Karunadu Studio

ಕರ್ನಾಟಕ

Chikkaballapur News: ಮಕ್ಕಳಿಗೆ ಉತ್ತಮ ಭವಿಷ್ಯ ನಿರ್ಮಾಣ ಸಮಾಜದ ಎಲ್ಲರ ಹೊಣೆ : ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎನ್.ರಮೇಶ್ – Kannada News | Building a better future for children is the responsibility of everyone in society.


ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಕಳೆದ 05 ವರ್ಷಗಳಲ್ಲಿ 54 ಬಾಲ ಕಾರ್ಮಿಕರು ಮತ್ತು ಕಿಶೋರಕಾರ್ಮಿಕ ಮಕ್ಕಳನ್ನು ಪತ್ತೆ ಹಚ್ಚಿದ್ದು, 48 ಸಂಸ್ಥೆಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂಬ ಮಾಹಿತಿ ಆಘಾತಕಾರಿಯಾಗಿದೆ.೧೪ ವರ್ಷದೊಳಗಿನ ಮಕ್ಕಳ ದುಡಿಮೆ ನಿಲ್ಲಿಸಿ ಅವರಿಗೆ ಉತ್ತಮ ಭವಿಷ್ಯ ಕಲ್ಪಿಸಿಕೊಡುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಗ್ಯಾರೆಂಟಿ ಪ್ರಾಧಿಕಾರದ ಅಧ್ಯಕ್ಷ ಯಲುವಹಳ್ಳಿ ರಮೇಶ್ ತಿಳಿಸಿದರು.

೧೪ ವರ್ಷದೊಳಗಿನ ಮಕ್ಕಳು ಯಾವುದೇ ಉದ್ಯೋಗ ಅಥವಾ  ಇತರೆ ದುಡಿಮೆಗಳ ಪ್ರಕ್ರಿಯೆಗಳಲ್ಲಿ ಹಾಗೂ ೧೮ ವರ್ಷ ವಯಸ್ಸಿನವರೆಗಿನ ಕಿಶೋರರು ಅಪಾಯಕಾರಿ ಉದ್ದಿಮೆ ಮತ್ತು ಸ್ಥಳಗಳಲ್ಲಿ ಕೆಲಸ ಮಾಡುವುದು ಕಂಡು ಬಂದಲ್ಲಿ ತಕ್ಷಣವೇ ಇಲಾಖೆಯ ಸಹಾಯವಾಣಿ ಸಂಖ್ಯೆ ೧೦೯೮, ೧೧೨ ಗೆ ಕರೆಮಾಡಿ ಮಾಹಿತಿ ತಿಳಿಸಬೇಕು ಎಂದು ಜಿಲ್ಲಾ ಗ್ಯಾರಂಟಿ  ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎನ್ ರಮೇಶ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: Chirag Paswan: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಚಿರಾಗ್‌ ಪಾಸ್ವಾನ್‌ ಘೋಷಣೆ; ಬದಲಾಗುತ್ತಾ ರಾಜಕೀಯ ಚಿತ್ರಣ?

ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಸಹಯೋಗದಲ್ಲಿ ಗುರುವಾರ  ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ ದರು.

ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮಾಲನೆ ಮಾಡುವಲ್ಲಿ ಸಮಾಜದ ಎಲ್ಲ ನಾಗರೀಕರ ಪಾತ್ರ ಬಹಳ ಮುಖ್ಯವಾಗಿದೆ.ಹಲವಾರು ಕಾರಣಗಳಿಂದ ಹಾಗೂ ಸಮಸ್ಯೆಗಳಿಂದ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ  ಪ್ರಕರಣಗಳನ್ನು ನಾವೆಲ್ಲರೂ ದಿನ ನಿತ್ಯ ಕಾಣುತ್ತಿದ್ದೇವೆ. ಮನೆಯಲ್ಲಿ ಆಟವಾಡಿಕೊಂಡು ಶಿಕ್ಷಣ ಆರಂಭ ಮಾಡುವ ಸಮಯದಲ್ಲಿ  ಕಟ್ಟಡಗಳ ಕೆಲಸಗಳಲ್ಲಿ, ಅಂಗಡಿಗಳಲ್ಲಿ, ಗ್ಯಾರೇಜ್, ಹೊಟೇಲ್, ಕಾರ್ಖಾನೆಗಳಲ್ಲಿ, ಬೇಕರಿ ಮತ್ತಿತರ ಸ್ಥಳಗಳಲ್ಲಿ  ಕೆಲಸದಾಳುಗಳಾಗಿ  ದೈಹಿಕವಾಗಿ ಹಾಗೂ ಮಾನಸಿಕವಾಗಿ ಕಷ್ಟವಾಗುವಂತ ಕೆಲಸಗಳನ್ನು ಮಾಡುತ್ತಿದ್ದಾರೆ.

ಇಂತಹ ಪ್ರಕರಣಗಳನ್ನು  ಕಂಡರೆ ತಕ್ಷಣವೇ  ಸಕ್ಷಮ ಇಲಾಖೆಯ ಅಧಿಕಾರಿಗಳಿಗೆ ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಸಾರ್ವಜನಿಕರು ಸಾಮಾಜಿಕ ಹೊಣೆಗಾರಿಕೆಯನ್ನು ನಿರ್ವಹಿಸಬೇಕು. ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ನಿರ್ಮಾಲನೆ ಮಾಡುವಲ್ಲಿಸಮಾಜ ಪಾತ್ರ ಬಹಳ ಮುಖ್ಯವಾಗಿದ್ದು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರಯಿ ವರ್ಷ ಜೂನ್.೧೨ ರಂದು ಬಾಲ ಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮ ಬಾಲ ಕಾರ್ಮಿಕ ಪದ್ದತಿ ಕುರಿತು ಅರಿವು ಮೂಡಿಸಲು ಸಹಾಯಕಾರಿಯಾಗಿದೆ ಎಂದು ತಿಳಿಸಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ವಿ ಅಭಿಲಾಷ್ ಅವರು ಮಾತನಾಡುತ್ತಾ,ಬಾಲ ಕಾರ್ಮಿಕ ಪದ್ಧತಿಗೆ ಬಡತನವು ಒಂದು ಪ್ರಮುಖ ಕಾರಣವಾಗಿದ್ದು, ಇದರಿಂದಾಗಿ ಮಕ್ಕಳು ಶಾಲೆಗೆ ಹೊಗದೆ ತಮ್ಮ ಪೋಷಕರ ಜೊತೆ ಜೀವನೋಪಾಯಕ್ಕಾಗಿ  ಉದ್ಯೋಗಗಳನ್ನು ಅರಸುತ್ತಿದ್ದಾರೆ. ಬಾಲ ಕಾರ್ಮಿಕ ಪದ್ದತಿಯನ್ನು ಹೋಗಲಾಡಿಸುವುದು ಸಮಾಜದ ಹೊಣೆಗಾರಿಕೆಯಾಗಿದೆ. ಈ ಬಗ್ಗೆ ಪ್ರತಿಯೊಬ್ಬರೂ ಗಂಭೀರವಾಗಿ ಚಿಂತನೆ ನಡೆಸಿ ಕಾರ್ಯೋನ್ಮುಖರಾಗುವ ಅಗತ್ಯವಿದೆ. ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಸರ್ಕಾರದ ವಿವಿಧ ಇಲಾಖೆಗಳೊಂದಿಗೆ ಸ್ವಯಂ ಸೇವಾ ಸಂಸ್ಥೆಗಳು ಹಾಗೂ  ಸಾರ್ವಜನಿಕರು ಕೈ ಜೋಡಿಸಬೇಕು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಿದ ಚಿಕ್ಕಬಳ್ಳಾಪುರದ ಸಿ.ಬಿ.ಎಂ.ಇAಡಿಯಾ ಟ್ರಸ್ಟ್ ನ ಸತೀಶ್ ಜಾಗೃತಿ ಗೀತೆಗಳನ್ನು ಹಾಡುವ ಮೂಲಕ ಬಾಲಕಾರ್ಮಿಕ ಪದ್ಧತಿ ವಿರೋಧದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಿದರು.

ನಂತರ ಮಾತನಾಡಿದ ಅವರು ೧೪ ವಯಸ್ಸಿನೊಳಗಿನ ಮಕ್ಕಳು ಶಾಲೆಯಲ್ಲಿರಬೇಕೇ ಹೊರತು ದುಡಿಮೆಯಲ್ಲಿ ಅಲ್ಲ. ಈ ಪದ್ದತಿ ನಿರ್ಮೂಲನೆಗಾಗಿ ಸರ್ಕಾರ ಹಲವು ಕಾನೂನುಗಳನ್ನು ಜಾರಿ ಮಾಡಿದ್ದು, ಹಲವರು ಕಾನೂನುಗಳನ್ನೇ ಉಲ್ಲಂಘಿಸಿ ಮಕ್ಕಳನ್ನು ದುಡಿಮೆಗೆ ನೇಮಿಸಿಕೊಳ್ಳುತ್ತಾರೆ. ಇದರಿಂದ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತವಾಗುತ್ತದೆ. ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಯಾವುದೇ ಭಾಗದಲ್ಲಿ ಬಾಲ ಕಾರ್ಮಿಕರನ್ನು ನೇಮಿಸಿಕೊಂಡಿರುವುದು  ಹಾಗೂ ಬಾಲ್ಯ ವಿವಾಹಗಳು ನಡೆಯುತ್ತಿರುವುದು ಕಂಡು ಬಂದಲ್ಲಿ  ಮಕ್ಕಳ ಸಹಾಯವಾಣಿ ಸಂಖ್ಯೆ ೧೦೯೮ ಅಥವಾ ೧೧೨ ಕ್ಕೆ ಕರೆ ಮಾಡಬೇಕು.ಜಿಲ್ಲೆಯಲ್ಲಿ ಕಳೆದ ೦೫ ವರ್ಷಗಳಲ್ಲಿ ೫೪ ಬಾಲ ಕಾರ್ಮಿಕರು ಮತ್ತು ಕಿಶೋರಕಾರ್ಮಿಕ ಮಕ್ಕಳನ್ನು ಪತ್ತೆ ಹಚ್ಚಿದ್ದು, ೪೮ ಸಂಸ್ಥೆಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದರು.

ವಿಶ್ವ ಬಾಲ ಕಾರ್ಮಿಕರ ವಿರೋಧಿ ದಿನದ ಅಂಗವಾಗಿ ಹಮ್ಮಿಕೊಂಡಿದ್ದ  ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪಿ. ಎನ್ ರವೀಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ  ಸದಸ್ಯ ಕಾರ್ಯದರ್ಶಿ ಬಿ. ಶಿಲ್ಪ ಅವರು ಚಾಲನೆ ನೀಡಿದರು.

ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಿಂದ ಆರಂಭವಾದ ಬಾಲ ಕಾರ್ಮಿಕ ಪದ್ದತಿ ವಿರೋಧಿ ಜಾಗೃತಿ ಜಾಥಾ ಸಭಾ ಕಾರ್ಯಕ್ರಮ ಏರ್ಪಡಿಸಿದ್ದ ಅಂಬೇಡ್ಕರ್ ಭವನದವರೆಗೂ ಸಾಗಿತು. ಈ ಜಾಗೃತಿ ಜಾಥಾದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಸಮಾರಂಭದಲ್ಲಿ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನದ ಪ್ರತಿಜ್ಞಾ ವಿಧಿಯನ್ನು ಗೌರಿಬಿದನೂರಿನ ಕಾರ್ಮಿಕ ನಿರೀಕ್ಷಕ ಟಿ.ಬಿ ಸತೀಶ್ ಅವರು ಬೋಧಿಸಿದರು.

ಬಾಲಕಾರ್ಮಿಕ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಗಾಗಿ ಏರ್ಪಡಿಸಿದ್ದ ಪ್ರಬಂಧ, ಚಿತ್ರಕಲೆ, ಚರ್ಚಾ ಸ್ಪರ್ಧೆಗಳ ವಿಜೇತ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಇದೇ ವೇಳೆ ಕಾರ್ಮಿಕ ನಿರೀಕ್ಷಕರು, ಚಿಕ್ಕಬಳ್ಳಾಪುರ ವೃತ್ತ ಎಂ ಮಂಜುಳಾ ಅವರನ್ನು  ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕ ಈಶ್ವರಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಶಬಾನಾ ಅಜ್ಮಿ,, ದೀನ ದಯಾಳ್ ಸಂಸ್ಥೆಯ ಆರ್.ನಾರಾಯಣಪ್ಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್, ಸಹಾಯಕ ಕಾನೂನು ಅಭಿರಕ್ಷಕ ವಂದನ, ಸರಳ, ವಿಜಯ್, ನರಸಿಂಹಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »