Karunadu Studio

ಕರ್ನಾಟಕ

ಸರಿಯಾಗಿ ಕರ್ತವ್ಯ ನಿರ್ವಹಿಸದಿದ್ದರೆ ವರ್ಗಾವಣೆ; ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್‌ ಎಚ್ಚರಿಕೆ – Kannada News | CM Siddaramaiah CM Siddaramaiah instructs Additional Advocate Generals to perform duties effectively


ಬೆಂಗಳೂರು: ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ, ತಪ್ಪಿದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)‌ ಸೂಚನೆ ನೀಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಗುರುವಾರ ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳ ಕಾರ್ಯನಿರ್ವಹಣಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಪರವಾಗಿ ಸಮರ್ಪಕವಾಗಿ ವಾದ ಮಾಡಲು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಸರ್ಕಾರದ ಕಾನೂನುಗಳನ್ನು ಎಲ್ಲ ಹಂತಗಳಲ್ಲಿ ಎತ್ತಿ ಹಿಡಿಯುವುದು ನಿಮ್ಮ ಕರ್ತವ್ಯ. ಕರ್ನಾಟಕ ರಾಜ್ಯ ಅಧಿನಿಯಮಗಳ ಸಂಪೂರ್ಣ ಅನುಷ್ಠಾನ, ಉದ್ದೇಶದ ನಿರ್ವಹಣೆ ನಿಮ್ಮ ಕೈಯಲ್ಲಿದೆ ಎಂದು ತಿಳಿಸಿದರು.

ನೀವೆಲ್ಲರೂ ಹಿರಿಯ ನ್ಯಾಯವಾದಿಗಳಿದ್ದೀರಿ. ಸರ್ಕಾರದ ಆದ್ಯತೆಗಳನ್ನು ಕಾಪಾಡುವುದು ನಿಮ್ಮೆಲ್ಲರ ಜವಾಬ್ದಾರಿ. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ. ನ್ಯಾಯಾಲಯಗಳಲ್ಲಿ ಪರಿಣಾಮಕಾರಿಯಾಗಿ ವಾದ ಮಂಡಿಸದ ಕಾರಣಕ್ಕೆ ನಾವು ಹಲವು ಪ್ರಕರಣಗಳಲ್ಲಿ ಹಿನ್ನಡೆ ಅನುಭವಿಸುವಂತಾಗಿದೆ. ಸರ್ಕಾರಕ್ಕೆ ಅನುಕೂಲಕರವಾದ ಕೇಸ್‌ಗಳಲ್ಲಿ ಸಹ ಸರ್ಕಾರದ ಪರವಾಗಿ ಆದೇಶಗಳು ಬರುತ್ತಿಲ್ಲ ಯಾಕೆ ಎಂದು ಪ್ರಶ್ನಿಸಿದರು.

ಅನೇಕ ಪ್ರಕರಣಗಳಲ್ಲಿ ಸರ್ಕಾರದ ವಿರುದ್ಧ ಯಾಕೆ ಸುಲಭವಾಗಿ ತಡೆಯಾಜ್ಞೆ ದೊರೆಯುತ್ತದೆ? ತಡೆಯಾಜ್ಞೆಯನ್ನು ವರ್ಷಗಟ್ಟಲೆ ತೆರವುಗೊಳಿಸದೆ ಇಡುವ ಪ್ರಕರಣಗಳು ಯಾಕೆ ಹೆಚ್ಚಾಗುತ್ತಿವೆ? ಸರ್ಕಾರದ ವಿರುದ್ಧದ ತಡೆಯಾಜ್ಞೆ ಪ್ರಕರಣಗಳನ್ನು ಆದಷ್ಟು ಬೇಗನೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಕೆಲವು ಸಂದರ್ಭಗಳಲ್ಲಿ ಸಣ್ಣಪುಟ್ಟ ಪ್ರಕರಣಗಳಲ್ಲಿ ಸಹ ಸರ್ಕಾರಕ್ಕೆ ಮುಜುಗರವಾಗುವಂತಹ ಬೆಳವಣಿಗೆಗಳು ಆಗಿವೆ. ನಿಮ್ಮ ತಪ್ಪುಗಳಿಂದ ಸರ್ಕಾರಕ್ಕೆ ಮುಜುಗರವುಂಟಾಗುವ ಪರಿಸ್ಥಿತಿ ಬರಬಾರದು ಎಂದು ಸೂಚಿಸಿದರು.

ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ, ತಪ್ಪಿದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ. ಸಂಪೂರ್ಣ ಸಿದ್ಧತೆಯೊಂದಿಗೆ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬೇಕು. ಮೆರಿಟ್‌ ಇರುವ ಪ್ರಕರಣಗಳಲ್ಲಿ ಸರ್ಕಾರಕ್ಕೆ ಹಿನ್ನಡೆಯಾಗಲು ಅವಕಾಶ ನೀಡಬಾರದು. ಪ್ರತಿಯೊಂದು ಪ್ರಕರಣಗಳನ್ನು ಸವಾಲಿನಿಂದ ಸ್ವೀಕರಿಸಿ, ಕಾರ್ಯ ನಿರ್ವಹಿಸಿದರೆ ಸರ್ಕಾರಕ್ಕೆ ಉತ್ತಮ ಹೆಸರು ಬರಲು ಸಾಧ್ಯವಿದೆ. ನಿಮ್ಮಿಂದ ಹೆಚ್ಚಿನ ಕ್ರಿಯಾಶೀಲ ಕಾರ್ಯನಿರ್ವಹಣೆಯನ್ನು ಸರ್ಕಾರ ಅಪೇಕ್ಷಿಸುತ್ತದೆ. ಇಲಾಖೆಗಳಿಂದ ಅಥವಾ ಅಧಿಕಾರಿಗಳಿಂದ ಸರಿಯಾಗಿ ಸ್ಪಂದನೆ ದೊರೆಯದಿದ್ದರೆ, ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಗಮನಕ್ಕೆ ತರಬೇಕು ಎಂದು ಸೂಚನೆ ನೀಡಿದರು.

ಎಲ್ಲ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳಿಗೆ ಇಲಾಖಾವಾರು ಕಾರ್ಯಕ್ಷೇತ್ರವನ್ನು ನಿಗದಿಪಡಿಸಬೇಕು. ನ್ಯಾಯಾಂಗದಲ್ಲಿನ ಎಲ್ಲಾ ಅಡ್ಡಿಗಳನ್ನು ನಿವಾರಿಸುವ ನಿಟ್ಟಿನಲ್ಲಿ ಇನ್ನಷ್ಟು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿ. ರಾಜ್ಯ ಸರ್ಕಾರದ ಪರವಾದ ನ್ಯಾಯಾಂಗ ಹೋರಾಟಗಳನ್ನು ಇನ್ನಷ್ಟು ವೃತ್ತಿಪರಗೊಳಿಸುವ ಅಗತ್ಯವಿದೆ. ರಾಜ್ಯ ಸರ್ಕಾರದ 21799 ಪ್ರಕರಣಗಳು ಹೈಕೋರ್ಟ್‌ನಲ್ಲಿ ಬಾಕಿಯಿವೆ. ಇದರಲ್ಲಿ 5016 ಪ್ರಕರಣಗಳಲ್ಲಿ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಇದನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಬೇಕು. ಮುಖ್ಯ ಕಾರ್ಯದರ್ಶಿಯವರು ಎಲ್ಲಾ ಹೆಚ್ಚುವರಿ ಅಡ್ವೊಕೇಟ್ ಜನರಲ್‌ ಅವರ ಸಭೆಯನ್ನು ಕರೆದು ಸಮನ್ವಯತೆಯಿಂದ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಈ ಸುದ್ದಿಯನ್ನೂ ಓದಿ | KV Prabhakar: ಮಾಧ್ಯಮ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧ: ಕೆ.ವಿ.ಪ್ರಭಾಕರ್

ಕಾನೂನು ಸಚಿವ ಎಚ್.ಕೆ.ಪಾಟೀಲ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್, ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಅಡ್ವೊಕೇಟ್‌ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳು ಅಧಿಕಾರಿಗಳು ಉಪಸ್ಥಿತರಿದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »