ಕೋಲ್ಕತ್ತಾ: ಕಳೆದ ವರ್ಷ ದೇಶವನ್ನೇ ಬೆಚ್ಚಿಬೀಳಿಸಿದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜಿನಲ್ಲಿ(RG Kar Medical College) ನಡೆದ ಅತ್ಯಾಚಾರ ಕೊಲೆ ಪ್ರಕರಣದಂತೆ ಇದೀಗ ದಕ್ಷಿಣ ಕೋಲ್ಕತ್ತಾದ ಕಾನೂನು ಕಾಲೇಜಿನ ( Kolkata Law College) ಪ್ರಥಮ ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಅದೇ ಸಂಸ್ಥೆಯ ಹಳೆಯ ವಿದ್ಯಾರ್ಥಿ ಮತ್ತು ಇಬ್ಬರು ಹಿರಿಯ ವಿದ್ಯಾರ್ಥಿಗಳು ಸೇರಿ ಕಾಲೇಜು ಆವರಣದಲ್ಲೇ ಅತ್ಯಾಚಾರ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಟಿಎಂಸಿಯ (TMC) ಯುವ ನಾಯಕ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ವರ್ಷ ಆಗಸ್ಟ್ ನಲ್ಲಿ ಕೋಲ್ಕತ್ತಾದಲ್ಲಿ ನಡೆದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಅತ್ಯಾಚಾರ ಕೊಲೆಯ ಘಟನೆಯ ನೆನಪು ಮರೆಯಾಗುವ ಮುನ್ನವೇ ಮತ್ತೊಂದು ಭಯಾನಕ ಘಟನೆ ನಡೆದಿದೆ. ದಕ್ಷಿಣ ಕೋಲ್ಕತ್ತಾದ ಕಾನೂನು ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿಯೊಬ್ಬಳನ್ನು ಅದೇ ಶಿಕ್ಷಣ ಸಂಸ್ಥೆಯ ಹಳೆಯ ವಿದ್ಯಾರ್ಥಿ ಹಾಗೂ ಇಬ್ಬರು ಹಿರಿಯ ವಿದ್ಯಾರ್ಥಿಗಳು ಸೇರಿ ಕಾಲೇಜಿನ ಆವರಣದಲ್ಲೇ ಅತ್ಯಾಚಾರ ನಡೆಸಿದ್ದಾರೆ.
ಪ್ರಕರಣದ ಮುಖ್ಯ ಆರೋಪಿಯನ್ನು ದಕ್ಷಿಣ ಕೋಲ್ಕತ್ತಾ ಜಿಲ್ಲೆಯ ತೃಣಮೂಲ ಕಾಂಗ್ರೆಸ್ ಛತ್ರ ಪರಿಷತ್ (ಟಿಎಂಸಿಪಿ)ನ ಸಂಘಟನಾ ಕಾರ್ಯದರ್ಶಿ ಮತ್ತು ಹಳೆ ವಿದ್ಯಾರ್ಥಿ ಮೊನೊಜಿತ್ ಮಿಶ್ರಾ (31) ಎಂಬಾತನನ್ನು ಬಂಧಿಸಿ ಆತನನ್ನು ಶುಕ್ರವಾರ ಅಲಿಪೋರ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಆತನಿಗೆ ಜುಲೈ 1 ರವರೆಗೆ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ. ಇತರ ಇಬ್ಬರು ಆರೋಪಿಗಳನ್ನು ಕಾಲೇಜಿನ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ಜೈಬ್ ಅಹ್ಮದ್ (19) ಮತ್ತು ಪ್ರಮಿತ್ ಮುಖೋಪಾಧ್ಯಾಯ (20) ಎಂದು ಗುರುತಿಸಲಾಗಿದೆ.
ಏನಾಯಿತು?
ಪರೀಕ್ಷೆಗಳಿಗೆ ಸಂಬಂಧಿಸಿ ತಯಾರಿ ನಡೆಸುತ್ತಿದ್ದ 24 ವರ್ಷದ ಯುವತಿ ಬುಧವಾರ ಮಧ್ಯಾಹ್ನ ಕಾಲೇಜಿಗೆ ಬಂದಿದ್ದಳು. ಆಕೆ ಕಾಲೇಜಿನ ಯೂನಿಯನ್ ಕೋಣೆಯೊಳಗಿದ್ದಾಗ ಕ್ಯಾಂಪಸ್ ಗೇಟ್‌ಗೆ ಬೀಗ ಹಾಕಲು ಆದೇಶಿಸಿ ಬಂದಿದ್ದ ಮಿಶ್ರಾ ಆಕೆಯ ಬಳಿ ತನ್ನ ಲೈಂಗಿಕ ಆಸಕ್ತಿಯನ್ನು ಪೂರೈಸುವಂತೆ ಕೇಳಿಕೊಂಡಿದ್ದಾನೆ. ಅದಕ್ಕೆ ಯುವತಿ ತಿರಸ್ಕರಿಸಿದಾಗ ಬಲವಂತ ಮಾಡಿದ್ದಾನೆ. ಯುವತಿ ಅಳುತ್ತಾ ತನ್ನನ್ನು ಬಿಟ್ಟುಬಿಡುವಂತೆ ಪರಿಪರಿಯಾಗಿ ಕೇಳಿದಳು. ಕೊನೆಗೆ ತಾನು ಬೇರೊಬ್ಬನನ್ನು ಪ್ರೀತಿಸುತ್ತಿರುವುದಾಗಿ ಹೇಳಿದರೂ ಮಿಶ್ರಾ ಕೇಳಲಿಲ್ಲ.
ಯುವತಿಯ ಗೆಳೆಯನನ್ನು ಕೊಲ್ಲುವುದಾಗಿ ಹೇಳಿದ ಮಿಶ್ರಾ, ಬಳಿಕ ಆಕೆಯ ಹೆತ್ತವರನ್ನು ಕ್ರಿಮಿನಲ್ ಪ್ರಕರಣಗಳಲ್ಲಿ ಸಿಕ್ಕಿ ಹಾಕಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಬಳಿಕ ತನಗೆ ಹಾಕಿ ಸ್ಟಿಕ್‌ನಿಂದ ಹೊಡೆದಿದ್ದು ಆಗ ತನಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಇನ್ಹೇಲರ್ ಕೇಳಿದಾಗ ಅದನ್ನು ಕೊಟ್ಟರು. ನಾನು ಸ್ವಲ್ಪ ಸುಧಾರಿಸಿದ ಬಳಿಕ ವಿದ್ಯಾರ್ಥಿ ಸಂಘದ ಕಚೇರಿಯ ಪಕ್ಕದಲ್ಲಿರುವ ನೆಲ ಮಹಡಿಯಲ್ಲಿರುವ ಭದ್ರತಾ ಸಿಬ್ಬಂದಿಯ ಕೋಣೆಗೆ ಕರೆದೊಯ್ದು ಮಿಶ್ರಾ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಆಗ ಉಳಿದ ಇಬ್ಬರು ಪಕ್ಕದಲ್ಲಿ ನಿಂತು ನೋಡುತ್ತಿದ್ದರು ಎಂದು ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ.
ಮೂವರು ಆರೋಪಿಗಳು ಘಟನೆಯ ದೃಶ್ಯಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ. ಘಟನೆಯ ಕುರಿತು ಯಾರಿಗಾದರೂ ಹೇಳಿದರೆ ಅದನ್ನು ಇಂಟರ್ನೆಟ್‌ನಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಯುವತಿ ದೂರಿದ್ದಾಳೆ. ಆರೋಪಿಗಳು ರಾತ್ರಿ 10 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಆ ಕೊಠಡಿಯನ್ನು ಮುಚ್ಚಲಾಗಿದೆ. ವಿಧಿವಿಜ್ಞಾನ ತಜ್ಞರು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಆರೋಪಿಗಳ ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡು ವಿಧಿವಿಜ್ಞಾನ ಪರೀಕ್ಷೆಗಳಿಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಕ್ರಿಮಿನಲ್ ವಕೀಲನಾಗಿರುವ ಮಿಶ್ರಾ
2022ರಲ್ಲಿ ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜಿನಿಂದ ಪದವಿ ಪಡೆದಿರುವ ಪ್ರಮುಖ ಆರೋಪಿ ಮಿಶ್ರಾ, ಕ್ಯಾಂಪಸ್‌ನಲ್ಲಿ ತನ್ನ ಪ್ರಭಾವ ಉಳಿಸಿಕೊಂಡಿದ್ದಾನೆ. ಪದವಿ ಪಡೆದ ಬಳಿಕ ಆತ ಅಲಿಪೋರ್ ಪೊಲೀಸ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅಭ್ಯಾಸ ಮಾಡುತ್ತಿದ್ದಾನೆ. ಹಲವಾರು ಹಲ್ಲೆ ಘಟನೆಗಳಲ್ಲಿ ಭಾಗಿಯಾಗಿರುವ ಆತನನ್ನು ಸಂಸ್ಥೆಯಲ್ಲಿ ತಾತ್ಕಾಲಿಕ ಬೋಧಕೇತರ ಸಿಬ್ಬಂದಿಯಾಗಿ ಕಾಲೇಜು ಉಪ ಪ್ರಾಂಶುಪಾಲರಾದ ನೊಯ್ನಾ ಚಟರ್ಜಿ ಅವರು ನೇಮಿಸಿದ್ದರು. ಘಟನೆ ಕುರಿತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಟಿಎಂಸಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
SHAME!
In the horrific gang rape case of a college student in Kasba, involving a TMCP leader and his associates, TMC MP Kalyan Banerjee has crossed all limits of shamelessness.
When asked about women’s safety, he dismissed it as a mere “political agenda.”
On the RG Kar rape… pic.twitter.com/QWw3lKlN7q
— Amit Malviya (@amitmalviya) June 27, 2025
ಘಟನೆ ಕುರಿತು ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರಸ್, ಆರೋಪಿಗಳು ತಪ್ಪಿತಸ್ಥರೆಂದು ಕಂಡುಬಂದರೆ ಅತ್ಯಂತ ಕಠಿಣ ಶಿಕ್ಷೆ ನೀಡಬೇಕೆಂದು ಎಂದು ಹೇಳಿದೆ. ಘಟನೆ ಕುರಿತು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿದ ರಾಷ್ಟ್ರೀಯ ಮಹಿಳಾ ಆಯೋಗವು ಕೋಲ್ಕತ್ತಾ ಪೊಲೀಸರಿಗೆ ಮೂರು ದಿನಗಳಲ್ಲಿ ವಿವರವಾದ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.
ಇದನ್ನೂ ಓದಿ: Tigers Death: ಬಂಡಿಪುರದಲ್ಲಿ ಮತ್ತೊಂದು ಹುಲಿ ಶವ ಪತ್ತೆ
ಆರ್‌ಜಿ ಕೆಎಆರ್ ಪ್ರಕರಣ
2024ರ ಆಗಸ್ಟ್ 8 ಮತ್ತು 9ರಂದು ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ಪಡೆಯುತ್ತಿದ್ದ ವೈದ್ಯೆಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿತ್ತು. ಇದು ದೇಶಾದ್ಯಂತ ವೈದ್ಯರ ತೀವ್ರ ಪ್ರತಿಭಟನೆಗೆ ಕಾರಣವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸಂಜಯ್ ರಾಯ್ ನನ್ನು ಬಂಧಿಸಲಾಗಿದ್ದು ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.