ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು(heart attack) ದಿನೇ ದಿನೆ ಹೆಚ್ಚಾಗುತ್ತಿದ್ದು, ಆಗಾಗ ಇಂತಹ ಘಟನೆಗಳು ವರದಿಯಾಗುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ಹಾಸನದಲ್ಲಿ(Hassan Heart attack) ನಡೆದಿದೆ. ನಿನ್ನೆ ತಡರಾತ್ರಿ 35 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತನನ್ನು ಚೇತನ್ ಎಂದು ಗುರುತಿಸಲಾಗಿದೆ. ಈತ ಹಾಸನದ ಬಸ್ ನಿಲ್ದಾಣದ ಬಳಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದ ಎನ್ನಲಾಗಿದೆ.
ಚೇತನ್ ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ, ಮಗು ಜೊತೆಗೆ ವಾಸವಾಗಿದ್ದರು, ನಿನ್ನೆ ರಾತ್ರಿ ಮನೆಯಲ್ಲಿ ಊಟ ಮಾಡುತ್ತಿದ್ದ ವೇಳೆ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಈ ಸುದ್ದಿಯನ್ನೂ ಓದಿ: Sunjay Kapur Death: ಪೋಲೋ ಆಡುತ್ತಿದ್ದಾಗಲೇ ಹೃದಯಾಘಾತ- ಕರಿಷ್ಮಾ ಕಪೂರ್ ಮಾಜಿ ಪತಿ ಸಂಜಯ್ ಕಪೂರ್ ನಿಧನ