Karunadu Studio

ಕರ್ನಾಟಕ

Joe Root: ವಿಶ್ವ ದಾಖಲೆ ಸನಿಹ ಜೋ ರೂಟ್‌ – Kannada News | Joe Root Needs 73 Runs In 2nd Test To Become First Player In The World To This Historic Feat


ಬರ್ಮಿಂಗ್‌ಹ್ಯಾಮ್‌: ಇಂಗ್ಲೆಂಡ್‌ ತಂಡದ ಅನುಭವಿ ಆಟಗಾರ ಜೋ ರೂಟ್(Joe Root) ವಿಶ್ವ ದಾಖಲೆಯೊಂದನ್ನು ನಿರ್ಮಿಸುವ ಸನಿಹದಲ್ಲಿದ್ದಾರೆ. ಜು.2 ರಂದು ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಭಾರತ ವಿರುದ್ಧದ ಎರಡನೇ ಟೆಸ್ಟ್(IND vs ENG 2nd Test) ಪಂದ್ಯದಲ್ಲಿ ರೂಟ್‌ 73 ರನ್‌ ಗಳಿಸಿದರೆ ಭಾರತದ ವಿರುದ್ಧ 3000 ರನ್ ಗಳಿಸಿದ ವಿಶ್ವದ ಮೊದಲ ಆಟಗಾರ ಎನಿಸಿಕೊಳ್ಳಲಿದ್ದಾರೆ. ಪ್ರಸ್ತುತ ದಾಖಲೆ ಕೂಡ ರೂಟ್‌ ಹೆಸರಿನಲ್ಲಿಯೇ ಇದೆ. ಸದ್ಯ ಅವರು 2927* ರನ್ ಗಳಿಸಿದ್ದಾರೆ. ಆಸ್ಟ್ರೇಲಿಯಾದ ಮಾಜಿ ದಿಗ್ಗಜ ರಿಕಿ ಪಾಂಟಿಂಗ್(2555) ದ್ವಿತೀಯ ಸ್ಥಾನದಲ್ಲಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 6000 ರನ್ ಗಳಿಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗುವ ಅವಕಾಶ ಕೂಡ ಇದೆ. ಈ ಮೈಲಿಗಲ್ಲನ್ನು ತಲುಪಲು ಅವರಿಗೆ ಕನಿಷ್ಠ ಮೂರು ಟೆಸ್ಟ್‌ ಪಂದ್ಯಕ್ಕೂ ಹೆಚ್ಚಿನ ಸಮಯ ಬೇಕಾಗಬಹುದು. ರೂಟ್ ಇದುವರೆಗೆ ಡಬ್ಲ್ಯೂಟಿಸಿಯಲ್ಲಿ 5624 ರನ್ ಗಳಿಸಿದ್ದಾರೆ ಮತ್ತು ಐತಿಹಾಸಿಕ ಸಾಧನೆ ಮಾಡಲು ಅವರಿಗೆ 376 ರನ್‌ಗಳು ಬೇಕಾಗಿವೆ. ರೂಟ್‌ ಭಾರತ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದ ದ್ವಿತೀಯ ಇನಿಂಗ್ಸ್‌ನಲ್ಲಿ ಅಜೇಯ ಅರ್ಧಶತಕ ಬಾರಿಸಿ ಮಿಂಚಿದ್ದರು. ಎಡ್ಜ್‌ಬಾಸ್ಟನ್‌ನಲ್ಲಿ ರೂಟ್‌ ಬ್ಯಾಟಿಂಗ್‌ ದಾಖಲೆ ಕೂಡ ಉತ್ತಮವಾಗಿದೆ.

ದ್ರಾವಿಡ್‌ ದಾಖಲೆ ಮೇಲೆ ಕಣ್ಣು

ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ ಹಿಡಿದ ಆಟಗಾರರ ಪಟ್ಟಿಯಲ್ಲಿ ಜಂಟಿ ಮೊದಲ ಸ್ಥಾನಕ್ಕೇರಿರುವ ಜೋ ರೂಟ್‌ ಇನ್ನೊಂದು ಕ್ಯಾಚ್‌ ಹಿಡಿದರೆ ದ್ರಾವಿಡ್‌ ಅವರನ್ನು ಹಿಂದಿಕ್ಕಿ ವಿಶ್ವ ದಾಖಲೆಯನ್ನು ತಮ್ಮ ಹೆಸರಿಗೆ ಸೇರಿಸಿಕೊಳ್ಳಲಿದ್ದಾರೆ. ಸದ್ಯ ಉಭಯ ಆಟಗಾರರು 210 ಕ್ಯಾಚ್‌ಗಳೊಂದಿಗೆ ಜಂಟಿ ಅಗ್ರಸ್ಥಾನಿಯಾಗಿದ್ದಾರೆ.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »