Karunadu Studio

ಕರ್ನಾಟಕ

Israel-Iran Conflict: ದಾಳಿ ಮಾಡಿ ನೀವು ತಪ್ಪು ಮಾಡಿದಿರಿ…. ದೊಡ್ಡಣ್ಣನಿಗೆ ಎಚ್ಚರಿಕೆ ಕೊಟ್ಟ ಇರಾನ್‌ – Kannada News | “Brutal Act That Contravenes International Law”: Iran Confirms US Strikes


ಟೆಹ್ರಾನ್‌: ಅಮೆರಿಕ ಇರಾನ್‌ನ ಪರಮಾಣು ನೆಲೆಗಳ ಮೇಲೆ ದಾಳಿ ನಡೆಸಿದೆ. ಇರಾನ್‌ನ ಪರಮಾಣು ಇಂಧನ ಸಂಸ್ಥೆಯು ಭಾನುವಾರ ಮುಂಜಾನೆ ತನ್ನ ಮೂರು ಪರಮಾಣು ತಾಣಗಳ ಮೇಲೆ ನಡೆದ ದಾಳಿಗಳನ್ನು ದೃಢಪಡಿಸಿದೆ ಮತ್ತು ತನ್ನ ರಾಷ್ಟ್ರೀಯ ಉದ್ಯಮದ ಅಭಿವೃದ್ಧಿಯನ್ನು ನಿಲ್ಲಿಸಲು ಬಿಡುವುದಿಲ್ಲ ಎಂದು ಹೇಳಿದೆ. ಅಮೆರಿಕ ದಾಳಿ ನಡೆಸಿದ ಬೆನ್ನಲ್ಲೇ ಇರಾನ್‌ ಕೆರಳಿದ್ದು ಖಡಕ್‌ ಎಚ್ಚರಿಕೆಯನ್ನು ನೀಡಿದೆ. ಅಮೆರಿಕದ ದಾಳಿಯಲ್ಲಿ ಫೋರ್ಡೋ ಪರಮಾಣು ಸ್ಥಾವರಕ್ಕೆ ಗಂಭೀರ ಹಾನಿಯಾಗಿಲ್ಲ ಎಂದು ಇರಾನಿನ ಶಾಸಕರೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮೂರು ಪರಮಾಣು ತಾಣಗಳಾದ ಫೋರ್ಡೋ, ನಟಾಂಜ್, ಎಸ್ಪಹಾನ್ ಮೇಲೆ ಅಮೆರಿಕ ದಾಳಿ ಬೆನ್ನಲ್ಲೇ ಇರಾನ್ ಪ್ರತಿಕ್ರಿಯೆ ನೀಡಿದೆ. ಅಮೆರಿಕದ ದಾಳಿ ಖಂಡಿಸಿದ ಇರಾನ್, ನಮ್ಮ 3 ಪರಮಾಣು ತಾಣಗಳ ಮೇಲೆ ಅಮೆರಿಕ ದಾಳಿ ನಡೆಸಿದೆ. ಇಂತಹ ದಾಳಿಗಳು ಅಂತಾರಾಷ್ಟ್ರೀಯ ಶಾಂತಿಗೆ ಅಪಾಯಕಾರಿ ಎಂದು ಅಮೆರಿಕ ಸೇನೆ ದಾಳಿ ಬಳಿಕ ಇರಾನ್ ಪ್ರತಿಕ್ರಿಯೆ ನೀಡಿದೆ. ಇರಾನ್‌ನ ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕ ನಡೆಸಿದ ದಾಳಿಯ ನಂತರ ಸೌದಿ ಅರೇಬಿಯಾ ಅಥವಾ ಇತರ ಅರಬ್ ಗಲ್ಫ್ ರಾಷ್ಟ್ರಗಳ ಪರಿಸರದಲ್ಲಿ ಯಾವುದೇ ವಿಕಿರಣಶೀಲ ಕುರುಹುಗಳು ಪತ್ತೆಯಾಗಿಲ್ಲ ಎಂದು ಸೌದಿ ಅರೇಬಿಯಾದ ಪರಮಾಣು ನಿಯಂತ್ರಕ ಭಾನುವಾರ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ. ಪರಮಾಣು ತಾಣಗಳ ಬಳಿ ವಾಸಿಸುವ ನಿವಾಸಿಗಳಿಗೆ ಯಾವುದೇ ಅಪಾಯವಿಲ್ಲ ಎಂದು ನಿಯಂತ್ರಣ ಪ್ರಾಧಿಕಾರ ತಿಳಿಸಿದೆ.

ಇರಾನ್‌ನ ಮೂರು ಪರಮಾಣು ಕೇಂದ್ರಗಳ ಮೇಲೆ (Israel-Iran Conflict) ಅಮೆರಿಕದ ಪಡೆಗಳು ದಾಳಿ ನಡೆಸಿದ ನಂತರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾನುವಾರ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರನ್ನು ಶ್ಲಾಘಿಸಿದ್ದಾರೆ. ಬೇರೆ ಯಾವುದೇ ದೇಶ ಮಾಡದೆ ಇರುವ ಸಾಧನೆಯನ್ನು ಅಮೆರಿಕ ಮಾಡಿದೆ. ಅಭಿನಂದನೆಗಳು, ಅಧ್ಯಕ್ಷ ಟ್ರಂಪ್, ಅಮೆರಿಕದ ಅದ್ಭುತ ಮತ್ತು ಶೌರ್ಯ ಪ್ರದರ್ಶನದಿಂದ ಇರಾನ್‌ನ ಪರಮಾಣು ನೆಲೆಗಳ ಮೇಲೆ ದಾಳಿ ನಡೆಸಲಾಗಿದೆ. ನಿಮ್ಮ ದಿಟ್ಟ ನಿರ್ಧಾರವು ಇತಿಹಾಸವನ್ನು ಬದಲಾಯಿಸುತ್ತದೆ ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Israel-Iran Conflict: ಇಸ್ರೇಲ್‌ -ಇರಾನ್‌ ಯುದ್ಧಕ್ಕೆ ಎಂಟ್ರಿ ಕೊಟ್ಟೇ ಬಿಡ್ತು ಅಮೆರಿಕ; ಇರಾನ್‌ನ 3 ಪರಮಾಣು ನೆಲೆಗಳ ಮೇಲೆ ದಾಳಿ

ದಾಳಿ ಕುರಿತು ಮಾಹಿತಿ ನೀಡಿರುವ ಟ್ರಂಪ್‌ ನಾವು ಇರಾನ್‌ನಲ್ಲಿರುವ ಫೋರ್ಡೋ, ನಟಾಂಜ್ ಮತ್ತು ಎಸ್ಫಹಾನ್ ಸೇರಿದಂತೆ ಮೂರು ಪರಮಾಣು ತಾಣಗಳ ಮೇಲೆ ನಮ್ಮ ಅತ್ಯಂತ ಯಶಸ್ವಿ ದಾಳಿಯನ್ನು ಪೂರ್ಣಗೊಳಿಸಿದ್ದೇವೆ”. “ಎಲ್ಲಾ ವಿಮಾನಗಳು ಈಗ ಇರಾನ್ ವಾಯುಪ್ರದೇಶದ ಹೊರಗೆ ಇವೆ. ಬಾಂಬ್‌ಗಳ ಸಂಪೂರ್ಣ ಪೇಲೋಡ್ ಅನ್ನು ಪ್ರಾಥಮಿಕ ತಾಣವಾದ ಫೋರ್ಡೋದಲ್ಲಿ ಬೀಳಿಸಲಾಯಿತು. ನಮ್ಮ ಸೈನಿಕರ ಶೌರ್ಯಕ್ಕೆ ದೊಡ್ಡ ಸಲಾಂ ಎಂದು ಹೇಳಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »