಿ ಈ ವಿಷಯವನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ್‌, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಎಚ್‌.ಟಿ.ಶೇಖರ್, ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಎಚ್‌.ಟಿ.ಶೇಖರ್, ಎಸಿಪಿ ಬಾಲಕೃಷ್ಣ, ಕಬ್ಬನ್‌ಪಾರ್ಕ್‌ ಇನ್ಸ್‌ಪೆಕ್ಟರ್‌ ಗಿರೀಶ್‌.ಎ.ಕೆ ಅವರನ್ನು ಅಮಾನತು ಮಾಡಲಾಗಿತ್ತು.

ಪೊಲೀಸರ ಅಮಾನತು ಸಮರ್ಥಿಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯ, ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸದವರನ್ನು ಪ್ರಾಥಮಿಕವಾಗಿ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದರು. ಅಮಾನತು ಆದೇಶದಲ್ಲಿ ಪೊಲೀಸ್ ಅಧಿಕಾರಿಗಳ ಕರ್ತವ್ಯ ಲೋಪ ಕಂಡುಬಂದಿದೆ ಎಂದು ಹೇಳಲಾಗಿತ್ತು.

ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟು, 56 ಮಂದಿ ಗಾಯಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೆ ನಾಲ್ವರನ್ನು ಬಂಧಿಸಲಾಗಿದೆ.

ಈ ಸುದ್ದಿಯನ್ನೂ ಓದಿ | Tumkur News: ಕಾಲ್ತುಳಿತದಲ್ಲಿ ಮೃತಪಟ್ಟ ಮನೋಜ್‌ ಕುಟುಂಬಕ್ಕೆ ಮತ್ತೊಂದು ಆಘಾತ; ಮೊಮ್ಮಗನ ಅಗಲಿಕೆ ನೋವಲ್ಲಿ ಅಜ್ಜಿಯೂ ಸಾವು!

ಪೊಲೀಸ್‌ ಆಯುಕ್ತರಿಂದ ಕರ್ತವ್ಯಲೋಪ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಐಪಿಎಲ್‌ ಟ್ರೋಫಿ (IPL trophy) ಗೆದ್ದ ಆರ್‌ಸಿಬಿ (RCB) ವಿಜಯೋತ್ಸವ ಆಚರಣೆ ಸಂಬಂಧ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ (Bengaluru Stampede) 11 ಜನರು ಸಾವನ್ನಪ್ಪಿದ್ದರು. ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ (Chinnaswamy Stadium Stampede) ದುರಂತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮೌನ ಮುರಿದಿದ್ದಾರೆ. ದುರಂತದ ದಿನದಂದು ಮಧ್ಯಾಹ್ನ 3.50 ಕ್ಕೆ ಕಾಲ್ತುಳಿತ ಸಂಭವಿಸಿದೆ, ಆದರೆ ಸಂಜೆ 5.45 ಕ್ಕೆ ನನಗೆ ಮಾಹಿತಿ ನೀಡಲಾಯಿತು. ಇದರಲ್ಲಿ ಪೊಲೀಸ್​ ಆಯುಕ್ತರ (Police commissioner) ಕರ್ತವ್ಯಲೋಪ ಕಂಡುಬಂದಿದ್ದು, ಹೀಗಾಗಿ ಅಮಾನತು ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆಗಳು ರಾಜಕೀಯ ಪ್ರೇರಿತ ಎಂದ ಅವರು ದುರಂತದ ದಿನದಂದು ವಿಧಾನಸೌಧದಲ್ಲಿ ಹಾಜರಿದ್ದ ಬಗ್ಗೆ ಸ್ಪಷ್ಟಪಡಿಸಿದರು. ʼನನ್ನನ್ನು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಹ್ವಾನಿಸಲಾಗಿಲ್ಲ. ಮಧ್ಯಾಹ್ನ 3.50 ಕ್ಕೆ ಕಾಲ್ತುಳಿತ ಸಂಭವಿಸಿದೆ, ಆದರೆ ಸಂಜೆ 5.45 ಕ್ಕೆ ನನಗೆ ಮಾಹಿತಿ ನೀಡಲಾಯಿತು. ನಗರ ಪೊಲೀಸ್ ಆಯುಕ್ತರು ನನಗೆ ಮೊದಲು ಮಾಹಿತಿ ನೀಡಬೇಕಿತ್ತು. ಆದರೆ ನನಗೆ ಮಾಹಿತಿ ನೀಡಿಲ್ಲ. ಕರ್ತವ್ಯಲೋಪ ಮಾಡಿದವರ ಮೇಲೆ ಕ್ರಮವಾಗಿದೆʼ ಎಂದು ನಗರ ಪೊಲೀಸ್​ ಆಯುಕ್ತ ದಯಾನಂದ ಅವರ ಅಮಾನತನ್ನು ಸಮರ್ಥಿಸಿಕೊಂಡರು

ಪೊಲೀಸ್ ಅಧಿಕಾರಿಗಳನ್ನು ಬೆದರಿಸಿದ್ದಾರೆ ಎಂದು ಬಿಜೆಪಿ ಮತ್ತು ಕೇಂದ್ರ ಸಚಿವ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರ ಆರೋಪಗಳನ್ನು ತಳ್ಳಿಹಾಕಿದ ಅವರು, ʼಇದರಲ್ಲಿ ನನ್ನ ತಪ್ಪೇನು? ಪೊಲೀಸರ ಮೇಲೆ ಬಿಜೆಪಿಗೆ ಹಠಾತ್ ಪ್ರೀತಿ ಬಂದಿರುವುದು ರಾಜಕೀಯ ನಾಟಕವಲ್ಲದೆ ಬೇರೇನೂ ಅಲ್ಲ. ಅವರೇ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದರು – ನಾವು ಅದಕ್ಕೆ ಒಪ್ಪಿದ್ದೇವೆ. ಹಾಗಾದರೆ ಈಗ ಸಮಸ್ಯೆ ಏನು?ʼ ಎಂದು ಸಿಎಂ ಪ್ರಶ್ನಿಸಿದ್ದಾರೆ.

ವಿಧಾನಸೌಧದ ಭದ್ರತಾ ಮುಖ್ಯಸ್ಥ ಡಿಸಿಪಿ ಎಂ.ಎನ್. ಕರಿಬಸವನ ಗೌಡ ಅವರು ಸೌಧದಲ್ಲಿ ಸನ್ಮಾನ ಸಮಾರಂಭ ನಡೆಸದಂತೆ ಎಚ್ಚರಿಕೆ ನೀಡಿದಾಗ, ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮಕ್ಕೆ ಷರತ್ತುಗಳನ್ನು ವಿಧಿಸಿದ್ದರು ಎಂದು ಸ್ಪಷ್ಟಪಡಿಸಿದರು. ಅವುಗಳನ್ನು ನಿರ್ವಹಿಸಲಾಯಿತು. ಪೊಲೀಸರು ತೆಗೆದುಕೊಂಡ ಕ್ರಮಗಳಿಗೆ ಒಪ್ಪಿಕೊಂಡು ಅದಕ್ಕೆ ಅನುಗುಣವಾಗಿ ಕಾರ್ಯಕ್ರಮ ನಡೆಸಿದ್ದಾರೆ, ಅದರಲ್ಲಿ ತಪ್ಪು ಎಲ್ಲಿದೆ ಎಂದು ಅವರು ಕೇಳಿದರು.

ನನಗೆ ನೇರವಾಗಿ ಮಾಹಿತಿ ನೀಡಲಾಗಿಲ್ಲ. ಘಟನೆ ವಿಧಾನಸೌಧದ ಒಳಗೆ ನಡೆದಿಲ್ಲ. ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ನಾವು ಆಯೋಜಿಸಿಲ್ಲ. ಸತ್ಯವತಿಯನ್ನು ದೂಷಿಸುವುದು ಸರಿಯಲ್ಲ. ಘಟನೆ ಬೇರೆಡೆ ನಡೆದಾಗ ಅವರ ವಿರುದ್ಧ ಏಕೆ ಕ್ರಮ ಕೈಗೊಳ್ಳಬೇಕು ಎಂದು ಅವರು ಕೇಳಿದರು. ಭದ್ರತಾ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡುವುದು ಪೊಲೀಸ್ ಆಯುಕ್ತರ ಜವಾಬ್ದಾರಿ. ಅದು ಆಗಲಿಲ್ಲ. ಪೊಲೀಸರು ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಾರೆ ಎಂದು ನನ್ನ ಕಾರ್ಯದರ್ಶಿ ನನಗೆ ಹೇಳಿದರು. ಅದರ ಆಧಾರದ ಮೇಲೆ ನಾನು ಒಪ್ಪಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಈ ಸುದ್ದಿಯನ್ನೂ ಓದಿ | CM Siddaramaiah: ಸಿಎಂ ಸಿದ್ದರಾಮಯ್ಯ ನಾಳೆ ನವದೆಹಲಿಗೆ; ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್‌ ಜತೆ ಚರ್ಚೆ

ಪೊಲೀಸ್ ಆಯುಕ್ತರನ್ನು ಮಾತ್ರವಲ್ಲದೆ ಐದು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ತಮ್ಮ ಆಪ್ತ ಕಾರ್ಯದರ್ಶಿ ಗೋವಿಂದರಾಜ್ ಅವರನ್ನು ಸಹ ತೆಗೆದುಹಾಕಲಾಗಿದೆ. ನಾವು ನಿಜವಾಗಿಯೂ ತಪ್ಪಿತಸ್ಥರಾಗಿದ್ದರೆ, ಅದು ಸರ್ಕಾರಕ್ಕೆ ಕಪ್ಪು ಚುಕ್ಕೆಯಾಗುತ್ತಿತ್ತು. ಆದರೆ ನಮ್ಮ ಕಡೆಯಿಂದ ಯಾವುದೇ ತಪ್ಪಿಲ್ಲ ಎಂದು ಸಿಎಂ ಸಮರ್ಥಿಸಿಕೊಂಡಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »