Karunadu Studio

ಕರ್ನಾಟಕ

Nikhil Kumaraswamy: ರಾಮನಗರದಿಂದಲೇ ಸ್ಪರ್ಧಿಸುತ್ತೇನೆ: ನಿಖಿಲ್ ಕುಮಾರಸ್ವಾಮಿ ಘೋಷಣೆ – Kannada News | Nikhil Kumaraswamy My next election will be in Ramanagara says Yuva Janata Dal state president Nikhil Kumaraswamy


ರಾಮನಗರ: ʼʼಚುನಾವಣೆಗೆ ನಿಲ್ಲುವ ಸಂದರ್ಭ ಬಂದರೆ ರಾಮನಗರದಲ್ಲಿಯೇ ನನ್ನ ಮುಂದಿನ ಚುನಾವಣೆ. ಯಾವುದೇ ಕಾರಣಕ್ಕೂ ನಾನು ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲʼʼ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ. ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಆರನೇ ದಿನದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ʼʼಇದು ನಮ್ಮ ಸ್ವ ಕ್ಷೇತ್ರ, ನೀವು ಬೆಳೆಸಿದ ಮನೆ ಮಕ್ಕಳು ನಾವು. ನಮ್ಮನ್ನ ಪ್ರೀತಿಯಿಂದ ಅರಸಿದ್ದೀರಿ, ಬೆಳೆಸಿದ್ದೀರಿ. ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ. ಸೋಲು ಗೆಲುವು ಸರ್ವೇ ಸಾಮಾನ್ಯ. ಮೂರು ಸೋಲುಗಳು ನನಗೆ ರಾಜಕೀಯವಾಗಿ ಪರಿಪಕ್ವತೆಯನ್ನು ಕಲಿಸಿವೆ. ಈ ಸೋಲುಗಳಿಂದ ಕುಗ್ಗದೆ ಮತ್ತೆ ಅವಕಾಶ ಸಿಕ್ಕರೆ ರಾಮನಗರದಿಂದಲೇ ಸ್ಪರ್ಧೆ ಮಾಡುತ್ತೇನೆʼʼ ಅವರು ತಿಳಿಸಿದರು.

ಕುಮಾರಸ್ವಾಮಿ ಅವರಿಗೆ ದೆಹಲಿಯಲ್ಲಿ ಕೆಲಸವಿಲ್ಲ. ರಾಜ್ಯಕ್ಕೆ ಬರ್ತಾರೆಂಬ ಡಿ.ಕೆ.ಸುರೇಶ್ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು, ʼʼಹೌದಪ್ಪ…ಮಾವು ಬೆಳೆಗಾರರಿಗೆ ಡಿ.ಕೆ.ಸುರೇಶ್ ಇಲ್ಲ ಶಿವಕುಮಾರ್ ಬೆಂಬಲ ಬೆಲೆ ಕೊಡಿಸಿದ್ರಾ?ʼʼ ಎಂದು ಟಾಂಗ್ ನೀಡಿದರು. ʼʼಮಾವಿನ ಹಣ್ಣಿನ ಬೆಲೆ ಕುಸಿತದಿಂದ ಸಂಕಷ್ಟದಲ್ಲಿದ್ದ ರೈತರಿಗೆ ಕುಮಾರಣ್ಣ ನೆರವಿಗೆ ಬಂದಿದ್ದಾರೆ. ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದ ಕುಮಾರಣ್ಣನ ಮನವಿಗೆ ಸ್ಪಂದಿಸಿ ಕೇಂದ್ರ ಸರ್ಕಾರ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ ಬೆಂಬಲ ಬೆಲೆ ಘೋಷಿಸಿದೆʼʼ ಎಂದರು.

ʼʼರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡುವುದರಿಂದ ಅಭಿವೃದ್ಧಿ ಆಗಲ್ಲ. ಕೆಂಗಲ್ ಹನುಮಂತಯ್ಯ ಕಟ್ಟಿದ ರಾಮನಗರ ಹೆಸರನ್ನು ಕಾಂಗ್ರೆಸ್ ಅಳಿಸಿದೆ. ಆದರೆ ರಾಮನಗರ ಜನರ ಹೃದಯದಲ್ಲಿ ರಾಮನಗರ ಶಾಶ್ವತವಾಗಿ ಉಳಿದಿದೆ ಮಿಸ್ಟರ್ ಡಿ.ಕೆ.ಶಿವಕುಮಾರ್ʼʼ ಎಂದು ನಿಖಿಲ್‌ ತಿರುಗೇಟು ನೀಡಿದರು.

ʼʼಒಂದು ರಸ್ತೆಗೆ, ಸರ್ಕಾರಿ ಶಾಲೆ ದುರಸ್ತಿಗೆ ಹಣವಿಲ್ಲ ಈ ಸರ್ಕಾರದಲ್ಲಿ. ಆದರೆ ಮಧ್ಯವರ್ತಿಗಳ ಮೂಲಕ ಹೋದರೆ ಎಲ್ಲವೂ ಸಿಗುತ್ತೆ. ಆ ಸ್ಥಿತಿ ಇದೇ ಕಾಂಗ್ರೆಸ್‌ನಲ್ಲಿ. ವಸತಿ ಇಲಾಖೆಯಲ್ಲಿ ಮನೆ ಪಡೆಯಬೇಕಾದರೆ ಗುತ್ತಿಗೆದಾರರ ಮೂಲಕ ಹೋಗುವ ಪರಿಸ್ಥಿತಿ ನಿರ್ಮಾವಾಗಿದೆ” ಎಂದು ಆರೋಪಿಸಿದರು.

ಈ ಸುದ್ದಿಯನ್ನೂ ಓದಿ | Namma Metro: ಇನ್ನು ಮುಂದೆ ನಮ್ಮ ಮೆಟ್ರೋ ಟಿಕೆಟ್ ಈ ಐದು ಆ್ಯಪ್‌ಗಳಲ್ಲೂ ಲಭ್ಯ

ಮಾಜಿ ಶಾಸಕ ಹಾಗೂ ಜಿಲ್ಲಾಧ್ಯಕ್ಷ ಎ. ಮಂಜುನಾಥ್, ತಾಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಪ್ಪ, ನಗರಸಭಾ ಸದಸ್ಯ ಮಂಜುನಾಥ್, ಮಾಜಿ ನಗರಸಭೆ ಸದಸ್ಯ ರವಿ ಮತ್ತಿತರರು ಉಪಸ್ಥಿತರಿದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »