Karunadu Studio

ಕರ್ನಾಟಕ

AUS vs SA: ಡಬ್ಲ್ಯುಟಿಸಿ ಫೈನಲ್‌ ಆಡಿ ರಿಕಿ ಪಾಂಟಿಂಗ್‌ರ ದಾಖಲೆ ಸರಿಗಟ್ಟಿದ ಸ್ಟೀವನ್ ಸ್ಮಿತ್! – Kannada News | Steve Smith equals Ricky Ponting’s all-time record for Australia with WTC Final appearance at Lord’s


ಲಂಡನ್‌: ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಹಾಗೂ ಸ್ಟಾರ್‌ ಬ್ಯಾಟ್ಸ್‌ಮನ್‌ ಸ್ಟೀವ್ ಸ್ಮಿತ್ (Steven Smith)ಅವರು ತಮ್ಮದೇ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ (Ricky Pointing) ದಾಖಲೆಯೊಂದನ್ನು ಸರಿಗಟ್ಟಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಇಲ್ಲಿನ ಐತಿಹಾಸಿಕ ಲಾರ್ಡ್ಸ್‌ ಅಂಗಣದಲ್ಲಿ ನಡೆಯುತ್ತಿರುವ ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ (WTC 2025 Final) ಫೈನಲ್ ಪಂದ್ಯದಲ್ಲಿ ಆಡುವ ಮೂಲಕ ಸ್ಮಿತ್, ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ 6ನೇ ಐಸಿಸಿ ಟೂರ್ನಿಯ ಫೈನಲ್ ಪಂದ್ಯವನ್ನು ಆಡಿದಂತಾಯಿತು. ಆ ಮೂಲಕ ಇಷ್ಟೇ ಐಸಿಸಿ ಟೂರ್ನಿಗಳ ಫೈನಲ್‌ ಆಡಿರುವ ರಿಕಿ ಪಾಂಟಿಂಗ್‌ ದಾಖಲೆಯನ್ನು ಸರಿಗಟ್ಟಿದ್ದಾರೆ.

ಐಸಿಸಿ ಟೂರ್ನಿಗಳಲ್ಲಿ ಆಸ್ಟ್ರೇಲಿಯಾ ತಂಡ ಪ್ರಾಬಲ್ಯ ಮೆರೆದಿದೆ. ಐದು ಬಾರಿ ಏಕದಿನ ವಿಶ್ವಕಪ್ ಹಾಗೂ ಒಮ್ಮೆ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇನ್ನು ಕಳೆದ ಬಾರಿ ಟೆಸ್ಟ್ ಚಾಂಪಿಯನ್‌ಷಿಪ್‌ ಟ್ರೋಫಿಯನ್ನು ಕೂಡ ಮುಡಿಗೇರಿಸಿಕೊಂಡಿತ್ತು. ಭಾರತ ತಂಡವನ್ನು ಮಣಿಸಿ ಆಸೀಸ್‌ ಚೊಚ್ಚಲ ಟೆಸ್ಟ್‌ ಚಾಂಪಿಯನ್‌ ಆಗಿತ್ತು. ಇದೀಗ ಸತತ ಎರಡನೇ ಬಾರಿ ಫೈನಲ್‌ಗೇರಿರುವ ಆಸ್ಟ್ರೇಲಿಯಾ ತಂಡ, ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಎರಡನೇ ಟ್ರೋಫಿಯನ್ನು ಗೆಲ್ಲಲು ಎದುರು ನೋಡುತ್ತಿದೆ.

ಆಸೀಸ್‌ ಮಾಜಿ ನಾಯಕ ಸ್ಟೀವನ್ ಸ್ಮಿತ್ ತಾವಾಡಿರುವ ಐದು ಐಸಿಸಿ ಫೈನಲ್‌ಗಳಲ್ಲಿ ನಾಲ್ಕು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ರಿಕಿ ಪಾಂಟಿಂಗ್ ತಮ್ಮ ನಾಯಕತ್ವದಲ್ಲಿ ಎರಡು ಬಾರಿ ಸೇರಿದಂತೆ ಒಟ್ಟಾರೆ ಐದು ಬಾರಿ ಚಾಂಪಿಯನ್‌ ಆಗಿದ್ದಾರೆ. ಇದೀಗ ಸ್ಟೀವನ್‌ ಸ್ಮಿತ್‌, ರಿಕಿ ಪಾಂಟಿಂಗ್‌ ಅವರ ದಾಖಲೆಯನ್ನು ಸರಿಗಟ್ಟುವ ಅವಕಾಶವನ್ನು ಹೊಂದಿದ್ದಾರೆ.

WTC Final 2025: ಮೂರನೇ ಸ್ಥಾನಿ ಭಾರತಕ್ಕೆ ಸಿಕ್ಕ ಬಹುಮಾನ ಮೊತ್ತವೆಷ್ಟು?

ಹೆಚ್ಚು ಬಾರಿ ಐಸಿಸಿ ಫೈನಲ್ಸ್ ಆಡಿದ ಆಟಗಾರರು

ಐಸಿಸಿ ಆಯೋಜನೆಯ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ 9 ಬಾರಿ ಕಾಣಿಸಿಕೊಂಡು ಜಂಟಿ ದಾಖಲೆ ಹೊಂದಿದ್ದರೆ, ರವೀಂದ್ರ ಜಡೇಜಾ (8), ಯುವರಾಜ್ ಸಿಂಗ್ (7) ನಂತರದ ಸ್ಥಾನದಲ್ಲಿದ್ದಾರೆ. ಇನ್ನು ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್, ರಿಕಿ ಪಾಂಟಿಂಗ್, ಶ್ರೀಲಂಕಾದ ಕುಮಾರ್ ಸಂಗಕ್ಕಾರ ಹಾಗೂ ಮಹೇಲಾ ಜಯವರ್ಧನೆ ತಲಾ ಆರು ಬಾರಿ ಐಸಿಸಿ ಫೈನಲ್‌ಗಳಲಿ ಆಡಿದ್ದಾರೆ.

ಅತಿ ಹೆಚ್ಚು ಬಾರಿ ಐಸಿಸಿ ಟ್ರೋಫಿ ಗೆದ್ದ ಆಟಗಾರರು

ಐಸಿಸಿ ಟೂರ್ನಿಗಳಲ್ಲಿ ಅತಿ ಹೆಚ್ಚು ಬಾರಿ ಟ್ರೋಫಿ ಗೆದ್ದ ದಾಖಲೆ ಕೂಡ ರಿಕಿ ಪಾಂಟಿಂಗ್ ಹೆಸರಿನಲ್ಲಿದೆ. ಪಂಟರ್ ಐದು ಬಾರಿ ಈ ಸಾಧನೆ ಮಾಡಿದ್ದಾರೆ. ಸ್ಟೀವನ್ ಸ್ಮಿತ್ 4 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಿದರೆ, ಸ್ಮಿತ್ ಅವರು ಪಂಟರ್‌ನ ಮತ್ತೊಂದು ದಾಖಲೆ ಸರಿಗಟ್ಟಲಿದ್ದಾರೆ.

ಆಸ್ಟ್ರೇಲಿಯಾದ ಆಡಂ ಗಿಲ್ ಕ್ರಿಸ್ಟ್, ಗ್ಲೆನ್ ಮೆಗ್ರಾತ್, ಡೇವಿಡ್ ವಾರ್ನರ್, ಶೇನ್ ವಾಟ್ಸನ್, ಮಿಚೆಲ್ ಸ್ಟಾರ್ಕ್, ಭಾರತದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ತಲಾ 4 ಐಸಿಸಿ ಟ್ರೋಫಿಗಳನ್ನು ಗೆದ್ದು ಸಂಭ್ರಮಿಸಿದ್ದಾರೆ.

WTC final: ಟೆಸ್ಟ್‌ ಫೈನಲ್‌ ಪಂದ್ಯ ಡ್ರಾ-ಟೈ ಆದರೆ ವಿಜೇತರ ನಿರ್ಧಾರ ಹೇಗೆ?

ಆಸ್ಟ್ರೇಲಿಯಾಕ್ಕೆ ಆರಂಭಿಕ ಆಘಾತ

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಆಸ್ಟ್ರೇಲಿಯಾ ತಂಡ, ದಕ್ಷಿಣ ಆಫ್ರಿಕಾ ತಂಡದ ವೇಗಿಗಳಾದ ಕಗಿಸೊ ರಬಾಡ (9ಕ್ಕೆ2) ಹಾಗೂ ಮಾರ್ಕೊ ಯೆನ್ಸನ್‌ (27 ಕ್ಕೆ2) ಬೌಲಿಂಗ್‌ ದಾಳಿಗೆ ಸಿಲುಕಿ ಭೋಜನ ವಿರಾಮದ ವೇಳೆಗೆ 67 ರನ್‌ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. 5 ಬೌಂಡರಿ ಸಹಿತ 26 ರನ್ ಗಳಿಸಿರುವ ಸ್ಟೀವನ್ ಸ್ಮಿತ್ ಆಸ್ಟ್ರೇಲಿಯಾಗೆ ಆಸರೆಯಾಗಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »