ಪುಣೆ: ಮಾವಲ್ ತಾಲೂಕಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. ತಲೆಗಾಂವ್ ದಭಾಡೆ ಪಟ್ಟಣದ ಬಳಿಯ ಪ್ರಸಿದ್ಧ ಪ್ರವಾಸಿ ತಾಣವಾದ ಕುಂಡ್ಮಾಲಾದಲ್ಲಿ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಹಳೆಯ ಸೇತುವೆ(Pune Bridge Collapse) ಕುಸಿದಿದೆ. ಅನೇಕ ಪ್ರವಾಸಿಗರು ಇಂದ್ರಯಾಣಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಮತ್ತು 20 ರಿಂದ 25 ಜನರು ನೀರುಪಾಲಾಗಿರುವ ಶಂಕೆ ವ್ಯಕ್ತವಾಗಿದೆ.
ಪುಣೆಯ ಮಾವಲ್‌ನಲ್ಲಿರುವ ಕುಂಡ್ ಮಾಲ್‌ನಲ್ಲಿ ಸೇತುವೆ ಕುಸಿದು ಕೆಲವು ಪ್ರವಾಸಿಗರು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ಮಧ್ಯಾಹ್ನ 3.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಪಿಂಪ್ರಿ-ಚಿಂಚ್‌ವಾಡ್ ಪೊಲೀಸ್ ಕಮಿಷನರೇಟ್‌ನ ತಲೆಗಾಂವ್ ದಭಾಡೆ ಪೊಲೀಸರು ಸ್ಥಳಕ್ಕೆ ತಲುಪಿದ್ದಾರೆ. ಇನ್ನು ಈ ಸೇತುವೆ ಏಕಾಏಕಿ ಕುಸಿದು ಬೀಳಲು ಕಾರಣ ಏನೆಂಬುದು ತಿಳಿದಿಲ್ಲ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುರಿದಿದೆ.