Karunadu Studio

ಕರ್ನಾಟಕ

Ahmedabad Plane Crash: ಟೆಸ್ಟ್‌ ಫೈನಲ್, ಭಾರತ ಅಭ್ಯಾಸ ಪಂದ್ಯದ ವೇಳೆ ಸಂತಾಪ – Kannada News | South African and Australian players pay tribute to Air India plane crash victims


ಲಂಡನ್‌: ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ(Ahmedabad Plane Crash) ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಭಾಗವಾಗಿ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC Final 2025) ಫೈನಲ್‌ನ ಮೂರನೇ ದಿನದಾಟದ ವೇಳೆ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾದ ಆಟಗಾರರು ಹಾಗೂ ಅಭ್ಯಾಸ ಪಂದ್ಯ ಆಡುತ್ತಿರುವ ಭಾರತ ಎ ಮತ್ತು ಭಾರತ ತಂಡಗಳ(IND vs IND-A intra-squad match) ಆಟಗಾರರು ತೋಳಿಗೆ ಕಪ್ಪು ಪಟ್ಟಿಗಳನ್ನು ಧರಿಸಿ ಒಂದು ನಿಮಿಷ ಮೌನ ಆಚರಿಸಲಿದ್ದಾರೆ.

ಗುರುವಾರ ಮಧ್ಯಾಹ್ನ, 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ಪ್ರಯಾಣಿಕ ವಿಮಾನವು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೀಡಾಗಿತ್ತು. ಘಟನೆಯಲ್ಲಿ 241 ಪ್ರಯಾಣಿಕರು ಮತ್ತು ಸಿಬ್ಬಂದಿ ಸಾವನ್ನಪ್ಪಿದ್ದರು. ಪವಾಡ ಸದೃಶ ರೀತಿಯಲ್ಲಿ ಸೀಟ್‌ ನಂ. 11ಎಯಲ್ಲಿದ್ದ ಪ್ರಯಾಣಿಕ, 38 ವರ್ಷದ ರಮೇಶ್‌ ವಿಶ್ವಕುಮಾರ್‌ ಬದುಕುಳಿದಿದ್ದಾನೆ. ಸಣ್ಣಪುಟ್ಟ ಗಾಯಗಳೊಂದಿಗೆ ಬದುಕುಳಿದಿರುವ ರಮೇಶ್‌ಗೆ ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.



ಜಗತ್ತಿನ ಅತ್ಯಾಧುನಿಕ ಪ್ರಯಾಣಿಕ ವಿಮಾನವೆಂದೇ ಪರಿಗಣಿಸಲ್ಪಟ್ಟಿರುವ ಅಮೆರಿಕದ ಬೋಯಿಂಗ್‌ ಕಂಪನಿಯ 787 ಡ್ರೀಮ್‌ಲೈನರ್‌ ಅಪಘಾತಕ್ಕೆ ತುತ್ತಾಗಿದ್ದು ಇದೇ ಮೊದಲು. ಈ ಹಿಂದೆ ಅನೇಕ ಬಾರಿ ತಾಂತ್ರಿಕ ಸಮಸ್ಯೆಗಳಿಂದ ಸುದ್ದಿ ಮಾಡಿತ್ತಾದರೂ ದುರಂತಕ್ಕೆ ಸಾಕ್ಷಿಯಾಗಿದ್ದು ಮಾತ್ರ ಇದೇ ಮೊದಲು. ಹೀಗಾಗಿ ಅಹಮದಾಬಾದ್‌ ನಡೆದ ಇಂಡಿಯನ್‌ ಏರ್‌ಲೈನ್ಸ್‌ ದುರಂತ ಬೋಯಿಂಗ್‌ ಡ್ರೀಮ್‌ಲೈನರ್‌ ವಿಮಾನದ ಪಾಲಿಗೆ ಕಪ್ಪು ಚುಕ್ಕೆಯಾಗಿದೆ

ಟಾಟಾ ಗ್ರೂಪ್ ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ಘೋಷಿಸಿದೆ. ಏರ್ ಇಂಡಿಯಾ ಮತ್ತು ಟಾಟಾ ಸನ್ಸ್ ಅಧ್ಯಕ್ಷ ಎನ್.ಚಂದ್ರಶೇಖರನ್ ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿ, ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸಮಯದಲ್ಲಿ ಏರ್ ಇಂಡಿಯಾವು ಸಂತ್ರಸ್ತರ ಕುಟುಂಬಗಳ ಬೆಂಬಲಕ್ಕೆ ನಿಲ್ಲಲಿದೆ ಎಂದು ಭರವಸೆ ನೀಡಿದ್ದಾರೆ. “ಸ್ಥಳದಲ್ಲಿ ತುರ್ತು ಪ್ರತಿಕ್ರಿಯೆ ತಂಡಗಳಿಗೆ ಸಹಾಯ ಮಾಡಲು ಮತ್ತು ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ಬೆಂಬಲ ಮತ್ತು ನೆರವನ್ನು ಒದಗಿಸಲು ನಾವು ಎಲ್ಲ ರೀತಿಯಿಂದಲೂ ಪ್ರಯತ್ನಿಸುತ್ತಿದ್ದೇವೆʼʼ ಎಂದು ಚಂದ್ರಶೇಖರನ್ ಹೇಳಿದ್ದಾರೆ.

ಇದನ್ನೂ ಓದಿ Ahmedabad Plane Crash: ಅಹಮದಾಬಾದ್‌ ವಿಮಾನ ದುರಂತ; ಮೃತ ದೇಹದ ಪತ್ತೆಗೆ ಇರುವ ದಾರಿಗಳೇನು?





Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »