Karunadu Studio

ಕರ್ನಾಟಕ

Road Accident: ಕುಣಿಗಲ್‌ನಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು – Kannada News | Road Accident: 4 Killed in Kunigal Bypass


ತುಮಕೂರು: ಜಿಲ್ಲೆಯ ಕುಣಿಗಲ್ ಬೈಪಾಸ್​ನಲ್ಲಿರುವ ಉಗಿಬಂಡಿ ರೆಸ್ಟೋರೆಂಟ್ ಬಳಿ ಭಾನುವಾರ (ಜೂ. 29) ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ (Tumkur News). ಕ್ಯಾಂಟರ್ ಲಾರಿ​ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪತಿ, ಪತ್ನಿ, ಮಗ, ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ (Road Accident). ಮೃತರು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೊಸ್ಟ್​​ನವರು ಎಂದು ತಿಳಿದುಬಂದಿದೆ.

ಕುಣಿಗಲ್ ತಾಲೂಕಿನ ಬಿದನಗೆರೆ ಯುಟರ್ನ ಬಳಿ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಮೃತರನ್ನು ಮಾಗಡಿ ಪಟ್ಟಣದ ಸೀಬೇಗೌಡ (45), ಪತ್ನಿ ಶೋಭಾ (37) ಮಗಳು ದುಂಬಿಶ್ರಿ (21), ಮಗ ಭಾನುಕಿರಣ್ ಗೌಡ (15)ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕುಣಿಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.

ಈ ಸುದ್ದಿಯನ್ನೂ ಓದಿ: Road Accident: ಬೆಂಗಳೂರಿನಲ್ಲಿ ಭೀಕರ ಅಪಘಾತ; ಎರಡು ಬಿಎಂಟಿಸಿ ಬಸ್​ ಮಧ್ಯೆ ಆಟೋ ಅಪ್ಪಚ್ಚಿ, ಇಬ್ಬರ ಸಾವು

ಬೆಂಗಳೂರಿನಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ಟೆಕ್ಕಿ ಬಲಿ

ಬೆಂಗಳೂರು: ರಾಜಧಾನಿಯಲ್ಲಿ ಇತ್ತೀಚೆಗೆ ಮತ್ತೊಂದು ಹಿಟ್ ಆ್ಯಂಡ್ ರನ್ ಘಟನೆ ನಡೆದಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಟೆಕ್ಕಿಯೊಬ್ಬರು ಮೃತಪಟ್ಟಿದ್ದರು. ರಿಂಗ್ ರಸ್ತೆಯ ಕಲ್ಯಾಣ ನಗರದ ಶೋ ರೂಮ್ ಒಂದರ ಬಳಿ ಈ ಘಟನೆ ನಡೆದಿತ್ತು. ಮೃತರನ್ನು ಆಂಧ್ರ ಪ್ರದೇಶದ ಕರ್ನೂಲ್ ಮೂಲದ ಸಲಗುಣ ಪ್ರದೀಪ್ (25) ಎಂದು ಗುರುತಿಸಲಾಗಿದೆ. ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಸಲಗುಣ ಪ್ರದೀಪ್, ನಗರದ ಕಲ್ಕೆರೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.

ಬೈಕ್‌ನಲ್ಲಿ ಕಲ್ಯಾಣನಗರದಲ್ಲಿ ತೆರಳುವಾಗ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಪರಿಣಾಮ ರಸ್ತೆಗೆ ಬಿದ್ದ ಸಲಗುಣ ಪ್ರದೀಪ್ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಮಾರ್ಗ ಮಧ್ಯೆ ಮೃತಪಟ್ಟಿದ್ದರು. ಘಟನಾ ಸ್ಥಳದ ಸಿಟಿಟಿವಿ ದೃಶ್ಯಾವಳಿ ಪರಿಶೀಲಿಸಿ ಡಿಕ್ಕಿ ಹೊಡೆದ ವಾಹನ ಸವಾರನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಬೆಂಗಳೂರಿನ ಬಾಣಸವಾಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »