Karunadu Studio

ಕರ್ನಾಟಕ

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್‌: ಬಿಜೆಪಿಯಿಂದ ಸೈಬರ್ ಠಾಣೆಗೆ ದೂರು – Kannada News | objectionable post against PM Narendra Modi BJP files complaint at cyber police


ಬೆಂಗಳೂರು: ಟಿ.ಎಫ್.ಹಾದಿಮನಿ ಎಂಬ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವಮಾನ ಆಗುವಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಹಾದಿಮನಿ ವಿರುದ್ಧ ಕೇಸು ದಾಖಲಿಸಿ ಬಂಧಿಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಆಗ್ರಹಿಸಿದರು. ಸೋಮವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಟಿ.ಎಫ್. ಹಾದಿಮನಿಯು ಮೋದಿ ಅವರ ಬಗ್ಗೆ ಅತ್ಯಂತ ಅವಹೇಳನಕಾರಿಯಾಗಿರುವ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಮೋದಿಜಿ ಅವರ ಬಗ್ಗೆ ಕೋಟ್ಯಂತರ ಜನರು ಗೌರವ- ಅಭಿಮಾನ ಹೊಂದಿದ್ದು, ಅವರ ಮನಸ್ಸಿಗೆ ಈ ಪೋಸ್ಟ್ ನೋಡಿ ನೋವಾಗಿದೆ ಎಂದು ತಿಳಿಸಿದರು. ಇದು ಮೋದಿ ಅವರಿಗೆ ಕೆಟ್ಟ ಹೆಸರು ತರುವ ದೊಡ್ಡ ತಪ್ಪು ಎಂದು ಆಕ್ಷೇಪಿಸಿದರು.

ಮೋದಿ ಅವರ ಚಾರಿತ್ರ್ಯವಧೆ ಮಾಡುವ ಹಾದಿಮನಿ ಮತ್ತು ಇತರರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಯಶವಂತಪುರದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದೇವೆ. ರಾಜ್ಯ ವಕ್ತಾರ ಮತ್ತು ವಕೀಲ ವೆಂಕಟೇಶ ದೊಡ್ಡೇರಿ ಅವರು ದೂರುದಾರ ಎಂದು ತಿಳಿಸಿದರು. ಎಫ್‍ಐಆರ್ ಮಾಡುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ ಎಂದು ವಿವರಿಸಿದರು.

ಬಿಜೆಪಿ ವತಿಯಿಂದ ನಾಳೆ ಪ್ರತಿಭಟನೆ

ಬಿಜೆಪಿ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ (ಜೂನ್ 17) ದೊಡ್ಡ ಪ್ರತಿಭಟನೆ ನಡೆಯಲಿದೆ. ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಪ್ರಮುಖರಾದ ಡಾ. ಅಶ್ವತ್ಥ ನಾರಾಯಣ್, ಗೋಪಾಲಯ್ಯ, ಬೆಂಗಳೂರಿನ ನಮ್ಮ ಸಂಸದರು, ಶಾಸಕರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಆರ್‌ಸಿಬಿ ವಿಜಯೋತ್ಸವದಲ್ಲಿ 11 ಜನ ಅಭಿಮಾನಿಗಳು ಮೃತಪಟ್ಟಿದ್ದು, ಅವರ ಸಾವಿಗೆ ಸರ್ಕಾರವೇ ನೇರ ಕಾರಣ ಎಂದು ಆರೋಪಿಸಿದರು. ದುರ್ಘಟನೆಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು. ಪೊಲೀಸ್ ಅಧಿಕಾರಿಗಳ ಅಮಾನತನ್ನು ವಾಪಸ್ ಪಡೆಯಬೇಕು ಎಂದು ಅವರು ಒತ್ತಾಯಿಸಿದರು.

ನಿವೃತ್ತ ಪೊಲೀಸ್ ಆಯುಕ್ತ ಮತ್ತು ಪಕ್ಷದ ಮುಖಂಡ ಭಾಸ್ಕರ ರಾವ್ ಮಾತನಾಡಿ, ಪ್ರಧಾನಿಯವರನ್ನು ಅವಮಾನ ಮಾಡಿದ್ದು ಖಂಡನೀಯ. ಹಾದಿಮನಿ ಬಂಧನಕ್ಕೆ ಹಾಗೂ ಹಿನ್ನೆಲೆಯ ತನಿಖೆ ಮಾಡುವಂತೆ ಕೋರಿದ್ದೇವೆ. ಹಾದಿಮನಿ ಮತ್ತು ಇಂಥ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮಕ್ಕೆ ದೂರು ನೀಡಿದ್ದಾಗಿ ಹೇಳಿದರು.

ರಾಜ್ಯ ವಕ್ತಾರ ಎಚ್. ವೆಂಕಟೇಶ್ ದೊಡ್ಡೇರಿ ಮಾತನಾಡಿ, ಮೋದಿಜೀ ಅವರ ವಿರುದ್ಧ ಹಾದಿಮನಿ, ಫೇಸ್‌ಬುಕ್‍ನಲ್ಲಿ ಹಾಕಿರುವ ಪೋಸ್ಟ್ ಸಮಾಜದಲ್ಲಿ ಶಾಂತಿ- ಸುವ್ಯವಸ್ಥೆಯನ್ನು ಕದಡುವಂತಿದೆ. ಜನರ ಭಾವನೆಗೆ ಇದರಿಂದ ಧಕ್ಕೆಯಾಗಿದೆ. ಅವರು ಇಂಥ ಅವಹೇಳನಕಾರಿ ಪೋಸ್ಟ್‌ಗಳನ್ನು ನಿರಂತರವಾಗಿ ಹಾಕುತ್ತಿದ್ದಾರೆ ಎಂದು ಆರೋಪಿಸಿದರು. ಅವರನ್ನು ಬಂಧಿಸಿ ಸಮಗ್ರ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.‌

ಈ ಸುದ್ದಿಯನ್ನೂ ಓದಿ | Nikhil Kumaraswamy: ಹೇಮಾವತಿ ಲಿಂಕ್ ಕೆನಾಲ್ ಹೋರಾಟ; ರಾಜ್ಯ ಸರ್ಕಾರ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿ: ನಿಖಿಲ್ ಕುಮಾರಸ್ವಾಮಿ

ದೂರು ನೀಡುವ ನಿಯೋಗದಲ್ಲಿ ಎನ್.ರವಿಕುಮಾರ್, ಭಾಸ್ಕರ ರಾವ್, ಎಚ್.ವೆಂಕಟೇಶ್ ದೊಡ್ಡೇರಿ, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ ಕುಮಾರ್, ರಾಜ್ಯ ವಕ್ತಾರರಾದ ಕು. ಸುರಭಿ ಹೊದಿಗೆರೆ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ಸಹ ಸಂಚಾಲಕ ಪ್ರಶಾಂತ್ ಕೆಡಂಜಿ, ಸದಸ್ಯರಾದ ನಾಗೇಶ್ ಬಿ., ಶರತ್ ಹೆಗಡೆ, ವಿಜಯೇಂದ್ರ ಡಿ.ಟಿ. ಇದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »