Karunadu Studio

ಕರ್ನಾಟಕ

Dinesh Gundu Rao: ರಾಜ್ಯದಲ್ಲಿ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳ ಸ್ಥಾಪನೆ: ದಿನೇಶ್ ಗುಂಡೂರಾವ್ – Kannada News | Dinesh Gundu Rao 393 permanent Ashakirana Drishti Kendras established in the state says health minister Dinesh Gundu Rao


ಬೆಂಗಳೂರು: ದೃಷ್ಟಿದೋಷ ನಿವಾರಣೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ‘ಆಶಾಕಿರಣ’ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು, ರಾಜ್ಯದ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳಲ್ಲಿ ನೂತನವಾಗಿ 393 ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao)‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಆಶಾಕಿರಣ ದೃಷ್ಟಿ ಕೇಂದ್ರಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಇದೇ ತಿಂಗಳ 3 ರಂದು ಬುಧವಾರ ಕೇಂದ್ರಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಈ ಮೊದಲು ಆಶಾಕಿರಣ ಯೋಜನೆಯಡಿ ಆಶಾ ಕಾರ್ಯಕರ್ತೆಯರು ಅಭಿಯಾನದ ಮೂಲಕ ಮನೆ ಮನೆಗೆ ತೆರಳಿ ಕಣ್ಣಿನ ತಪಾಸಣೆ ನಡೆಸಿ ಚಿಕಿತ್ಸೆಗೆ ಅನುವಾಗುತ್ತಿದ್ದರು. ನಿಗದಿತ ಸಮಯದಲ್ಲಿ ಅಭಿಯಾನದ ರೀತಿಯಲ್ಲಿ ತಪಾಸಣಾ ಕಾರ್ಯ ನಡೆಯುತ್ತಿತ್ತು. ಇದೀಗ ಸರ್ಕಾರಿ ಆಸ್ಪತ್ರೆಗಳಲ್ಲಿ ಶಾಶ್ವತ ದೃಷ್ಟಿ ಕೇಂದ್ರಗಳನ್ನೇ ಪ್ರಾರಂಭಿಸಲಾಗುತ್ತಿದ್ದು, ನಿರಂತರವಾಗಿ ಕಣ್ಣಿನ ಆರೋಗ್ಯ ಸೇವೆ ಈ ಕೇಂದ್ರಗಳಲ್ಲಿ ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಎಲ್ಲ ಜಿಲ್ಲಾ ಆಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಸೇರಿದಂತೆ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಶಾಶ್ವತ ದೃಷ್ಟಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಈ ಕೇಂದ್ರಗಳಿಗೆ ನೇರವಾಗಿ ಹೋಗಿ ದೃಷ್ಟಿ ತಪಾಸಣೆ ಮಾಡಿಸಿಕೊಳ್ಳಬಹುದಾಗಿರುತ್ತದೆ. ಆಶಾ ಕಾರ್ಯಕರ್ತೆಯರು ಹಾಗೂ ಸಮುದಾಯ ಆರೋಗ್ಯ ಅಧಿಕಾರಿ (CHO) ಅವರ ದಿನನಿತ್ಯದ ಚಟುವಟಿಕೆ ಅಡಿಯಲ್ಲಿ ಮನೆಮನೆಗೆ ಭೇಟಿ ನೀಡಿದಾಗ ಪ್ರಾಥಮಿಕ ದೃಷ್ಟಿ ತಪಾಸಣೆ ಮಾಡಬಹುದಾಗಿರುತ್ತದೆ. ಶಂಕಿತ ಪ್ರಕರಣಗಳು ಕಂಡುಬಂದಲ್ಲಿ ಹೆಚ್ಚಿನ ತಪಾಸಣೆಗೆ ಹತ್ತಿರದ ದೃಷ್ಟಿ ಕೇಂದ್ರಗಳಿಗೆ ಕಳುಹಿಸಿ ಅಗತ್ಯ ಚಿಕಿತ್ಸೆಗೆ ನೆರವಾಗಲಿದ್ದಾರೆ ಎಂದು ತಿಳಿಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) 11 ಆಶಾಕಿರಣ ದೃಷ್ಟಿ ಕೇಂದ್ರಗಳಲ್ಲಿ 5 ಕೇಂದ್ರಗಳು Sight Savers India ಅವರ ಸಿಎಸ್‌ಆರ್ ಸಹಭಾಗಿತ್ವದಲ್ಲಿ ಮಾನವ ಸಂಪನ್ಮೂಲ, ಉಪಕರಣಗಳು ಹಾಗೂ ಕನ್ನಡಕಗಳ ವಿತರಣೆಗಳ ಸೇವೆಗಳನ್ನು ಒದಗಿಸಲು ವ್ಯವಸ್ಥೆ ಮಾಡಲಾಗಿದೆ. OneSight Essilor Luxottica Foundation ಸೇರಿದಂತೆ ಒಟ್ಟು 13 ಅಶಾಕಿರಣ ದೃಷ್ಟಿ ಕೇಂದ್ರಗಳು ವಿವಿಧ ಸಿಎಸ್‌ಆರ್ ಪಾಲುದಾರರ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗಿದೆ ಎಂದರು.

ಈ ಸುದ್ದಿಯನ್ನೂ ಓದಿ | Heart Attack: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳದ ಕುರಿತು ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆ: ಸಿಎಂ

ಆಶಾಕಿರಣ ಕಾರ್ಯಕ್ರಮದ ಎರಡು ಹಂತಗಳಲ್ಲಿ 8 ಜಿಲ್ಲೆಗಳಲ್ಲಿ ಒಟ್ಟು 1.40 ಕೋಟಿ ಜನರು ಪ್ರಾಥಮಿಕ ನೇತ್ರ ತಪಾಸಣೆ ಒಳಗಾಗಿದ್ದು, ಇವರಲ್ಲಿ 24.50 ಲಕ್ಷ ಜನರಿಗೆ ಹೆಚ್ಚಿನ ನೇತ್ರ ತಪಾಸಣೆಗೆ ಸಂಬಂಧಿಸಿದಂತೆ ತೊಂದರೆಗಳಿರುವುದು ಪತ್ತೆಯಾಗಿ, ಇವರನ್ನು ದ್ವಿತೀಯ ಹಂತದ ನೇತ್ರ ತಪಾಸಣೆಗೆ ಒಳಪಡಿಸಲಾಗಿರುತ್ತದೆ. 4.3 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಿಸಲಾಗಿದ್ದು ಉಳಿದ ಕನ್ನಡಕಗಳನ್ನು ಆಶಾಕಿರಣ ದೃಷ್ಟಿ ಕೇಂದ್ರಗಳಲ್ಲಿ ಇರಿಸಲಾಗಿದೆ. ಹಾಗು ಒಟ್ಟು 1.05 ಲಕ್ಷ ಜನರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »