Karunadu Studio

ಕರ್ನಾಟಕ

Father Movie: ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ʼಫಾದರ್ʼ ಚಿತ್ರದ ನೂತನ ಪೋಸ್ಟರ್ – Kannada News | Father Movie Father Movie new poster released


ಬೆಂಗಳೂರು: ಫಾದರ್ ಅಂದಾಕ್ಷಣ, ನೆನಪಾಗೋದೇ ಬೆಚ್ಚನೆಯ ಪ್ರೀತಿ. ಅದೊಂದು ರೀತಿ ಕಾಳಜಿಯ ಸಂಕೇತ. ಸುಂದರ ಬದುಕು ರೂಪಿಸುವ ಜೀವ. ಅಂತಹ ಫಾದರ್ ಕುರಿತ (Father Movie) ಈಗಾಗಲೇ ಹಲವು ಕಥೆಗಳಿವೆ. ಸಿನಿಮಾಗಳೂ ಅಪ್ಪಳಿಸಿವೆ. ಆ ಸಾಲಿಗೆ ಅಪರೂಪದ ಕಥಾಹಂದರ ಹೊಂದಿರುವ ಆರ್.ಸಿ. ಸ್ಟುಡಿಯೋಸ್ ನಿರ್ಮಾಣದ ʼಫಾದರ್ʼ ಚಿತ್ರ ಇದೀಗ ಪ್ರೇಕ್ಷಕರ ಮುಂದೆ ಬರಲು ತಯಾರಿ ನಡೆಸುತ್ತಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ಸ್ ತಯಾರಿಯಲ್ಲಿರುವ ಸಿನಿಮಾ ತೆರೆಗೆ ಬರಲು ಸಜ್ಜಾಗುತ್ತಿದೆ. ಜೂ.12 ʼಫಾದರ್ʼ ಚಿತ್ರದ ನಾಯಕ ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬ. ನಾಯಕನ ಹುಟ್ಟುಹಬ್ಬಕ್ಕೆ ವಿಭಿನ್ನ ಹಾಗೂ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಆರ್‌.ಸಿ. ಸ್ಟುಡಿಯೋಸ್ ಹಾಗೂ ಚಿತ್ರತಂಡ ಡಾರ್ಲಿಂಗ್ ಕೃಷ್ಣ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ಆರ್.ಸಿ. ಸ್ಟುಡಿಯೋಸ್ ಮೂಲಕ ಹೊರಬರುತ್ತಿರುವ ಈ ʼಫಾದರ್ʼ ಚಿತ್ರವು ನೋಡುಗರಿಗೊಂದು ಭಾವುಕ ಪಯಣಕ್ಕೆ ಕರೆದೊಯ್ಯುವ ಹೃದಯ ಸ್ಪರ್ಶಿ ಚಿತ್ರ.‌ ʼಫಾದರ್ʼ ಅಂದರೇನೆ ಅದೊಂದು ಶಕ್ತಿ. ಅಂತಹ ಶಕ್ತಿಯುತ ಸಿನಿಮಾದ ಹೈಲೆಟ್ ಅಂದರೆ ಪ್ರಕಾಶ್ ರಾಜ್. ಅವರೇ ಇಲ್ಲಿ ʼಫಾದರ್ʼ. ಇನ್ನು, ಡಾರ್ಲಿಂಗ್ ಕೃಷ್ಣ ಕೂಡ ಪ್ರಮುಖ ಆಕರ್ಷಣೆ. ಇವರಿಬ್ಬರ ಕಾಂಬೋದಲ್ಲಿ ಬರುತ್ತಿರುವ ʼಫಾದರ್ʼ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಅದಕ್ಕೆ ಕಾರಣ, ʼಲವ್ ಮಾಕ್ಟೇಲ್ʼ ಜೋಡಿ ಇಲ್ಲೂ ಒಂದಾಗಿದೆ. ಡಾರ್ಲಿಂಗ್ ಕೃಷ್ಣ ಅವರ ಜತೆ ಅಮೃತಾ ಅಯ್ಯಂಗಾರ್ ಇದ್ದಾರೆ ಎನ್ನುವುದು ಮತ್ತೊಂದು ಸ್ಪೆಷಲ್. ಇವರೊಂದಿಗೆ ಅನೇಕ ನುರಿತ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ಅಲ್ಲಿಗೆ ʼಫಾದರ್ʼ ಸಿನಿಮಾದ ಕುತೂಹಲ ಮತ್ತಷ್ಟು ಹೆಚ್ಚಿದೆ.

ಇಲ್ಲಿ ಸಕ್ಸಸ್‌ಫುಲ್ ನಟ, ನಟಿಯರು ಒಂದೇ ಫ್ರೇಮ್ ನಲ್ಲಿದ್ದಾರೆಂದ ಮೇಲೆ ಆ ನಿರೀಕ್ಷೆ ಮತ್ತಷ್ಟು ಹೆಚ್ಚಿರುವುದು ಸುಳ್ಳಲ್ಲ. ಇದೊಂದು ನಿರೀಕ್ಷೆಯ ಸಿನಿಮಾ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಸಿನಿಮಾ ಸಾಕಷ್ಟು ಕುತೂಹಲ ಹೊಂದಿದೆ. ಅದಕ್ಕೆ ಕಾರಣ ಕಥೆ ಮತ್ತು ಪಾತ್ರಗಳು.

ಆರ್.ಚಂದ್ರು ಅವರಿಗೆ ಎಮೋಷನಲ್ ಕಂಟೆಟ್ ಸಿನಿಮಾಗಳ ಮೇಲೆ ಹೆಚ್ಚು ಒಲವು. ಚಂದ್ರು ಅವರ ನಿರ್ಮಾಣದ ಚಿತ್ರಗಳಿಗೆ ಅವರದೆ ಆದ ಅಭಿಮಾನಿ ಬಳಗ ಇದೆ. ʼಫಾದರ್ʼ ಕೂಡ ಅವರ ನಿರೀಕ್ಷೆಯನ್ನು ಹೆಚ್ಚಿಸಿದೆ. ಅವರು ನಿರ್ದೇಶಿಸಿದ ಮೊದಲ ʼತಾಜ್ ಮಹಲ್ʼ ಚಿತ್ರ ಹಿಟ್ ಆಗಿತ್ತು. ಆ ಬಳಿಕ ಬಂದ ʼಚಾರ್ ಮಿನಾರ್ʼ ಕೂಡ ಸೂಪರ್ ಹಿಟ್ ಆಯ್ತು. ʼಪ್ರೇಮ್ ಕಹಾನಿʼ ಕೂಡ ಅದ್ಭುತ ಕಂಟೆಂಟ್ ಸಿನಿಮಾ ಆಗಿತ್ತು. ಈಗ ʼಫಾದರ್ʼ ಕೂಡ ಒಂದೊಳ್ಳೆಯ ಸಿನಿಮಾ ಆಗಿ ಹೊರಹೊಮ್ಮುತ್ತೆ ಎಂಬ ಲೆಕ್ಕಾಚಾರ ಇದೆ. ಸದ್ಯ ಭರವಸೆ ಮೂಡಿಸಿರುವ ʼಫಾದರ್ʼ ಈ ವರ್ಷದ ಹಿಟ್ ಲಿಸ್ಟ್ ಸಿನಿಮಾಗಳ ಸಾಲಿಗೆ ಸೇರುವ ಎಲ್ಲಾ ಲಕ್ಷಣಗಳೂ ಇವೆ.

ಈಗಾಗಲೇ ಸುದೀಪ್ ಅವರು ರಿಲೀಸ್ ಮಾಡಿದ್ದ ಈ ಸಿನಿಮಾದ ಫಸ್ಟ್ ಲುಕ್‌ಗೆ ಸಾಕಷ್ಟು ಒಳ್ಳೆಯ ಪ್ರತಿಕ್ರಿಯೆಗಳು ಬಂದಿದ್ದವು. ಭಾವುಕ ಜೀವಿ ಅಪ್ಪನ ಕಥೆ ಹೇಳುವ ಮೂಲಕ ಅಪ್ಪ ಮತ್ತು ಮಗನ ಬಾಂಧವ್ಯ ಹೇಗಿರುತ್ತೆ ಅನ್ನೋದಕ್ಕೆ ʼಫಾದರ್ʼ ಬರುವಿಕೆಯಷ್ಟೇ ಬಾಕಿ. ಮೈಸೂರು, ಧರ್ಮಸ್ಥಳ, ಮಂಗಳೂರು, ಬೆಂಗಳೂರು ಮುಂತಾದ ಕಡೆಗಳಲ್ಲಿ ಚಿತ್ರೀಕರಣಗೊಂಡಿರುವ ಈ ಸಿನಿಮಾಗೆ ವಾರಣಾಸಿಯಲ್ಲೂ ಚಿತ್ರೀಕರಣವಾಗಿದೆ.

ಈ ಸುದ್ದಿಯನ್ನೂ ಓದಿ | Monsoon Shopping Styling Tips: ಮಾನ್ಸೂನ್ ಸೀಸನ್ ಶಾಪಿಂಗ್ ಸ್ಟೈಲಿಂಗ್‌ಗೆ ಇಲ್ಲಿದೆ 5 ಐಡಿಯಾ

ಎಲ್ಲರ ಮನಸ್ಸಿಗೆ ಹತ್ತಿರವಾಗುವ ಕಥೆ ʼಫಾದರ್ʼ ನೊಳಗಿದೆ. ಮುಂಬೈನ ಖ್ಯಾತ ಉದ್ಯಮಿ ಆನಂದ್ ಪಂಡಿತ್ ಅರ್ಪಿಸುವ, ಅಲಂಕಾರ್ ಪಾಂಡ್ಯನ್ ಅವರ ಸಹಯೋಗದಲ್ಲಿ ಆರ್.ಸಿ. ಸ್ಟುಡಿಯೋಸ್ ಈ ಸಿನಿಮಾ ನಿರ್ಮಿಸಿದರೆ, ರಾಜ್‍ ಮೋಹನ್‍ ನಿರ್ದೇಶನ ಮಾಡಿದ್ದಾರೆ. ಸುಜ್ಞಾನ್ ಛಾಯಾಗ್ರಹಣವಿದೆ. ನಕುಲ್ ಅಭಯಂಕರ್ ಸಂಗೀತ ಸಂಯೋಜನೆ ʼಫಾದರ್ʼ ಚಿತ್ರಕ್ಕಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »