Karunadu Studio

ಕರ್ನಾಟಕ

Mango Price Drop: ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ; 2.5 ಲಕ್ಷ ಟನ್ ಮಾವು ಖರೀದಿಗೆ ನಿರ್ಧಾರ, ಬೆಲೆ ಎಷ್ಟು? – Kannada News | central government has decided to purchase mangoes from the farmers of Karnataka


ನವದೆಹಲಿ: ಬೆಲೆ ಕುಸಿತದಿಂದ ಕಂಗಾಲಾಗಿದ್ದ ಕರ್ನಾಟಕ ಮಾವು ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದ್ದು, ರೈತರಿಂದ ಸುಮಾರು 2.5 ಲಕ್ಷ ಮೆಟ್ರಿಕ್ ಟನ್ ಮಾವು (Mango Price Drop) ಖರೀದಿಗೆ ಮುಂದಾಗಿದೆ. ಕರ್ನಾಟಕ ರೈತರಿಗೆ ನೆರವಾಗುವಂತೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಎಚ್‌.ಡಿ.ದೇವೇಗೌಡ ಸೇರಿ ಹಲವು ನಾಯಕರು ಕೇಂದ್ರಕ್ಕೆ ಪತ್ರ ಬರೆದ ಬೆನ್ನಲ್ಲೇ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ (ಎಂಐಎಸ್‌) 2025-26ನೇ ಸಾಲಿಗೆ ಕರ್ನಾಟಕದಿಂದ ಕ್ವಿಂಟಲ್‌ಗೆ 1,616 ರೂ.ಗಳಂತೆ 2.5 ಲಕ್ಷ ಟನ್ ಮಾವನ್ನು ಖರೀದಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.

ಈ ಬಗ್ಗೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯದ ಮಾವು ಬೆಳೆಗಾರರಿಗೆ ನೆರವಾಗಲು ಕೋರಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಎಚ್‌.ಡಿ. ಕುಮಾರಸ್ವಾಮಿ ಅವರು ಪತ್ರ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು, “ಕರ್ನಾಟಕ ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ ಕ್ವಿಂಟಲ್‌ಗೆ 1,616 ರೂ.ಗಳಂತೆ ಗರಿಷ್ಠ 2,50,000 ಟನ್ ಮಾವು ಖರೀದಿಸಲು ಅನುಮೋದಿಸಲಾಗಿದೆ ಎಂದು ನಾನು ನಿಮಗೆ ತಿಳಿಸಲು ಬಯಸುತ್ತೇನೆ ಎಂದು ಶಿವರಾಜ್‌ ಸಿಂಗ್ ಚೌಹಾಣ್ ಅವರು ಕುಮಾರಸ್ವಾಮಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.



ಪ್ರಧಾನಿ ಮೋದಿಗೆ ಎಚ್‌ಡಿಕೆ ಧನ್ಯವಾದ

ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್ ಚೌಹಾಣ್‌ ಅವರಿಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಧನ್ಯವಾದ ತಿಳಿಸಿದ್ದಾರೆ. ಮೋದಿ ಸರಕಾರದ ರೈತಪರ ಬದ್ಧತೆ, ಅಚಲತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮನವಿ ಮಾಡಿದ ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ (Market Intervention Scheme-MIS) ಅಡಿಯಲ್ಲಿ ಬೆಂಬಲ ಬೆಲೆ ಘೋಷಿಸಿದ್ದಕ್ಕಾಗಿ ಕೇಂದ್ರದ ಕೃಷಿ ಸಚಿವರಾದ ಶಿವರಾಜ್‌ ಸಿಂಗ್ ಚೌಹಾಣ್ ಅವರಿಗೆ ಕರ್ನಾಟಕದ ಮಾವು ಬೆಳೆಗಾರರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನರೇಂದ್ರ ಮೋದಿ ಅವರ ಆಡಳಿತದಲ್ಲಿ ರೈತರ ಉತ್ಪನ್ನಗಳಿಗೆ ಸ್ಥಿರ ಬೆಲೆಯ ಖಾತರಿ ಸದಾ ಇರುತ್ತದೆ ಎಂಬುದನ್ನು ಈ ಉಪಕ್ರಮವು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | HD Kumaraswamy: ಮಾವು ಬೆಳೆಗಾರರ ನೆರವಿಗೆ ಧಾವಿಸಿ: ಕೇಂದ್ರ ಕೃಷಿ ಸಚಿವರಿಗೆ ಎಚ್.ಡಿ.ಕುಮಾರಸ್ವಾಮಿ ಪತ್ರ





Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »