Karunadu Studio

ಕರ್ನಾಟಕ

ವಿಶೇಷ ಸಚಿವ ಸಂಪುಟ ಸಭೆಯ ಸ್ಥಳ ಪರಿಶೀಲನೆ ನಡೆಸಿದ ಸಚಿವ ಡಾ.ಎಂ.ಸಿ.ಸುಧಾಕರ್ – Kannada News | Minister Dr. M.C. Sudhakar inspects the venue of the special cabinet meeting


ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಜುಲೈ 2ರಂದು 2025ನೇ ಸಾಲಿನ ರಾಜ್ಯ ಸಚಿವ ಸಂಪುಟದ 14ನೇ ಸಭೆ ನಡೆಯಲಿದ್ದು, ಎಲ್ಲಾ ಅಗತ್ಯ ಸಿದ್ದತೆ ಗಳನ್ನು ಮಾಡಿಕೊಳ್ಳಲಾಗಿದ್ದು, ಈ ಸಭೆ ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂ ತರ ಜಿಲ್ಲೆಗಳ ಅಭಿವೃದ್ಧಿಯ ಕುರಿತು ವಿಶೇಷ ಬೆಳಕು ಚೆಲ್ಲುವ ನಿರೀಕ್ಷೆ ಇದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ನಂದಿಗಿರಿಧಾಮದ ಮಯೂರ ಸಭಾಂಗಣದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯುವ ಹಿನ್ನೆಲೆ ಯಲ್ಲಿ ಜಿಲ್ಲಾಡಳಿತದ ಅಧಿಕಾರಿಗಳ ತಂಡದೊಂದಿಗೆ ಪೂರ್ವ ಸಿದ್ದತೆಗಳ ಪರಿಶೀಲನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಇದನ್ನೂ ಓದಿ: Chikkaballapur News: M.Sc PHYSICSನಲ್ಲಿ ಆರು ಚಿನ್ನದ ಪದಕ ಪಡೆದು ಮೊದಲ ರ‍್ಯಾಂಕ್ ಪಡೆದ ರೂಫಿಯಾ.ಕೆ.ಎಂ

ಗುಲಬರ್ಗಾ, ಚಾಮರಾಜನಗರ ಜಿಲ್ಲೆಗಳಲ್ಲಿ ಸಚಿವ ಸಂಪುಟ ಸಭೆ ನಡೆದ ನಂತರ ಚಿಕ್ಕಬಳ್ಳಾಪುರ ಜಿಲ್ಲೆಯ ಐತಿಹಾಸಿಕ ನಂದಿಗಿರಿಧಾಮದಲ್ಲಿಯೂ ಸಚಿವ ಸಂಪುಟ ಸಭೆ ನಡೆಸಬೇಕು ಎಂದು ಮುಖ್ಯಮಂತ್ರಿಗಳಿಗೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಉಸ್ತುವಾರಿ ಸಚಿವರೆಲ್ಲರೂ ಮನವಿ ಮಾಡಿದ್ದೆವು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಮುಖ್ಯ ಮಂತ್ರಿಗಳು ಜೂ.೧೯ ರಂದು ದಿನಾಂಕ ನೀಡಿದ್ದರು. ಸಭೆಯೂ ನಿಗದಿಯಾಗಿತ್ತು. ಆದರೆ, ಈ ಭಾಗದ ಜಿಲ್ಲೆಗಳ ಜನರ ನಿರೀಕ್ಷೆಗೆ ಪೂರಕವಾಗಿ ಯೋಜನೆಗಳ ಸಿದ್ದತೆ ಆಗಿಲ್ಲದ ಹಾಗೂ ಹಣಕಾಸು ಇಲಾಖೆಯ ಕಾರ್ಯ ಒತ್ತಡದಿಂದ ಪೂರಕ ತಯಾರಿಗಳು ಆಗದ ಕಾರಣ ಜೂ.೧೯ ರಂದು ನಿಗದಿಯಾಗಿದ್ದ ಸಭೆ ನಂದಿ ಗಿರಿಧಾಮದಿಂದ ಬೆಂಗಳೂರಿನ ವಿಧಾನಸೌಧಕ್ಕೆ ಸ್ಥಳಾಂತರವಾಗಿತ್ತು ಎಂದರು.

ಮುಖ್ಯಮಂತ್ರಿಗಳು ಮತ್ತೆ ದಿನಾಂಕ ನೀಡಿ, ಜುಲೈ ೦೨ ರಂದು ಅಂದರೆ ಇಂದು ಬುಧವಾರ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಜಿಲ್ಲಾಡಳಿತ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ. ಮೂರೂ ಜಿಲ್ಲೆಗಳ ಹಲವು ನಿರೀಕ್ಷೆಗಳು ಈ ಬಾರಿಯ ಸಚಿವ ಸಂಪುಟ ಸಭೆಯಿಂದ ಗರಿಗೆದರಿವೆ. ನಾಳೆ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳುವ ಮಹತ್ವದ ತೀರ್ಮಾನಗಳು ಈ ಭಾಗದ ಜನರಲ್ಲಿ ಹಲವು ಭರವಸೆಗಳನ್ನು ಹುಟ್ಟು ಹಾಕಿವೆ. ಮುಖ್ಯಮಂತ್ರಿಗಳು ಪ್ರಕಟಿಸುವ ನಿರ್ಧಾರಗಳು ಮೂರು ಜಿಲ್ಲೆಗಳ ಅಭಿವೃದ್ಧಿ ದೃಷ್ಟಿಯಿಂದ ಮಹತ್ವದ್ದಾಗಿದ್ದು, ವಿಶೇಷವಾಗಿ ಬೆಳಕು ಚೆಲ್ಲಲಿದೆ ಎಂದು ಆಶಾವಾದ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳು ಬೆಂಗಳೂರಿನ ನಿವಾಸದಿಂದ ರಸ್ತೆ ಮಾರ್ಗದ ಮೂಲಕ ಆಗಮಿಸಿ ಮೊದಲಿಗೆ ಪುರಾಣ ಮತ್ತು ಇತಿಹಾಸ ಪ್ರಸಿದ್ಧ ನಂದಿ ಗ್ರಾಮದ ಭೋಗ ನಂದೀಶ್ವರ ದೇವಾಲಯಕ್ಕೆ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಭೇಟಿ ನೀಡಿ,  ಅಲ್ಲಿ ಪೂಜೆ ಸಲ್ಲಿಸಿದ ನಂತರ ಕೆಎಸ್ಸಾರ್ಟಿಸಿ ಬಸ್ ಮೂಲಕವಾಗಿ ನಂದಿಗಿರಿಧಾಮಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ ೧೨ ಕ್ಕೆ  ಸಚಿವ ಸಂಪುಟ ಸಭೆ ಆರಂಭವಾಗಲಿದೆ. ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ನಂದಿ ಗ್ರಾಮದ ಭೋಗ ನಂದೀಶ್ವರ ದೇವಾಲಯ ಮತ್ತು  ನಂದಿಗಿರಿಧಾಮಕ್ಕೆ ಖಾಸಗಿ ವ್ಯಕ್ತಿಗಳು ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಅಧಿಕೃತ ಅನುಮತಿ ಪತ್ರ ಹೊಂದಿರುವ ವ್ಯಕ್ತಿಗಳು ಮತ್ತು ವಾಹನಗಳಿಗೆ ಮಾತ್ರ ಪ್ರವೇಶದ ಅವಕಾಶವಿರುತ್ತದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಡಾ.ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.



Source link

ADMIN

About Author

Leave a comment

Your email address will not be published. Required fields are marked *

You may also like

ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
ಕರ್ನಾಟಕ

Microsoft: Empowering the Digital World

Microsoft is a global technology company known for shaping the modern digital experience. From its iconic Windows operating system to
Translate »