Karunadu Studio

ಕರ್ನಾಟಕ

Chikkaballapur News: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಖಿಲ ಭಾರತ ವಕೀಲರ ಸಂಘದ ಸಹಿ ಸಂಗ್ರಹ ಅಭಿಯಾನ ಹಾಗೂ ತಹಸೀಲ್ದಾರ್ ಗೆ ಮನವಿ ಪತ್ರ – Kannada News | All India Bar Association’s signature collection campaign and petition letter to the Tahsildar for the fulfillment of various demands


ಬಾಗೇಪಲ್ಲಿ: ಅಖಿಲ ಭಾರತ ವಕೀಲರ ಒಕ್ಕೂಟದ ರಾಜ್ಯ ಸಮಿತಿಯ ಕರೆಯ ಅನ್ವಯ ತಾಲ್ಲೂಕು ಅಖಿಲ ಭಾರತ ವಕೀಲರ ಒಕ್ಕೂಟದ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ನ್ಯಾಯಾಲಯದ ಆವರಣದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ವಕೀಲರ ವಿವಿಧ ಬೇಡಿಕೆಗಳನ್ನು ಈಡೇರಿಸಲು ತಾಲ್ಲೂಕು ಸಿರಸ್ತೆದಾರ್ ಮಂಜುನಾಥ ರವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಸಿ.ಮಂಜುನಾಥ ಮಾತನಾಡಿ ಪೊಲೀಸರ ಏಕ ಪಕ್ಷೀಯ ವರ್ತನೆಗಳಿಂದ ವಕೀಲರಿಗೆ ರಕ್ಷಣೆ ನೀಡಬೇಕು ಮತ್ತು ವಕೀಲರ ಸಂರಕ್ಷಣೆ ಕಾಯ್ದೆ-2024 ಕ್ಕೆ ಸೂಕ್ತ ತಿದ್ದುಪಡಿಯಾಗಬೇಕು. ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯದ ಮಾರ್ಗಸೂಚಿಯನ್ನು ಪಾಲಿಸಬೇಕು.

ಕಾನೂನು ವಿದ್ಯಾರ್ಥಿಗಳನ್ನು ಗೊಂದಲಕ್ಕೆ ತಳ್ಳುವ ಮತ್ತು ಅವರ ಭವಿಷ್ಯವನ್ನು ಅಭದ್ರತೆ ಯಲ್ಲಿಡುವ ಅವೈಜ್ಞಾನಿಕ ಅಖಿಲ ಭಾರತ ಬಾರ್ ಪರೀಕ್ಷೆ ರದ್ದುಪಡಿಸಬೇಕು. ಕಿರಿಯ ವಕೀಲರ ವೃತ್ತಿ ಆರಂಭದ ಬದುಕಿಗೆ ಪೂರಕವಾಗುವಂತೆ ೨ ವರ್ಷಗಳ ಕಾಲ ಮಾಸಿಕ 10 ಸಾವಿರ ರೂ. ಸಹಾಯಧನ ನೀಡಬೇಕು. ರಾಜ್ಯದ ಎಲ್ಲಾ ತಾಲ್ಲೂಕು ವಕೀಲರ ಸಂಘಗಳಿಗೆ ವರ್ಷಕ್ಕೆ ೫ ಲಕ್ಷ ರೂ.ಅನುದಾನ ಮಂಜೂರು ಮಾಡಬೇಕು, ಜಿಲ್ಲಾ ವಕೀಲರ ಸಂಘಗಳಿಗೆ 10 ಲಕ್ಷ ರೂ.ಅನುದಾನ ಮಂಜೂರು ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ: Chikkaballapur News: ಜುಲೈ 18ರಂದು ಶ್ರೀ ಶರಭಯೋಗೇಂದ್ರ ಸ್ವಾಮಿಯವರ 307ನೇ ಆರಾಧನಾ ಮತ್ತು ರಥೋತ್ಸವ

ರಾಜ್ಯ ಸಕಾರವು ವಕೀಲರಿಗೆ ಕಡ್ಡಾಯವಾಗಿ ವೈದ್ಯಕೀಯ ಮತ್ತು ಜೀವ ವಿಮಾ ಸೌಲಭ್ಯವನ್ನು ಒದಗಿಸಬೇಕು. ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣಗಳಲ್ಲಿ ವಕೀಲರ ಅಕಾಡಮಿಗಳನ್ನು ಸ್ಥಾಪಿಸಬೇಕು. ರಾಜ್ಯದಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಸ್ಥಾಪಿಸಬೇಕು. ರಾಜ್ಯದ ಎಲ್ಲಾ ನ್ಯಾಯಾಲಯಗಳ ಆವರಣದಲ್ಲಿ ವಕೀಲರಿಗೆ ಪ್ರತ್ಯೇಕ ಕೊಠಡಿಗಳನ್ನು ಸ್ಥಾಪಿಸಬೇಕು.
ಕಂದಾಯ, ಎಸಿ, ಡಿಸಿ ನ್ಯಾಯಾಲಯ ಗಳ ಕಂದಾಯ ಪ್ರಕರಣಗಳಲ್ಲಿ ತೀರ್ಪುಗಳು ವಿಳಂಬ ವಾಗುತ್ತಿದೆ. ಹಾಗಾಗಿ ಕಂದಾಯ ಪ್ರಕಣಗಳನ್ನು ಸಿವಿಲ್ ನ್ಯಾಯಾಲಯಗಳಿಗೆ ವರ್ಗಾಯಿಸಬೇಕು. ವಕೀಲರಿಗೆ ಟೋಲ್ ಶುಲ್ಕ ರಹಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು.

ರಾಜ್ಯದ ಪ್ರತಿ ಜಿಲ್ಲೆಗೆ ಒಂದರAತೆ ಸರಕಾರಿ ಕಾನೂನು ಕಾಲೇಜುಗಳನ್ನು ಸ್ಥಾಪಿಸಬೇಕು. ಈಗಿರುವ ಅನುದಾನಿತ ಖಾಸಗಿ ಕಾನೂನು ಕಾಲೇಜುಗಳ ಶುಲ್ಕವನ್ನು ಸರಕಾರ ನಿಯಂತ್ರಣ ಮಾಡಬೇಕು. ರಾಜ್ಯ ವಕೀಲರ ಪರಿಷತ್ತಿನ ಕಚೇರಿಯನ್ನು ವಿಭಾಗೀಯ ಮಟ್ಟದಲ್ಲಿ ಸ್ಥಾಪಿಸಬೇಕು. ವಕೀಲರ ಸಂಘದ/ ರಾಜ್ಯ ವಕೀಲರ ಪರಿಷತ್ತಿನ ಕಚೇರಿಯನ್ನು ವಿಭಾಗೀಯ ಮಟ್ಟದಲ್ಲಿ ಸ್ಥಾಪಿಸಬೇಕು. ವಕೀಲರ ಸಂಘದ/ಪರಿಷತ್ತಿನ ಚುನಾವಣೆಯಲ್ಲಿ ಮಹಿಳಾ ವಕೀಲರಿಗೆ ಶೇ.೩೩ರಷ್ಟು ಮೀಸಲಾತಿ ನೀಡಬೇಕು ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ರಿಗೆ ಮೀಸಲಾತಿ ಅನುಸಾರ ಪ್ರಾತಿನಿತ್ಯ ನೀಡಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಸಲು ಶಿರಸ್ತೇದಾರ್ ಮಂಜುನಾಥ ರವರಿಗೆ ತಾಲ್ಲೂಕು ವಕೀಲರ ಸಂಘ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ  ಹಿರಿಯ ವಕೀಲರಾದ ಎ.ಜಿ.ಸುಧಾಕರ್, ವಕೀಲರಾದ ಉಪಾಧ್ಯಕ್ಷ ಸಿ.ರವಿ, ಕುಮಾರಿ,ಎನ್.ನಾಗಭೂಷಣ, ಬಾಲೂ ನಾಯಕ್ ವೆಂಕಟರಮಣ, ಮಂಜುನಾಥ, ಶ್ರೀನಿವಾಸ್, ಲಕ್ಷ್ಮೀನಾರಾಯಣ, ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »