Karunadu Studio

ಕರ್ನಾಟಕ

Yoga Day: ʼಪಯಣʼ ಕಾರು ಸಂಗ್ರಹಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ – Kannada News | International Yoga Day celebrated at the Payana Car Museum Mysore


ಮೈಸೂರು: ವಿಶ್ವದಾದ್ಯಂತ ಆರೋಗ್ಯದ ಮಹತ್ವವನ್ನು ಸಾರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ (Yoga Day) ಅಂಗವಾಗಿ ಮೈಸೂರು ಹೊರವಲಯದ ʼಪಯಣʼ ಕಾರು ಸಂಗ್ರಹಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಈ ವಿಶಿಷ್ಟ ಕಾರ್ಯಕ್ರಮವು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌, ಶಾಂತಿವನ ಯೋಗ ಮತ್ತು ನೈತಿಕ ಶಿಕ್ಷಣ ವಿಭಾಗ,ಸೌಖ್ಯವನ, ಕ್ಷೇಮವನ ಸೇರಿ ಹಲವು ಸಂಸ್ಥೆಗಳ ಸಹಕಾರದಿಂದ ಆಯೋಜನೆಗೊಂಡಿದೆ.

ಈ ಮಹತ್ವದ ಯೋಗ ದಿನಾಚರಣೆಯಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಒಳಗೊಂಡಂತೆ 3,000ಕ್ಕೂ ಹೆಚ್ಚು ಯೋಗ ಶಿಕ್ಷಣಾರ್ಥಿಗಳು ಭಾಗವಹಿಸಲಿದ್ದು, ಯೋಗದ ಪ್ರಾಚೀನ ತತ್ವಗಳ ಬಗ್ಗೆ ಆರೋಗ್ಯಕರ ಜೀವನಶೈಲಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರಮುಖ ಪ್ರದರ್ಶನಗಳು ನಡೆಯಲಿವೆ. ಈ ಕಾರ್ಯಕ್ರಮವು ಕೇಂದ್ರ ಹಾಗೂ ರಾಜ್ಯ ಆಯುಷ್‌ ಮಂತ್ರಾಲಯಗಳ ಆಶ್ರಯದಲ್ಲಿ ನಡೆಯಲಿದ್ದು, ಆರೋಗ್ಯದ ಮೇಲೆ ಯೋಗದ ಮಹತ್ವ ಹಾಗೂ ಅವಶ್ಯಕತೆಯನ್ನು ಸಾರಲಿದೆ.

ಇದನ್ನು ಓದಿ: Yoga Training: 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ತರಬೇತಿ

ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಹಿಸಲಿದ್ದು ಮೈಸೂರು ರಾಮ ಕೃಷ್ಣಾಶ್ರಮದ ಅಧ್ಯಕ್ಷ ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್‌ ಉದ್ಘಾಟನಾ ಭಾಷಣ ನೀಡಲಿದ್ದಾರೆ. ಈ ಅದ್ಧೂರಿ ಸಮಾರಂಭದಲ್ಲಿ ಮೈಸೂರು-ಕೊಡಗು ಸಂಸದ ಶ್ರೀ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ, ಶ್ರೀರಂಗಪಟ್ಟಣ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಹಾಗೂ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಪುರಾತತ್ವ, ಸಂಗ್ರಹಾಲಯಗಳು ಹಾಗೂ ಪರಂಪರೆ ಇಲಾಖೆಯ ಆಯುಕ್ತ ಶ್ರೀ ದೇವರಾಜು ಎ. ಕ.ಆ.ಸೇ‌‌. ಮತ್ತು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಯ ಮೈಸೂರು ವಿಭಾಗದ ಮುಖ್ಯಸ್ಥ ಶ್ರೀ ಕೆ. ಶಿವಕುಮಾರ್ ಉಪಸ್ಥಿತರಿರಲಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »