Karunadu Studio

ಕರ್ನಾಟಕ

Dinesh Gundu Rao: ಮೈಸೂರನ್ನು ಯೋಗ ಜಿಲ್ಲೆಯನ್ನಾಗಿ ರೂಪಿಸಲು ಕೇಂದ್ರಕ್ಕೆ ಪ್ರಸ್ತಾವನೆ: ದಿನೇಶ್ ಗುಂಡೂರಾವ್ – Kannada News | Dinesh Gundu Rao Proposal to the Central Government to make Mysore a Yoga District says Health Minister Dinesh Gundu Rao


ಬೆಂಗಳೂರು: ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ರಾಜ್ಯದಲ್ಲಿ ‘ಯೋಗ ಸಂಗಮ’ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ರಾಜ್ಯಾದಾದ್ಯಂತ 5 ಲಕ್ಷ ಜನರು ಯೋಗಭ್ಯಾಸ ನಡೆಸಲು ರಾಜ್ಯ ಸರ್ಕಾರ ಅನುವು ಮಾಡಿಕೊಡುತ್ತಿದೆ. ‘ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗುವುದು. ಜೂ.21ರ ಬೆಳಗ್ಗೆ 6 ಗಂಟೆಯಿಂದ 8 ಗಂಟೆಯವರೆಗೆ 5000 ಜನರು ವಿಧಾನಸೌಧದ ಮೆಟ್ಟಿಲುಗಳ ಎದುರು ಯೋಗಾಭ್ಯಾಸ ನಡೆಸಲಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಶಾಸಕರು, ಸಂಸದರು, ಕ್ರೀಡಾಪಟುಗಳು, ತಾರೆಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಮೈಸೂರನ್ನು ‘ಯೋಗ ಜಿಲ್ಲೆಯನ್ನಾಗಿ’ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದು, ಮೈಸೂರು ಜಿಲ್ಲೆಯ ಪ್ರತಿಯೊಂದು ಮನೆಗಳಲ್ಲಿ ಒಬ್ಬರಾದರೂ ಯೋಗಭ್ಯಾಸ ನಡೆಸುವಂತಾಗಬೇಕು ಎಂಬ ಗುರಿ ಹೊಂದಲಾಗಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ಒಂದು ಜಿಲ್ಲೆಯನ್ನು ಸಂಪೂರ್ಣವಾಗಿ ಯೋಗ ಜಿಲ್ಲೆಯನ್ನಾಗಿ ರೂಪಿಸುವ ಕಾರ್ಯಕ್ಕೆ ರಾಜ್ಯ ಸರ್ಕಾರ ಕೈ ಹಾಕಿದ್ದು, ಈ ನಿಟ್ಟಿನಲ್ಲಿ ಮೈಸೂರು ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ತಿಳಿಸಿದರು.

ಮೈಸೂರಿನ ಅರಮನೆ ಆವರಣದಲ್ಲಿ ‘ಯೋಗ ಮಹಾಕುಂಭ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಯೋಗ ದಿನಾಚರಣೆಯಂದು 15000 ಜನರು ಯೋಗಭ್ಯಾಸ ನಡೆಸಲಿದ್ದಾರೆ. 30 ಜಿಲ್ಲಾ ಕೇಂದ್ರಗಳಲ್ಲಿ ‘ಯೋಗ ಸಂಗಮ’ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಪ್ರತಿ ಕಾರ್ಯಕ್ರಮದಲ್ಲಿ ಕನಿಷ್ಠ 5000 ಜನರು ಭಾಗವಹಿಸಲಿದ್ದಾರೆ. ಬೆಳಗ್ಗೆ 7 ಗಂಟೆಯಿಂದ 7.45 ರವರೆಗೆ ರಾಜ್ಯದ 100 ಆರೋಗ್ಯ ಕೇಂದ್ರಗಳಲ್ಲಿ 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆ ಪ್ರದರ್ಶನ ನಡೆಯಲಿದೆ.

ರಾಜ್ಯದ ಹಲವೆಡೆ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ಪಾರ್ಕ್, ಯೋಗ ಧನುಷ್, ಹಸಿರು ಯೋಗ, ಯೋಗ ಮಹಾಕುಂಭ, ಯೋಗ ಸಂಯೋಗ, ಯೋಗ ಅನ್ ಪ್ಲಗ್ಸ್ ನಂತಹ ಕಾರ್ಯಕ್ರಮಗಳನ್ನು ರಾಜ್ಯದ ಆಯುಷ್ ಇಲಾಖೆಯಿಂದ ಆಯೋಜಿಸಲಾಗಿದೆ. ಹಸಿರು ಯೋಗ ಕಾರ್ಯಕ್ರಮದ ಅಡಿಯಲ್ಲಿ 1 ಲಕ್ಷ ಗಿಡಗಳನ್ನು ನೆಡಲಾಗುವುದು. ಅಲ್ಲದೇ ಯೋಗ ಧನುಷ್ ಎಂಬ ಕಾರ್ಯಕ್ರಮದ ಮೂಲಕ ರಾಜ್ಯದಾದ್ಯಂತ 5 ಲಕ್ಷ ಜನರಿಗೆ ಯೋಗ ಪ್ರೋಟೋಕಾಲ್ ಅನ್ನು ಹೇಳಿಕೊಡಲಾಗಿದ್ದು, ಕಾರ್ಯಕ್ರಮದ ಅಡಿಯಲ್ಲಿ 5000 ಶಾಲೆಗಳಲ್ಲಿ ಯೋಗ ಪ್ರೋಟೋಕಾಲ್ ಅನ್ನು ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಈ ಸುದ್ದಿಯನ್ನೂ ಓದಿ | DK Shivakumar: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪರಿಸರ,‌ ಹವಾಮಾನ ವೈಪರಿತ್ಯ ಜಾಗೃತಿ ಕ್ಲಬ್ ಸ್ಥಾಪನೆಗೆ ಆದೇಶ: ಡಿ.ಕೆ.ಶಿವಕುಮಾರ್

ಜೂನ್ ಕೊನೆ ವಾರದಲ್ಲಿ ಒಂದು ವಿಶ್ವ ಒಂದು ಆರೋಗ್ಯದಲ್ಲಿ ಯೋಗದ ಪಾತ್ರ ಎಂಬ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಮೈಸೂರು ವಿಶ್ವವಿದ್ಯಾಲಯದ ವಿಜ್ಞಾನ ಭವನದಲ್ಲಿ ಆಯೋಜಿಸಿದ್ದು, ಇದರಲ್ಲಿ ರಾಷ್ಟ್ರೀಯ ಯೋಗ ತಜ್ಞರುಗಳು ತಮ್ಮ ವಿಚಾರವನ್ನು ಮಂಡಿಸಲಿದ್ದಾರೆ. ಜುಲೈ ಮೊದಲನೆಯ ವಾರದಲ್ಲಿ ಬೆಂಗಳೂರಿನ ಪ್ರಸಿದ್ಧ ನಿಮ್ಹಾನ್ಸ್ ಆಸ್ಪತ್ರೆಯ ಸಭಾಂಗಣದಲ್ಲಿ ಮಾನಸ ಯೋಗ ಎಂಬ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. ಇದೇ ರೀತಿ ಶ್ರೀ ಜಯದೇವ ಹೃದ್ರೋಗ ಸಂಸ್ಥೆ, ಮೈಸೂರಿನಲ್ಲಿ ಕಾರ್ಡಿಯೋ ಯೋಗ ಹಾಗೂ ಕಿದ್ವಾಯಿ ಗ್ರಂಥಿ ಸಂಸ್ಥೆ, ಬೆಂಗಳೂರಿನಲ್ಲಿ ಕಾರಿನೋ ಯೋಗ ಎಂಬ ಕಾರ್ಯಕ್ರಮವನ್ನು ಆಯೋಜಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »