Karunadu Studio

ಕರ್ನಾಟಕ

International Yoga: 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ – Kannada News | 11th International Yoga Day


ಚಿಕ್ಕಬಳ್ಳಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಚಿಕ್ಕಬಳ್ಳಾಪುರ, ಜಿಲ್ಲೆಯ ಯೋಗ ಸಂಸ್ಥೆಗಳ ಸಹಯೋಗದೊಂದಿಗೆ ೧೧ನೇ ಅಂತರರಾಷ್ಟ್ರೀಯ ಯೋಗ ದಿನಾ ಚರಣೆಯನ್ನು ಜೂ.೨೧ ರಂದು ಬೆಳಿಗ್ಗೆ ೭ ರಿಂದ ೮ ಗಂಟೆ ವರೆಗೆ ನಗರದ ಸರ್. ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಸುಧಾಕರ್ ನೆರವೇರಿಸಲಿದ್ದಾರೆ.

ಉಪಸ್ಥಿತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ.ಇ ಪ್ರದೀಪ್ ಈಶ್ವರ್ ವಹಿಸಲಿದ್ದಾರೆ.

ಇದನ್ನೂ ಓದಿ:

ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ.ಸುಧಾಕರ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಂ. ಮಲ್ಲೇಶ್ ಬಾಬು, ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ, ಚಿದಾನಂದ ಎಂ. ಗೌಡ, ಎಂ.ಎಲ್. ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ್, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಡಾ.ಹೆಚ್.ನರಸಿಂಹಯ್ಯ ವಿಜ್ಞಾನ ಶೈಕ್ಷಣಿಕ ಸಾಂಸ್ಕೃತಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಹೆಚ್. ಶಿವಶಂಕರರೆಡ್ಡಿ, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ನಗರ ಸಭೆ ಅಧ್ಯಕ್ಷ ಎ. ಗಜೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಹಳ್ಳಿ ಎನ್. ರಮೇಶ್ ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಸರ್ಕಾರದ ಕಾರ್ಯದರ್ಶಿಗಳು, ಮೂಲಭೂತ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿಗಳಾದ ಡಾ. ಎನ್.ಮಂಜುಳ, ಆಯುಷ್ ನಿರ್ದೇಶನಾಲಯದ ಆಯುಕ್ತರಾದ ವಿಪಿನ್ ಸಿಂಗ್ ರವರು ಭಾಗವಹಿಸಲಿದ್ದಾರೆ.

ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸರ್ಕಾರಿ ನೌಕರರ ಸಂಘ, ಯೋಗ ಸಂಸ್ಥೆಗಳು ಹಾಗೂ ಇತರೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಮಸ್ತ ನಾಗರಿಕರು ಭಾಗವಹಿಸಲಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »