Karunadu Studio

ಕರ್ನಾಟಕ

WTC Final: ಲಾರ್ಡ್ಸ್‌ ಅಂಗಣದಲ್ಲಿ ಅರ್ಧಶತಕ ಸಿಡಿಸಿ ಗ್ಯಾರಿ ಸೋಬರ್ಸ್‌ ದಾಖಲೆ ಮುರಿದ ಸ್ಟೀವನ್‌ ಸ್ಮಿತ್‌! – Kannada News | WTC Final: Australia Batter Steve Smith goes past Gary Sobers to script Test record at Lord’s


ಲಂಡನ್‌: ತಮ್ಮ ಟೆಸ್ಟ್‌ ವೃತ್ತಿ ಜೀವನದಲ್ಲಿ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಹಾಗೂ ಹಿರಿಯ ಬ್ಯಾಟ್ಸ್‌ಮನ್‌ ಸ್ಟೀವನ್‌ ಸ್ಮಿತ್‌ (steven Smith) ಮತ್ತೊಂದು ಮೈಲುಗಲ್ಲು ತಲುಪಿದ್ದಾರೆ. ಐತಿಹಾಸಿಕ ಲಂಡನ್‌ನ ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ವಿದೇಶಿ ಬ್ಯಾಟ್ಸ್‌ಮನ್‌ ಎಂಬ ದಾಖಲೆಯನ್ನು ಬರೆದಿದ್ದಾರೆ. ಆ ಮೂಲಕ ಗ್ಯಾರಿ ಸೋಬರ್ಸ್‌ ಒಳಗೊಂಡ ಹಲವು ದಿಗ್ಗಜ ದಾಖಲೆಯನ್ನು ಆಸೀಸ್‌ ಬ್ಯಾಟ್ಸ್‌ಮನ್‌ ಮುರಿದಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಪ್ರಸ್ತುತ ನಡೆಯುತ್ತಿರುವ ಮೂರನೇ ಆವೃತ್ತಿಯ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ ಪಂದ್ಯದ ಮೊದಲನೇ ದಿನ ಅರ್ಧಶತಕ ಸಿಡಿಸಿದ ಬಳಿಕ ಬಲಗೈ ಬ್ಯಾಟ್ಸ್‌ಮನ್‌ ಈ ದಾಖಲೆಯನ್ನು ಬರೆದಿದ್ದಾರೆ.

ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ಆಸ್ಟ್ರೇಲಿಯಾ ಪರ ನಾಲ್ಕನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದಿದ್ದ ಸ್ಟೀವನ್‌ ಸ್ಮಿತ್‌, 112 ಎಸೆತಗಳಲ್ಲಿ 10 ಬೌಂಡರಿಗಳೊಂದಿಗೆ 66 ರನ್‌ಗಳನ್ನು ಕಲೆ ಹಾಕಿದರು. ಆ ಮೂಲಕ ಉತ್ತಮ ಆರಂಭವನ್ನು ಪಡೆದಿದ್ದ ಅವರು ದೊಡ್ಡ ಇನಿಂಗ್ಸ್‌ ಆಡುವ ಮುನ್ಸೂಚನೆಯನ್ನು ನೀಡಿದ್ದರು. ಆದರೆ, ಏಡೆನ್‌ ಮಾರ್ಕ್ರಮ್‌ ಎಸೆತದಲ್ಲಿ ಸ್ಲಿಪ್‌ನಲ್ಲಿ ಕ್ಯಾಚ್‌ ಕೊಟ್ಟು ಔಟ್‌ ಆಗಿದ್ದರು.

WTC Final 2025: ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ದಕ್ಷಿಣ ಆಫ್ರಿಕಾ

ತಮ್ಮ ಈ ಅರ್ಧಶತಕದ ಮೂಲಕ ಅವರು ಐತಿಹಾಸಿಕ ಲಾರ್ಡ್ಸ್‌ ಅಂಗಣದಲ್ಲಿ 595 ರನ್‌ಗಳನ್ನು ಕಲೆ ಹಾಕಿದ್ದಾರೆ. ಆ ಮೂಲಕ ಲಾರ್ಡ್ಸ್‌ನಲ್ಲಿ ಅತಿ ಹೆಚ್ಚು ಟೆಸ್ಟ್‌ ರನ್‌ ಗಳಿಸಿದ ಪ್ರವಾಸಿ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ. ವಾರೆನ್‌ ಬಾರ್ಡ್‌ಸ್ಲೇ (575), ಸರ್‌ ಗ್ಯಾರಿಫೀಲ್ಡ್‌ ಸೋಬರ್ಸ್‌ (571), ಡೊನಾಲ್ಡ್‌ ಬ್ರಾಡ್ಮನ್‌ (551), ಶಿವನರೇನ್‌ ಚಂದ್ರಪಾಲ್‌ (512), ದಿಲಿಪ್‌ ವೆಂಗ್ಸರ್ಕಾರ್‌ (508) ಹಾಗೂ ಅಲಾನ್‌ ಬಾರ್ಡರ್‌ (503) ಅವರನ್ನು ಸ್ಮಿತ್‌ ಹಿಂದಿಕ್ಕಿ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ಆಸ್ಟ್ರೇಲಿಯಾ ತಂಡ ಭೋಜನ ವಿರಾಮದ ಹೊತ್ತಿಗೆ 67 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡಿದ್ದು ಆರಂಭಿಕ ಆಘಾತ ಅನುಭವಿಸಿತ್ತು. ಈ ವೇಳೆ ಒಂದು ತುದಿಯಲ್ಲಿ ಗಟ್ಟಿಯಾಗಿ ನಿಂತು ಬ್ಯಾಟ್‌ ಮಾಡಿದ್ದರು. ಆ ಮೂಲಕ ಅರ್ಧಶತಕ ಸಿಡಿಸಿ ಆಸ್ಟ್ರೇಲಿಯಾ ತಂಡವನ್ನು ಮೇಲೆತ್ತಿದ್ದರು. ಲಾರ್ಡ್ಸ್‌ ಅಂಗಣದಲ್ಲಿ ಸ್ಮಿತ್‌ ಎರಡು ಶತಕಗಳು ಹಾಗೂ ಮೂರು ಅರ್ಧಶತಕಗಳನ್ನು ಗಳಿಸಿದ್ದಾರೆ. 2015ರ ಆಷಸ್‌ ಟ್ರೋಫಿ ವೇಳೆ 215 ರನ್‌ಗಳನ್ನು ಬಾರಿಸಿದ್ದರು. ಈ ಮೈದಾನದಲ್ಲಿ ಐದು ಬಾರಿ 50ಕ್ಕೂ ಅಧಿಕ ರನ್‌ಗಳನ್ನು ಬಾರಿಸಿದ್ದಾರೆ. ಆ ಮೂಲಕ ಚಂದ್ರಪಾಲ್‌ ದಾಖಲೆಯನ್ನು ಸರಿಗಟ್ಟಿದ್ದಾರೆ.

WTC Final 2025: ಮೂರನೇ ಸ್ಥಾನಿ ಭಾರತಕ್ಕೆ ಸಿಕ್ಕ ಬಹುಮಾನ ಮೊತ್ತವೆಷ್ಟು?

ಆಸ್ಟ್ರೇಲಿಯಾ 212 ರನ್‌ಗಳಿಗೆ ಆಲ್‌ಔಟ್‌

ಸ್ಟೀವನ್‌ ಸ್ಮಿತ್‌ ಜೊತೆ ಮತ್ತೊಂದು ತುದಿಯಲ್ಲಿ ದೀರ್ಘಾವಧಿ ಬ್ಯಾಟ್‌ ಮಾಡಿದ್ದ ಬೇ ವೆಬ್‌ಸ್ಟರ್‌ ಕೂಡ ತಂಡಕ್ಕೆ ಆಸರೆಯಾದರು. ಈ ಇಬ್ಬರೂ 79 ರನ್‌ಗಳ ಜೊತೆಯಾಟವನ್ನು ಆಡಿದ್ದರು. ಅಂದ ಹಾಗೆ ದೀರ್ಘಾವಧಿ ಬ್ಯಾಟ್‌ ಮಾಡಿದ್ದ ವೆಬ್‌ಸ್ಟರ್‌, ಹರಿಣ ಪಡೆಯ ಬೌಲಿಂಗ್‌ ದಾಳಿಯನ್ನು ಸಮರ್ಥವಾಗಿ ಎದುರಿಸಿದ್ದರು ಹಾಗೂ 92 ಎಸೆತಗಳಲ್ಲಿ 72 ರನ್‌ ಗಳಿಸಿದ್ದರು. ಅಂತಿಮವಾಗಿ ಆಸ್ಟ್ರೇಲಿಯಾ ತಂಡ 56.4 ಓವರ್‌ಗಳಿಗೆ 212 ರನ್‌ಗಳಿಗೆ ಆಲ್‌ಔಟ್‌ ಆಯಿತು. ಕಗಿಸೊ ರಬಾಡ 5 ವಿಕೆಟ್‌ ಸಾಧನೆ ಮಾಡಿದರೆ, ಮಾರ್ಕೊ ಯೆನ್ಸನ್‌ ವಿಕೆಟ್‌ಗಳನ್ನು ಕಿತ್ತರು.



Source link

ADMIN

About Author

Leave a comment

Your email address will not be published. Required fields are marked *

You may also like

ಉತ್ತರ ಕರ್ನಾಟಕ ಕರ್ನಾಟಕ

“ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ”

  • September 16, 2024
ಧಾರವಾಡ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯಲ್ಲಿ ವಿಭಿನ್ನ ಹಾಗೂ ವಿಶೇಷತೆಯಿಂದ ಆಚರಣೆ ಮಾಡುವ ಮೂಲಕ 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ ರಾಜ್ಯದಲ್ಲಿಯೇ ನಂಬರ್ 1 ಸ್ಥಾನ ಪಡೆದ
ಕರ್ನಾಟಕ

ನಿಮ್ಮ ವೃತ್ತಿಜೀವನವನ್ನು ನಿರ್ಮಿಸಲು ಮತ್ತು ನಿಮ್ಮ ಭವಿಷ್ಯವನ್ನು ರೂಪಿಸುವಲ್ಲಿ ತಂತ್ರಜ್ಞಾನವನ್ನು ನಿಮ್ಮ ಮಾರ್ಗದರ್ಶಕ ಆಗಿ ಸ್ವೀಕರಿಸಿ

  • September 16, 2024
ಧಾರವಾಡ ಪ್ರಸ್ತುತ ಕಾಲದಲ್ಲಿ ತಂತ್ರಜ್ಞಾನದ ಬದಲಾಗುತ್ತಿರುವ ಮುಖ ಮತ್ತು ಇಂಜಿನಿಯರಗಳು, ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ನಿರಂತರವಾಗಿ ನವೀಕರಿಸುವ ಅಗತ್ಯವಾಗಿದೆ ಎಂದು , ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ
Translate »