Karunadu Studio

ಕರ್ನಾಟಕ

MLA Vinay Kulkarni: ಯೋಗೀಶ್ ಗೌಡ ಹತ್ಯೆ ಪ್ರಕರಣ; ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ! – Kannada News | MLA Vinay Kulkarni goes to jail again in the Yogesh Gowda murder case


ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲುಪಾಲಾಗಿದ್ದಾರೆ. ಜಾಮೀನು ರದ್ದು ಮಾಡಿ ಶರಣಾಗತಿಗೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಒಂದು ವಾರದ ಗಡುವು ಹಿನ್ನೆಲೆ ಶಾಸಕ ಶುಕ್ರವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲದ ಮುಂದೆ ಹಾಜರಾದರು. ವಿಚಾರಣೆ ಬಳಿಕ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪರಪ್ಪನ ಅಗ್ರಹಾರಕ್ಕೆ ಶಾಸಕರನ್ನು ಶಿಫ್ಟ್ ಮಾಡಲಾಗುವುದು ಎಂದು ತಿಳಿದುಬಂದಿದೆ.

ವಿನಯ್ ಕುಲಕರ್ಣಿ ಪರ ವಕೀಲರು ಶರಣಾಗಲು ಸಮಯ ವಿಸ್ತರಿಸುವಂತೆ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾ. ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾ. ಮನಮೋಹನ್ ಅವರಿದ್ದ ಪೀಠವು ಶರಣಾಗತಿಗೆ ಸಮಯ ನೀಡಲು ಕೋರ್ಟ್ ನಿರಾಕರಿಸಿತ್ತು. ಹೀಗಾಗಿ ಶಾಸಕ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.

ಏನಿದು ಪ್ರಕರಣ?

ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ ಗೌಡ ಅವರನ್ನು 2016ರ ಜೂನ್ 15ರಂದು ಜಿಮ್‌ನಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಆ ಸಮಯದಲ್ಲಿ ವಿನಯ್‌ ಕುಲಕರ್ಣಿ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದರು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಕೈವಾಡದವಿದೆ ಎಂಬ ಆರೋಪದಲ್ಲಿ 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿದ್ದರು.

9 ತಿಂಗಳು ಜೈಲುವಾಸದ 2021ರ ಆಗಸ್ಟ್ 13ರಂದು ವಿನಯ್‌ ಕುಲಕರ್ಣಿ ಬಿಡುಗಡೆಯಾಗಿದ್ದರು. ಇನ್ನು ಧಾರವಾಡ ಜಿಲ್ಲೆಗೆ ಪ್ರವೇಶಿಸಬಾರದು ಎಂದು ಸುಪ್ರೀಂ ಕೋರ್ಟ್ ಷರತ್ತು ವಿಧಿಸಿತ್ತು. ಆದಾಗ್ಯೂ, ತಮ್ಮ ಕ್ಷೇತ್ರವನ್ನು ಪ್ರವೇಶಿಸದೆ, ವಿನಯ್ ಕುಲಕರ್ಣಿ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು.

ಈ ಸುದ್ದಿಯನ್ನೂ ಓದಿ | Indore Couple Missing: ರೇನ್‌ ಕೋಟ್‌, ಶರ್ಟ್‌ನಿಂದ ಸಿಕ್ತು ಕೊಲೆಯ ಸುಳಿವು; ಹಂತಕರ ಬಂಧನ ಹೇಗಿತ್ತು?

ಪ್ರಕರಣದ ತನಿಖೆಯನ್ನು ಚುರುಕುಗೊಳಿಸಲು ಮತ್ತು ಸಾಕ್ಷಿಗಳ ವಿಚಾರಣೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಸಾಕ್ಷಿಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದ ಸಿಬಿಐ, ಅವರಿಗೆ ಹಣದ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿ, ಈ ಸಂಬಂಧ ಸಾಕ್ಷ್ಯಗಳೊಂದಿಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿ ಅವರ ಜಾಮೀನನ್ನು ರದ್ದುಗೊಳಿಸಿ, ಒಂದು ವಾರದೊಳಗೆ ಶರಣಾಗುವಂತೆ ಸೂಚಿಸಿತ್ತು. ಹೀಗಾಗಿ ಕೋರ್ಟ್‌ ಮುಂದೆ ಶಾಸಕ ವಿನಯ್‌ ಕುಲಕರ್ಣಿ ಶರಣಾಗಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »