Karunadu Studio

ಕರ್ನಾಟಕ

MLA K H PuttaswamyGowda: ಮುಖ್ಯಮಂತ್ರಿಗಳ ಎದುರು ಮೂರು ಬೇಡಿಕೆ ಈಡೇರಿಸಲು ಮನವಿ ಮಾಡುವೆ: ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ. – Kannada News | I will appeal to the Chief Minister to fulfill three demands: MLA K.H. Puttaswamy Gowda


ಚಿಕ್ಕಬಳ್ಳಾಪುರ: ಗೌರಿಬಿದನೂರು ಪಟ್ಟಣಕ್ಕೆ ಮೊದಲ ಬಾರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಶಾಸಕನಾಗಿ ಹಾಗೂ ತಾಲೂಕಿನ ಅಭಿವೃದ್ಧಿ ಕುರಿತಾಗಿ  ಪ್ರಧಾನವಾಗಿ ೩ ಬೇಡಿಕೆಗಳಿದ್ದು ಅವುಗಳ ಈಡೇರಿಸುವಂತೆ ಮನವಿ ಮಾಡಲಾಗುವುದು ಎಂದು ಶಾಸಕ ಪುಟ್ಟ ಸ್ವಾಮಿಗೌಡ ತಿಳಿಸಿದರು.

ನಗರದ ನೇತಾಜಿ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆಸಿದ ಸುದ್ದಿಗೋಷ್ಟಿ ಯಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: M. Chinnaswamy Stadium: ಸ್ಥಳಾಂತರವಾಗುತ್ತಾ ಚಿನ್ನಸ್ವಾಮಿ ಸ್ಟೇಡಿಯಂ: ಸಿಎಂ ಹೇಳಿದ್ದೇನು?

ಗೌರಿಬಿದನೂರು ನಗರಕ್ಕೆ ಒಳಚರಂಡಿ ವ್ಯವಸ್ಥೆ ಮಾಡಬೇಕಾಗಿದ್ದು ಇದಕ್ಕಾಗಿ ೧೮೦ ಕೋಟಿ ಅನುದಾನ ಬೇಕಾಗಿದೆ. ಇದನ್ನು ಒದಗಿಸಿದರೆ ನಗರದ ಆರೋಗ್ಯವೃದ್ಧಿಗೆ ಸಹಾಯ ಮಾಡಿದಂತೆ ಆಗಲಿದೆ ಎಂದರು.

ಎರಡನೆಯದಾಗಿ ಅಲೀಪುರಕ್ಕೆ ಪಟ್ಟಣ ಪಂಚಾಯಿತಿ ಸ್ಥಾನಮಾನ ನೀಡಬೇಕು ಟೋಲ್‌ನಿಂದ ಹಿಂದೂಪುರ ಗಡಿಯವರೆಗಿನ ರಸ್ತೆಯಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿ ಅಮಾಯಕ ಜನರು ಅಸುನೀಗುತ್ತಿದ್ದಾರೆ.ಇದು ತಪ್ಪಬೇಕಾದರೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಬೇಕಿದೆ.ಈ ಮೂರು ಬೇಡಿಕೆಗಳು ಸಮಂಜಸವಾಗಿದ್ದು ಇವುಗಳ ಪೈಕಿ ಒಂದಷ್ಟಾದರೂ ಈಡೇರುತ್ತವೆ ಎಂಬ ನಂಬಿಕೆಯಿದೆ ಎಂದರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »